MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • IAF Chopper Crash: ಲ್ಯಾಂಡ್‌ ಆಗಲು ಐದೇ ನಿಮಿಷ, ನೀಲಗಿರಿಯ ದಟ್ಟ ಅರಣ್ಯದಲ್ಲಿ ಹೊತ್ತಿ ಉರಿದ MI-17V5 ಸೇನಾ ಹೆಲಿಕಾಪ್ಟರ್

IAF Chopper Crash: ಲ್ಯಾಂಡ್‌ ಆಗಲು ಐದೇ ನಿಮಿಷ, ನೀಲಗಿರಿಯ ದಟ್ಟ ಅರಣ್ಯದಲ್ಲಿ ಹೊತ್ತಿ ಉರಿದ MI-17V5 ಸೇನಾ ಹೆಲಿಕಾಪ್ಟರ್

ಇಂದು ಬುಧವಾರ ಮಧ್ಯಾಹ್ನ ತಮಿಳುನಾಡಿನ ಕೂನೂರಿನ ನೀಲಗಿರಿಯ ದಟ್ಟ ಅರಣ್ಯದಲ್ಲಿ ಸೇನಾ ಹೆಲಿಕಾಪ್ಟರ್ ಎಂಐ-17 ವಿ-5 ಪತನಗೊಂಡಿದ್ದು, ಶಾಕಿಂಗ್ ಫೋಟೋಗಳು ಲಭ್ಯವಾಗಿವೆ. ಅಪಘಾತದ ತೀವ್ರತೆಗೆ ಹೆಲಿಕಾಪ್ಟರ್ ಹೊತ್ತಿ ಉರಿದ ದೃಶ್ಯಗಳು ಈ ಫೋಟೋಗಳಲ್ಲಿ ಕಂಡು ಬಂದಿದೆ. ಹೆಲಿಕಾಪ್ಟರ್‌ನಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಇಬ್ಬರು ಪೈಲಟ್‌ಗಳು, ಬ್ರಿಗೇಡಿಯರ್ ಶ್ರೇಣಿಯ ಸಿಬ್ಬಂದಿ ಇದ್ದರು. ಅಪಘಾತದ ನಂತರ, ಸ್ಥಳೀಯ ಜನರು ಮೊದಲು ಸ್ಥಳಕ್ಕೆ ಆಗಮಿಸಿ ಹೆಲಿಕಾಪ್ಟರ್‌ನ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿದ್ದಸಾರೆ. ಅಪಘಾತ ಸಂಭವಿಸಿದ ಸ್ಥಳವು ದಟ್ಟವಾದ ಕಾಡಿನಿಂದ ಕೂಡಿದ್ದು, ಸುಲಭವಾಗಿ ತಲುಪಲು ಸಾಧ್ಯವಾಗದ ಕಾರಣ, ರಕ್ಷಣಾ ತಂಡಕ್ಕೆ ತಲುಪಲು ಕೊಂಚ ಕಷ್ಟವಾಯಿತು. ಬೆಟ್ಟದ ಮೇಲೆ ಅಪಘಾತ ಸಂಭವಿಸಿದೆ. ಈ ಸ್ಥಳವು 2667 ಮೀಟರ್ ಎತ್ತರವಾಗಿದೆ. ಅಪಘಾತದ ಬಳಿಕ ಹೆಲಿಕಾಪ್ಟರ್ ಬೆಂಕಿ ಕೆನ್ನಾಲಿಗೆಗೆ ಸುಟ್ಟು ಬೂದಿಯಾಗಿದೆ.

2 Min read
Suvarna News
Published : Dec 08 2021, 03:24 PM IST| Updated : Dec 08 2021, 03:25 PM IST
Share this Photo Gallery
  • FB
  • TW
  • Linkdin
  • Whatsapp
18

ಮಧ್ಯಾಹ್ನ 12:20ಕ್ಕೆ ಹೆಲಿಕಾಪ್ಟರ್ ಪತನಗೊಂಡಿದೆ. ಲ್ಯಾಂಡಿಂಗ್ ಸ್ಥಳದಿಂದ ಕೇವಲ 10 ಕಿ.ಮೀ ದೂರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ವೈದ್ಯರು, ಸೇನಾ ಅಧಿಕಾರಿಗಳು ಮತ್ತು ಕೋಬ್ರಾ ಕಮಾಂಡೋಗಳ ತಂಡವು ಸ್ಥಳಕ್ಕೆ ತಲುಪಿವೆ.

28

ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ವಾಯುಪಡೆ ಹೇಳಿದೆ. ಪ್ರಾಥಮಿಕ ವರದಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಇಂಜಿನ್ ನಿಷ್ಕ್ರಿಯಗೊಂಡು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಮಾಹಿತಿ ಬಂದ ತಕ್ಷಣ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಊಟಿಯತ್ತ ಪ್ರಯಾಣ ಬೆಳೆಸಿದ್ದಾರೆ.

38

ಸಿಡಿಎಸ್ ವಿಪಿನ್ ರಾವತ್ ಮತ್ತು ಇತರರು ಹೆಲಿಕಾಪ್ಟರ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದರು. ಅಪಘಾತದ ಬಗ್ಗೆ ಮಾಹಿತಿ ಪಡೆದ ಸೇನಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಕೆಲವು ದೇಹಗಳು ಶೇ 80 ರಷ್ಟು ಸುಟ್ಟುಹೋಗಿವೆ ಎಂದು ಅವರು ಹೇಳಿದರು.

48

ಅಪಘಾತದ ನಂತರ ಕೆಲವು ವೀಡಿಯೊಗಳು ಸಹ ಹೊರಬಂದಿವೆ. ಅವುಗಳಲ್ಲಿ ಹೆಲಿಕಾಪ್ಟರ್ ಉರಿಯುತ್ತಿರುವುದು ಕಂಡುಬರುತ್ತದೆ. ಅಪಘಾತಕ್ಕೆ ಕಾರಣವೇನು ಎಂಬುವುದು ಇದು ತನಿಖೆಯ ವಿಷಯವಾಗಿದೆ. ತಮಿಳುನಾಡಿನ ವೆಲ್ಲಿಂಗ್ಟನ್‌ನಲ್ಲಿರುವ ಡಿಫೆನ್ಸ್ ಸರ್ವಿಸಸ್ ಕಾಲೇಜಿಗೆ ಕಾರ್ಯಕ್ರಮವೊಂದಕ್ಕೆ ಈ ಹೆಲಿಕಾಪ್ಟರ್ ತೆರಳುತ್ತಿತ್ತು ಎನ್ನಲಾಗಿದೆ.

58

ಮಂಜು ಮುಸುಕಿದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೂ ಖಚಿತ ಮಾಹಿತಿ ಹೊರಬಿದ್ದಿಲ್ಲ. ಅಪಘಾತದ ಬಗ್ಗೆ ತಿಳಿದುಕೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಿಒಡಿಎಸ್ ಬಿಪಿನ್ ರಾವತ್ ಅವರ ಹೆಲಿಕಾಪ್ಟರ್ ದುರಂತ ಅಪಘಾತದ ಬಗ್ಗೆ ಕೇಳಿ ಆಘಾತವಾಗಿದೆ ಎಂದು ಹೇಳಿದ್ದಾರೆ.

68


ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಟ್ವೀಟ್ ಮೂಲಕ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. 'ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಹೆಲಿಕಾಪ್ಟರ್‌ನಲ್ಲಿರುವ ಇತರರು ಸುರಕ್ಷಿತವಾಗಿರುತ್ತಾರೆ ಎಂದು ಭಾವಿಸುತ್ತೇವೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

78

ಸೇನಾ ಅಧಿಕಾರಿಗಳು ಹೋಗುವ ಹೆಲಿಕಾಪ್ಟರ್ ಟ್ವಿನ್ ಇಂಜಿನ್ ಹೊಂದಿದೆ. ಅಪಘಾತ ನಡೆದ ಎಂಐ 17ರಲ್ಲಿ ಪ್ರಧಾನಿ, ರಕ್ಷಣಾ ಸಚಿವರಂತಹ ವಿವಿಐಪಿಗಳೂ ಸವಾರಿ ಮಾಡುತ್ತಾರೆ. ಸೇನೆ ಮತ್ತು ವಾಯುಪಡೆ ಈ ಹೆಲಿಕಾಪ್ಟರ್ ಅನ್ನು ವಿವಿಐಪಿಗಾಗಿ ಬಳಸುತ್ತವೆ. ಇದರಲ್ಲಿ ಎರಡು ಎಂಜಿನ್ ಗಳಿದ್ದು, ಯಾವುದೇ ಸಂದರ್ಭದಲ್ಲೂ ಮತ್ತೊಂದು ಎಂಜಿನ್ ಬಳಸಿ ಸರಿಯಾದ ಜಾಗಕ್ಕೆ ತರಬಹುದು ಎನ್ನಲಾಗಿದೆ.

88

ಈ ಜನರು ಹೆಲಿಕಾಪ್ಟರ್‌ನಲ್ಲಿ ಇದ್ದವರು: ಜನರಲ್ ಬಿಪಿನ್ ರಾವತ್, ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್. ಎ. ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್. ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ. ಸಾಯಿ ತೇಜ, ಹವಾಲ್ದಾರ್ ಸತ್ಪಾಲ್.

About the Author

SN
Suvarna News
ಹೆಲಿಕಾಪ್ಟರ್ ಅಪಘಾತ
ಭಾರತೀಯ ವಾಯು ಸೇನೆ
ಭಾರತೀಯ ಸೇನೆ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved