UP,MP ಬಳಿಕ ಇದೀಗ ಗುಜರಾತ್; ಲವ್ ಜಿಹಾದ್ ವಿರುದ್ಧ ಮತ್ತಷ್ಟು ಕಠಿಣ ಕಾನೂನು !
First Published Jan 2, 2021, 2:35 PM IST
ಉತ್ತರ ಪ್ರದೇಶ ಸರ್ಕಾರ ಹಾಗೂ ಮಧ್ಯ ಪ್ರದೇಶ ಸರ್ಕಾರ ಲವ್ ಜಿಹಾದ್ ಹಾಗೂ ಮತಾಂತರ ಕಾಯ್ದೆ ಜಾರಿಗೊಳಿಸಿದೆ. ಸುಗ್ರೀವಾಜ್ಞೆ ಮೂಲಕ ಕಾನೂನು ತಂದಿದೆ. ಇದೀಗ ಬಿಜೆಪಿ ಆಡಳಿತ ಇತರ ರಾಜ್ಯಗಳು ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ಮುಂದಾಗಿದೆ. ಇದೀಗ ಗುಜರಾತ್ ಸರದಿ. ಆದರೆ ಎರಡು ರಾಜ್ಯಗಳ ಮತಾಂತರ ಕಾಯ್ದೆ ಪರಿಶೀಲಿಸಿ, ಮತ್ತಷ್ಟು ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಲವ್ ಜಿಹಾದ್ ವಿರುದ್ಧ ಹಲವು ವರ್ಷಗಳಿಂದ ಬಿಜೆಪಿ ಸೇರಿದಂತೆ ಹಲವು ಸಂಘಟನಗಳು ಹೋರಾಟ ಮಾಡುತ್ತಿದೆ. ಇದೀಗ ದೇಶದಲ್ಲಿ ಬಹುತೇಕ ಕಡೆ ಬಿಜೆಪಿ ಆಡಳಿತ ಪಕ್ಷವಾಗಿದೆ. ಹೀಗಾಗಿ ಒಂದೊಂದೆ ರಾಜ್ಯಗಳು ಲವ್ ಜಿಹಾದ್ ವಿರುದ್ಧ ಹೋರಾಟ ಆರಂಭಿಸಿದೆ.

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಲವ್ ಜಿಹಾದ್ ಹಾಗೂ ಮತಾಂತರ ಕಾಯ್ದೆ ಜಾರಿಗೆ ತಂದಿದೆ. ಭಾರಿ ವಿರೋಧದ ನಡುವೆಯೂ ಸುಗ್ರೀವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆ ತರಲಾಗಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?