ದೆಹಲಿ ಸಿಜೆಪಿ ಪ್ರತಿಭಟನೆ: ರಾತ್ರಿ ಕೆನಾಟ್ ಪ್ಲೇಸ್ ಬಳಿ ನಡೆದಿದ್ದೇನು? ಪಿಎಸ್‌ಐಗೆ ಗಾಯ
ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಕೆನಾಟ್ ಪ್ಲೇಸ್ ಬಳಿ ನಡೆದ ಕಲ್ಲು ತೂರಾಟದಲ್ಲಿ ಪಿಎಸ್‌ಐ ಒಬ್ಬರು ಗಾಯಗೊಂಡಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದ್ದು, ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದಾರೆ.

ಟಾಲ್‌ಸ್ಟಾಯ್ ಮಾರ್ಗದ ಕನ್ನಾಟ ಪ್ಯಾಲೇಸ್ ಬಳಿ ಕಲ್ಲು ತೂರಾಟ
ನವದೆಹಲಿ: ಜಂತರ್ ಮಂತರ್ ಮೈದಾನದಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆ ಮುಂದುವರಿದಿದೆ. ಬುಧವಾರ ರಾತ್ರಿ ಸುಮಾರು 8.30ರ ವೇಳೆಗೆ ಟಾಲ್‌ಸ್ಟಾಯ್ ಮಾರ್ಗದ ಕೆನಾಟ್ ಪ್ಲೇಸ್ ಬಳಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆದಿದೆ.
ಪಿಎಸ್‌ಐ ವಿವೇಕ್ ಭಗತ್ ಗಾಯ
ಈ ಘಟನೆಯಲ್ಲಿ ಕನ್ನಾಟ್ ಪಿಎಸ್‌ಐ ವಿವೇಕ್ ಭಗತ್ ಗಾಯಗೊಂಡಿದ್ದಾರೆ. ಕೂಡಲೇ ಪೊಲೀಸರು ವಿವೇಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಮಯದಲ್ಲಿ ಪರಿಸ್ಥಿತಿ ಉದ್ವಿಘ್ನವಾಗಿದ್ದು, ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಈ ಘಟನೆಯಲ್ಲಿ ಕಲ್ಲು, ಬಾಟಲಿಗಳನ್ನು ತೂರಾಟ ನಡೆಸಲಾಗಿದೆ
ಇಂಟರ್‌ನೆಟ್ ಸ್ಥಗಿತ
ಉತ್ತ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ನಮ್ಮ ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಅಹಿಂಸಾತ್ಮಕ ರೂಪದಲ್ಲಿಯೇ ಮುಂದುವರಿಯಲಿದೆ ಎಂದಿದ್ದಾರೆ. ಹಾಗೆಯೇ ಪ್ರತಿಭಟನಾ ಸ್ಥಳದ ವ್ಯಾಪ್ತಿಯಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ದೀಪ್ಕೆ ಆರೋಪಿಸಿದ್ದಾರೆ. ಸರ್ಕಾರ ನಮ್ಮ ಚಳುವಳಿ ಮೇಲೆ ಮತ್ತೊಂದು ದಮನಕಾರಿ ಕ್ರಮ ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ ಎಂದು ಅಭಿಜಿತ್ ದೀಪ್ಕೆ ಗಂಭೀರ ಆರೋಪವನ್ನು ಮಾಡಿದ್ದಾರೆ.
ದೆಹಲಿಯ 16 ಮೆಟ್ರೋ ನಿಲ್ದಾಣ ಬಂದ್
ಮತ್ತೊಂದೆಡೆ ದೆಹಲಿಯ ಜಂತರ್ ಮಂತರ್ ಅನಾಮಧೇಯರು ಬುಕ್ ಮಾಡಿರುವ ಆಹಾರ ನಿರಂತರವಾಗಿ ಬರುತ್ತಿದೆ. ಮುಂಬೈ, ಕೋಲ್ಕತ್ತಾ ಸೇರಿದಂತೆ ದೂರದ ಜನರು ಪ್ರತಿಭಟನೆಯ ಬೆಂಬಲವಾಗಿ ಜಂತರ್ ಮಂತರ್ ನಲ್ಲಿರುವ ವಿದ್ಯಾರ್ಥಿಗಳಿಗೆ ಆಹಾರ ಬುಕ್ ಮಾಡಿ ಕಳುಹಿಸುತ್ತಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅಗುತ್ತಿವೆ. ಇತ್ತ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿಯ 16 ಮೆಟ್ರೋ ನಿಲ್ದಾಣಗಳನ್ನು ಇಂದೂ ಸಹ ಬಂದ್ ಮಾಡಲಾಗಿದೆ.
ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್
ಉಪವಾಸ ಸತ್ಯಾಗ್ರಹದಲ್ಲಿರುವ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ಮಾಡುವುದಿಲ್ಲ ಅಥವಾ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಭರವಸೆ ನೀಡಬೇಕು. ಸರ್ಕಾರದಿಂದ ಈ ಭರವಸೆ ಸಿಕ್ಕರ ಉಪವಾಸ ಅಂತ್ಯಗೊಳಿಸೋದಾಗಿ ಸೋನಂ ವಾಂಗ್ಚುಕ್ ಹೇಳಿದ್ದಾರೆ. ಇತ್ತ ಬಾಲಿವುಡ್ ನಟ ಸಲ್ಮಾನ್ ಖಾನ್ ಸಹ ಪ್ರತಿಭಟನೆಗೆ ಬೆಂಬಲ ಸೂಚಿಸಿ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

