ಮಾ.1 ರಿಂದ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಲಭ್ಯ; ಬೆಲೆ ಗೊಂದಲಕ್ಕೆ ತೆರೆ ಎಳೆದ ಸರ್ಕಾರ!
ಕೊರೋನಾ ವೈರಸ್ 2ನೇ ಅಲೆ ಆವರಿಸಿರುವ ಕಾರಣ ಇದೀಗ ಲಸಿಕೆ ಬೇಡಿಕೆ ಹೆಚ್ಚಾಗುತ್ತಿದೆ. ಮಾರ್ಚ್ 1 ರಿಂದ ಭಾರತದಲ್ಲಿ 2ನೇ ಹಂತದ ಕೊರೋನಾ ಲಸಿಕೆ ವಿತರಣೆ ಆರಂಭಗೊಳ್ಳಲಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ಲಭ್ಯವಾಗಲಿದೆ. ಆದರೆ ಬೆಲೆ ಕುರಿತು ಹಲವು ಸುಳ್ಳು ಸುದ್ಧಿಗಳು ಹರಿದಾಡುತ್ತಿದೆ. ಇದಕ್ಕೆ ಸರ್ಕಾರ ತೆರೆ ಎಳೆದಿದೆ.
ಜನವರಿ 16 ರಿಂದ ಭಾರತದಲ್ಲಿ ಕೊರೋನಾ ಲಸಿತೆ ವಿತರಣೆ ಕಾರ್ಯ ಆರಂಭಗೊಂಡಿದೆ. ಆರಂಭಿಕ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಕೊರೋನಾ ವಾರಿಯರ್ಸ್‌ಗೆ ಲಸಿಕೆ ನೀಡಲಾಗುತ್ತಿದೆ.
ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟ ಹಾಗೂ 45 ವರ್ಷ ಮೇಲ್ಪಟ್ಟ ಆರೋಗ್ಯ ಸಮಸ್ಸೆ ಎದುರಿಸುತ್ತಿರುವವರಿಗೆ ಲಸಿಕೆ ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ.
ಸರ್ಕಾರಿ ಹಾಗೂ ಖಾಸಗಿ ಕೇಂದ್ರಗಳಲ್ಲಿ ಮಾರ್ಚ್ 1 ರಿಂದ ಕೊರೋನಾ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದರ ನಡುವೆ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಬೆಲೆ ಕುರಿತು ಗೊಂದಲಗಳು ಸೃಷ್ಟಿಯಾಗಿದೆ.
ಚುನಾವಣೆ ಎದುರಿಸುತ್ತಿರುವ ಕೆಲ ರಾಜ್ಯ ಸರ್ಕಾರಗಳು ಉಚಿತ ಕೊರೋನಾ ಲಸಿಕೆ ನೀಡುವುದಾಗಿ ಘೋಷಿಸಿದೆ. ಇನ್ನು ಗುಜರಾತ್ ಸರ್ಕಾರ ಖಾಸಗಿ ಕೇಂದ್ರಗಳಲ್ಲಿ ಕೊರೋನಾ ಲಸಿಕೆ ಬೆಲೆ 250 ರೂಪಾಯಿ ಎಂದು ಸ್ಪಷ್ಟಪಡಿಸಿದೆ.
ಸರ್ಕಾರಿ ಕೇಂದ್ರಗಳಲ್ಲಿ ನೀಡುವು ಲಸಿಕೆ ಉಚಿತವಾಗಿದೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಬೆಲೆ 250 ರೂಪಾಯಿ ನಿಗದಿಪಡಿಸಲಾಗಿದೆ ಎಂದು ಗುಜರಾತ್ ಉಪಮುಖ್ಯಂತ್ರಿ ನಿತಿನ್ ಪಟೇಲ್ ಹೇಳಿದ್ದಾರೆ.
ರಾಜ್ಯದಿಂದ ರಾಜ್ಯಕ್ಕೆ ಕೊರೋನಾ ಲಸಿಕೆ ಬೆಲೆಯಲ್ಲಿ ವ್ಯತ್ಯಾಸವಾಗಲಿದೆ. ಈ ಕುರಿತು ಆಯಾ ರಾಜ್ಯ ಸರ್ಕಾರಗಳು ನಿರ್ಧಾರ ಕೈಗೊಳ್ಳಲಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನರಿಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಹೇಳಿದ್ದಾರೆ.