ಬಿಹಾರ ಚುನಾವಣೆ ರಣಕಣ: ಚಿರಾಗ್ ಪಾಸ್ವಾನ್ ಮುಂದಿಟ್ರು ಒಂದು ಬೇಡಿಕೆ!
Chirag Paswan Demand: ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಧ್ಯಮಗಳ ವರದಿಗಳನ್ನು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ತಳ್ಳಿಹಾಕಿದ್ದಾರೆ.

ಬಿಹಾರದ ವಿಧಾನಸಭಾ ಚುನಾವಣೆ
ಪಾಟ್ನಾ: ಬಿಹಾರದ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕೇಂದ್ರ ಸಚಿವ ಚಿರಾಗ್ ಪಾಸ್ವನ್ ನೇತೃತ್ವದ ಲೋಕ್‌ಜನಶಕ್ತಿ ಪಾರ್ಟಿ ಬಿಜೆಪಿಯೊಂದಿಗೆ ಹೋಗುತ್ತಾ ಅಥವಾ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಾ ಎಂಬ ಪ್ರಶ್ನೆಗಳು ಮುನ್ನಲೆಗೆ ಬಂದಿವೆ. ಕೆಲವು ಮಾಧ್ಯಮಗಳ ಪ್ರಕಾರ, ಚಿರಾಗ್ ಪಾಸ್ವಾನ್ 40ಕ್ಕೂ ಅಧಿಕ ಕ್ಷೇತ್ರಗಳನ್ನು ಕೇಳುತ್ತಿದ್ದಾರೆ ಎನ್ನಲಾಗಿದೆ.
ಚಿರಾಗ್ ಪಾಸ್ವಾನ್
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಚಿರಾಗ್ ಪಾಸ್ವಾನ್, ಕಳೆದ ಎರಡ್ಮೂರು ದಿನಗಳಿಂದ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಯನ್ನು ಗಮನಿಸುತ್ತಿದ್ದೇನೆ. ಸಭೆಯಲ್ಲಿ ಚಿರಾಗ್ ಮುನಿಸಿಕೊಂಡಿದ್ದಾರೆ? ಕ್ಷೇತ್ರಗಳ ಬಗ್ಗೆ ಪಟ್ಟು ಸಡಿಸುತ್ತಿಲ್ಲ? ಸಭೆಯಿಂದ ಹೊರ ಬಂದ್ರು ಎಂಬಿತ್ಯಾದಿ ಸುದ್ದಿಗಳು ಟಿವಿಯಲ್ಲಿ ಬರುತ್ತಿದೆ. ಆದ್ರೆ ಇದ್ಯಾವುದು ಸತ್ಯವಲ್ಲ. ನಿಮ್ಮ ಮೂಲಗಳಿಂದ ಬರುತ್ತಿರುವ ಮಾಹಿತಿ ಸುಳ್ಳು ಎಂದು ಮಾಧ್ಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕೃತ ಮಾಹಿತಿ ನೀಡುವೆ
ಮಾತುಕತೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಸಭೆಯಲ್ಲಿ ಅಧಿಕೃತವಾದ ಬಳಿಕ ನಾನೇ ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇನೆ. ಸರಿಯಾದ ಸಮಯದಲ್ಲಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತೆ ಎಂಬ ನಂಬಿಕೆಯನ್ನು ಹೊಂದಿದ್ದೇನೆ ಎಂದು ಚಿರಾಗ್ ಪಾಸ್ವಾನ್ ತಿಳಿಸಿದರು.
ಇದನ್ನೂ ಓದಿ: ಬಿಹಾರ ಗೆಲುವಿಗೆ ಕಾಂಗ್ರೆಸ್‌ನಿಂದ 'ದಶ'ಸೂತ್ರ: ಇದು 5+1+4=10 ಲೆಕ್ಕಾಚಾರ
ಬೇಡಿಕೆ ಏನು?
ಚರ್ಚೆ ಮುಕ್ತಾಯ ಬಳಿಕ ನಾನೇ ನಿಮಗೆ ತಿಳಿಸುವೆ. ಅಧಿಕೃತ ಮಾಹಿತಿ ಸಿಗುವರೆಗೂ ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಬೇಡಿ. ನನ್ನದು ಒಂದೇ ಬೇಡಿಕೆಯಾಗಿದೆ. ಅದು ಮೊದಲು ಬಿಹಾರ ಮತ್ತು ಬಿಹಾರಿಗಳಿಗೆ ಪ್ರಾಶಸ್ತ್ಯ ನೀಡಬೇಕು ಅನ್ನೋದು ನನ್ನ ಬೇಡಿಕೆ ಎಂದರು. ಯಾವುದೇ ಕ್ಷೇತ್ರ ಅಥವಾ ಯಾವುದೇ ಹುದ್ದೆಗಾಗಿ ಡಿಮ್ಯಾಂಡ್ ಮಾಡುತ್ತಿಲ್ಲ ಎಂದು ಮಾಧ್ಯಮಗಳಿಗೆ ಚಿರಾಗ್ ಪಾಸ್ವಾನ್ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಎನ್‌ಡಿಎ ತೊರೆದು ಪಿಕೆ ಜತೆ ಚಿರಾಗ್ ಪಾಸ್ವಾನ್ ಮೈತ್ರಿ?
ಎರಡು ಹಂತದಲ್ಲಿ ಮತದಾನ
2020ರಲ್ಲಿ ಮೂರು ಹಂತದ ಮತದಾನ ನಡೆದಿತ್ತು. ಈ ಬಾರಿಯ ಚುನಾವಣೆ ಎರಡು ಹಂತದಲ್ಲಿ ನಡೆಯಲಿದೆ. ನವೆಂಬರ್ 6 ಮತ್ತು 11ರಂದು ಮತದಾನ ನಡೆಯಲಿದ್ದು, ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ: Bihar Assembly Poll: ಜಂಪಿಂಗ್ ಸ್ಟಾರ್, ಭಂಟನ ಬಂಡಾಯ: ಬಿಹಾರದಲ್ಲಿ ಪ್ರಧಾನಿ ಮೋದಿಗೆ ಢವ ಢವ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

