CM ಜೊತೆ ಮೋದಿ ಕೊರೋನಾ ಸಭೆಗೂ ಮುನ್ನ ಮತ್ತೆ 4 ನಗರಗಳಲ್ಲಿ ಕರ್ಫ್ಯೂ ಹೇರಿಕೆ!
ಭಾರತದಲ್ಲಿ ಕೊರೋನಾ ವೈರಸ್ ಹೆಚ್ಚಾಗುತ್ತಿದೆ. ಅದರಲ್ಲಿ ಸುಮಾರು 6 ರಿಂದ 10 ರಾಜ್ಯಗಳಲ್ಲಿ ಕೊರೋನಾ ಮೀತಿ ಮೀರುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ಕರೆದಿದ್ದಾರೆ. ಈ ಸಭೆಗೂ ಮುನ್ನವೇ ಮತ್ತೆ ನಾಲ್ಕು ನಗರಗಳಲ್ಲಿ ಕರ್ಫ್ಯೂ ಹೇರಿಕೆ ಮಾಡಲಾಗಿದೆ. ಇದೀಗ ಲಾಕ್‌ಡೌನ್ ಆತಂಕ ಎದುರಾುತ್ತಿದೆ.
ಭಾರತದಲ್ಲಿ ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಕೆಲ ಜಿಲ್ಲೆಗಳಲ್ಲಿ ಲಾಕ್‌ಡೌನ್ ಹೇರಲಾಗಿದೆ. ಕೆಲ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೂ ಕೊರೋನಾ ನಿಯಂತ್ರಕ್ಕೆ ಸಿಗುತ್ತಿಲ್ಲ. ಇದು 2ನೇ ಅಲೆ ಅನ್ನೋ ಮಾತುಗಳು ಕೇಳಿಬಂದಿದೆ.
ಈ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಮುಖ್ಯಮಂತ್ರಿಗಳ ಜೊತೆ ಸಭೆ ಕರೆದಿದ್ದಾರೆ. ಮಾರ್ಚ್ 17 ರಂದು ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಆದರೆ ಈ ಸಭೆಗೂ ಮುನ್ನವೇ ಗುಜರಾತ್‌ನ ನಾಲ್ಕು ನಗರಗಳಲ್ಲಿ ಕರ್ಫ್ಯೂ ಜಾರಿಯಾಗಿದೆ.
ಅಹಮ್ಮದಾಬಾದ್, ಸೂರತ್, ವಡೋದರ ಹಾಗೂ ರಾಜ್‌ಕೋಟ್ ನಗರದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಮಾರ್ಚ್ 17 ರಿಂದ ಮಾರ್ಚ್ 31ರ ವರೆಗೆ ಕರ್ಫ್ಯೂ ಹೇರಿಕೆ ಮಾಡಲಾಗಿದೆ.
ಅಹಮ್ಮದಾಬಾದ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಟಿ20 ಸರಣಿ ಆಡುತ್ತಿದೆ. ಇತ್ತ ಅಭಿಮಾನಿಗಳ ಪ್ರವೇಶಕ್ಕೂ ಅವಕಾಶ ನೀಡಲಾಗಿದೆ. ಇದೀಗ ಸರಣಿ ಆಯೋಜನೆ ಹಾಗೂ ಅಭಿಮಾನಿಗಳ ಪ್ರವೇಶ ಬಿಸಿಸಿಐಗೆ ತಲೆನೋವಾಗಿ ಪರಿಣಮಿಸಿದೆ.
ಕರ್ನಾಟಕದಲ್ಲೂ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ತಜ್ಞರ ವರದಿ ತರಿಸಿಕೊಂಡು ಚರ್ಚೆ ನಡೆಸಿದ್ದಾರೆ.
ಕರ್ನಾಟಕದಲ್ಲಿ ಮತ್ತೆ ಲಾಕ್‍ಡೌನ್, ನೈಟ್ ಕರ್ಫ್ಯೂ ಹೇರಿಕೆ ನಿರ್ಧಾರ ಸರ್ಕಾರದ ಮುಂದಿಲ್ಲ. ಆದರೆ ಕೊರೋನಾ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಇಲ್ಲಿದ್ದದರೆ ಲಾಕ್‌ಡೌನ್ ಜಾರಿಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮದುವೆ ಸೇರಿದಂತೆ ಸಭೆ ಸಮಾರಂಭಗಳಲ್ಲಿ 500ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವಂತಿಲ್ಲ ಎಂದು ಖಡಕ್ ಸೂಚನೆ ನೀಡಲಾಗಿದೆ. ಇನ್ನು ಸಾಮಾಜಿಕ ಅಂತರ, ಮಾಸ್ಕ್ ಸೇರಿದಂತೆ ಕೊರೋನಾ ನಿಯಮ ಪಾಲನೆಗೆ ಸೂಚಿಸಲಾಗಿದೆ.