ಕೊರೋನಾ ಲಸಿಕೆ ವಿತರಣೆಯಲ್ಲಿ ದಾಖಲೆ ಬರೆದ ಭಾರತ; 1 ಕೋಟಿ ಮಂದಿಗೆ ವ್ಯಾಕ್ಸಿನ್!
ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಇತರ ಎಲ್ಲಾ ದೇಶಗಳಗಿಂತ ಮುಂಚೂಣಿಯಲ್ಲಿದೆ. ಲಸಿಕೆ ವಿತರಣೆ, ವಿದೇಶಗಳಿಗೆ ಲಸಿಕೆ ಪೂರೈಕೆಯಲ್ಲೂ ಭಾರತ ಅಗ್ರಸ್ಥಾನದಲ್ಲಿದೆ. ಇದೀಗ ಮತ್ತೊಂದು ದಾಖಲೆ ಬರೆದಿದೆ. ಬರೋಬ್ಬರಿ 1 ಕೋಟಿ ಮಂದಿಗೆ ಕೊರೋನಾ ಲಸಿಕೆ ನೀಡಿದ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
ಭಾರತದಲ್ಲಿ ಮೊದಲ ಹಂತದ ಕೊರೋನಾ ಲಸಿಕೆ ವಿತರಣೆ ಭರ್ಜರಿಯಾಗಿ ನಡೆಯುತ್ತಿದೆ. ಜನವರಿ 16 ರಿಂದ ಆರಂಭಗೊಂಡಿರುವ ಲಸಿಕೆ ವಿತರಣೆಯಲ್ಲಿ ಭಾರತ ಅಭೂತಪೂರ್ವ ಯಶಸ್ಸು ಸಾಧಿಸಿದೆ.
ಆರೋಗ್ಯ ಕಾರ್ಯಕರ್ತರು, ಫ್ರಂಟ್‌ಲೈನ್ ವರ್ಕಸ್ ಸೇರಿದಂತೆ ಬರೋಬ್ಬರಿ 1,01,88,007 ಮಂದಿಗೆ ಲಸಿಕೆ ನೀಡಲಾಗಿದೆ. ಈ ಮೂಲಕ 1 ಕೋಟಿ ಗಡಿ ದಾಟಿದ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
ಗರಿಷ್ಠ ಲಸಿಕೆ ನೀಡಿದ ದೇಶಗಳ ಪೈಕಿ ಭಾರತ ಮೂರನೇ ಸ್ಥಾನ ಪಡೆದಿದೆ. ಮೊದಲ ಸ್ಥಾನದಲ್ಲಿ ಅಮೇರಿಕ ಹಾಗೂ ಎರಡನೇ ಸ್ಥಾನದಲ್ಲಿ ಲಂಡನ್ ವಿರಾಜಮಾನವಾಗಿದೆ.
ಅಮೆರಿಕ ಈಗಾಗಲೇ 5.5 ಕೋಟಿ ಮಂದಿಗೆ ಲಸಿಕೆ ನೀಡಿದ್ದರೆ, UKಯಲ್ಲಿ 16.2 ಮಿಲಿಯನ್ ಡೋಸೇಜ್ ನೀಡಲಾಗಿದೆ. ಭಾರತ 3ನೇ ಸ್ಥಾನದಲ್ಲಿದೆ.
ಅಮೆರಿಕ ಹಾಗೂ ಬ್ರಿಟನ್ 60 ದಿನದಲ್ಲಿ 1 ಕೋಟಿ ಲಸಿಕೆ ಗಡಿ ದಾಟಿದೆ. ಭಾರತದ ಈ ಸಾಧನೆಯನ್ನು ಕೇವಲ 32 ದಿನದಲ್ಲಿ ಮಾಡಿದೆ. ಈ ಮೂಲಕ ಭಾರತದ ಲಸಿಕೆ ವಿತರಣೆಯನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ.
ಭಾರತದಲ್ಲಿ ಕೊರೋನಾ ಬಾಧಿತರ ಸಂಖ್ಯೆ 1,09,63,394. ಇದರಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 1,39,542 ಆಗಿದ್ದರೆ, 1,06,67,741ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಭಾರತದಲ್ಲಿ ಕೊರೋನಾ ವೈರಸ್ ತಗುಲಿ ಸಾವನ್ನಪ್ಪಿದವರ ಸಂಖ್ಯೆ 1,56,111. ಇನ್ನು ಕಳೆದ 24 ಗಂಟೆಯಲ್ಲಿ 97 ಮಂದಿ ಕೊರೋನಾ ವೈರಸ್‌ಗೆ ಬಲಿಯಾಗಿದ್ದಾರೆ.
ಭಾರತದಲ್ಲಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿತೆ ವಿತರಿಸಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಉಚಿತವಾಗಿ ನೀಲಾಗುತ್ತಿದೆ. ಮಾರ್ಚ್ ತಿಂಗಳಿನಿಂದ 50 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಿಕೆ ಆರಂಭಗೊಳ್ಳಲಿದೆ.