ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಲಿನೊಂದಿಗೆ ಈ ವಸ್ತು ಬೆರೆಸಿ ಸೇವಿಸಿ

First Published Apr 22, 2021, 12:13 PM IST

ಕೊರೊನಾದ ಹೊಸ ಅಲೆಗೆ ದೇಶವೇ ಬೆಚ್ಚಿ ಬಿದ್ದಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ವೈರಸ್‌ನಿಂದಾಗಿ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪರದಾಡುತ್ತಿದ್ದಾರೆ. ದೇಶದಲ್ಲಿ ತ್ವರಿತ ಮತ್ತು ಆಕ್ರಮಣಕಾರಿಯಾಗಿ ಬೆಳೆಯುತ್ತಿರುವ ಪ್ರಕರಣಗಳ ನಡುವೆ ಜನರು ತಮ್ಮನ್ನು ರಕ್ಷಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮಾಸ್ಕ್ ಧರಿಸಲು ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕ್ರಮಗಳನ್ನು ಅನುಸರಿಸುವ ಬಗ್ಗೆ ಕಳೆದ ಒಂದು ವರ್ಷದಿಂದ ವಿಶ್ವದಾದ್ಯಂತ ಚರ್ಚಿಸಲಾಗಿದೆ. ಜನರು ತಮ್ಮ ರೋಗನಿರೋಧಕ ಶಕ್ತಿಯನ್ನು ಬಲವಾಗಿಡಲು ಮತ್ತು ಕೊರೊನಾ ಸೋಂಕು ನಿವಾರಿಸಲು ವಿವಿಧ ಸಲಹೆಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಎಲ್ಲರೂ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವೆಡೆಗೆ ಗಮನ ಹರಿಸಬೇಕು. ಹೇಗೆ?