ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆಸ್ತಿ ವಿವರ ಸಾರ್ವಜನಿಕರಿಗೆ ಲಭ್ಯ!
ಸುಪ್ರೀಂಕೋರ್ಟ್‌ನ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕವಾಗಿ ಘೋಷಿಸಲು ನಿರ್ಧರಿಸಿದ್ದಾರೆ. ಈ ಮಾಹಿತಿಯನ್ನು ಸುಪ್ರೀಂಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಗುವುದು.

ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ವಹಿಸಿಕೊಂಡ ಬಳಿಕ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕವಾಗಿ ಘೋಷಣೆ ಮಾಡಲು ಸಿಜೆಐ ಸೇರಿದಂತೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರು ನಿರ್ಧರಿಸಿದ್ದಾರೆ.
ಗುರುವಾರ ಇಲ್ಲಿ ಸಭೆ ಸೇರಿದ್ದ ಸುಪ್ರೀಂಕೋರ್ಟ್‌ನ ಎಲ್ಲಾ ನ್ಯಾಯಾಧೀಶರನ್ನು ಒಳಗೊಂಡ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಿದೆ. , ಆಸ್ತಿ ವಿವರಗಳ ಬಹಿರಂಗದ ಜೊತೆಗೆ ಅದರ ಅಂಕಿ ಅಂಶಗಳನ್ನು ಸುಪ್ರಿಂಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಗುವುದು.
‘ನ್ಯಾಯಾಧೀಶರು ಅಧಿಕಾರ ವಹಿಸಿಕೊಳ್ಳುವಾಗ ಮತ್ತು ಯಾವುದೇ ಸ್ವರೂಪದ ಆಸ್ತಿಯನ್ನು ಖರೀದಿಸಿದರೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ತಮ್ಮ ಆಸ್ತಿ ವಿವರವನ್ನು ನೀಡಬೇಕು. ಇನ್ನು ವೆಬ್‌ಸೈಟ್‌ನಲ್ಲಿ ಆಸ್ತಿಗಳ ಘೋಷಣೆ ಮಾಡುವುದು ಸ್ವಯಂಪ್ರೇರಿತ ಆಧಾರದ ಮೇಲೆ ಇರುತ್ತದೆ’ ಎಂದು ಸುಪ್ರೀಂ ಕೋರ್ಟ್ ವೆಬ್‌ಸೈಟ್ ತಿಳಿಸಿದೆ
ಇತ್ತೀಚೆಗೆ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಮನೆಯಲ್ಲಿ ಅರೆಸುಟ್ಟ ನೋಟುಗಳು ಪತ್ತೆಯಾಗಿದ್ದವು. ಸುಟ್ಟ ನೋಟುಗಳು ಪತ್ತೆಯಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.. ಈ ಕುರಿತು ಲೋಕಸಭೆಯಲ್ಲಿ ಚರ್ಚೆಯಾಗಬೇಕು ಎಂದು ಕಾಂಗ್ರೆಸ್ ಸದಸ್ಯ ಹಿಬಿ ಇಡೆನ್ ಆಗ್ರಹಿಸಿದ್ದರು.
ಇತ್ತೀಚೆಗೆ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಮನೆಯಲ್ಲಿ ಅರೆಸುಟ್ಟ ನೋಟುಗಳು ಪತ್ತೆಯಾಗಿದ್ದವು. ಸುಟ್ಟ ನೋಟುಗಳು ಪತ್ತೆಯಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.. ಈ ಕುರಿತು ಲೋಕಸಭೆಯಲ್ಲಿ ಚರ್ಚೆಯಾಗಬೇಕು ಎಂದು ಕಾಂಗ್ರೆಸ್ ಸದಸ್ಯ ಹಿಬಿ ಇಡೆನ್ ಆಗ್ರಹಿಸಿದ್ದರು.
ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು, ಈ ಘಟನೆಯಿಂದ ಇಡೀ ದೇಶ ಆಘಾತಕ್ಕೊಳಗಾಗಿದೆ. ಸುಪ್ರೀಂಕೋರ್ಟ್ ಈ ಕುರಿತು ತನಿಖೆಗೆ ಆದೇಶಿಸಿದೆ. ನ್ಯಾಯಾಂಗವು ಪ್ರಜಾಪ್ರಭುತ್ವದ ಪ್ರಮುಖ ಆಧಾರ ಸ್ತಂಭಗಳಲ್ಲೊಂದು. ಇದು ಭ್ರಷ್ಟಾಚಾರದಿಂದ ಮುಕ್ತವಾಗಿರಬೇಕಿದೆ. ಹೀಗಾಗಿ ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಉತ್ತರದಾಯಿತ್ವ, ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಂಸತ್ತಿನಲ್ಲಿ ಚರ್ಚೆಯ ಅಗತ್ಯವಿದೆ ಎಂದು ಹೇಳಿದರು. ಈ ಬೇಡಿಕೆಗೆ ಹಲವು ಕಾಂಗ್ರೆಸ್ ನಾಯಕರು ದನಿಗೂಡಿಸಿದರು.