ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿಗೆ ಬುರ್ಖಾ ಸಂಕಷ್ಟ; ಆಯೋಗಕ್ಕೆ ಪತ್ರ!
First Published Dec 18, 2020, 5:36 PM IST
ಪಶ್ಚಿಮ ಬಂಗಳಾ ಚುನಾವಣೆಗೆ ಬಿಜೆಪಿ ತಯಾರಿ ಆರಂಭಿಸಿದೆ. ಈ ಬಾರಿ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ವಿಶ್ವಾಸದಲ್ಲಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ನಡೆಯುವ ಅಕ್ರಮಗಳಿಂದ ಬಿಜೆಪಿಗೆ ಸೋಲಾಗಬಾರದು ಎಂದು ಈಗಲೇ ಕಾರ್ಯಪ್ರವೃತ್ತವಾಗಿದೆ. ಚುನಾವಣಾ ಆಯೋಗಕ್ಕೆ ಬಿಜೆಪಿ ಪತ್ರ ಬರೆದಿದ್ದು, ಬುರ್ಖಾ ಕುರಿತು ಆತಂಕ ವ್ಯಕ್ತಪಡಿಸಿದೆ.

2021ರಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ತಯಾರಿ ಆರಂಭಿಸಿದೆ. ರ್ಯಾಲಿ, ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ಸೇರಿದಂತೆ ಹಲವು ಕಾರಣಗಳಿಂದ ಬಂಗಾಳದಲ್ಲಿ ಬಿಜೆಪಿ ಹೊಸ ಅಲೆ ಶುರುಮಾಡಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ಗೆ ವಿರುದ್ಧ ಭರ್ಜರಿ ಗೆಲುವಿನ ವಿಶ್ವಾಸದಲ್ಲಿರು ಬಿಜೆಪಿಗೆ ಬುರ್ಖಾ ಆತಂಕ ಎದುರಾಗಿದೆ. ಇದಕ್ಕಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?