ಮಳೆಗಾಲ ಆರಂಭವಾಗುತ್ತಿದ್ದಂತೆ 5 ದಿನ ಬಿಸಿಗಾಳಿ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ
ಮಾನ್ಸೂನ್ ಆರಂಭಗೊಳ್ಳುತ್ತಿದೆ. ಕರ್ನಾಟಕ ಸೇರಿದಂತೆ ಕೆಲೆವಡೆ ಭಾರಿ ಮಳೆಯಾಗುತ್ತಿದೆ. ಉತ್ತರ ಪ್ರದೇಶದ ಬಿರುಗಾಳಿ ಮಳೆ ಅವಾಂತರ ಆತಂಕ ತರಿಸಿದೆ. ಇದರ ಬೆನ್ನಲ್ಲೆ ಹವಾಮಾನ ಇಲಾಖೆ ಬಿಸಿಗಾಳಿ ಎಚ್ಚರಿಕೆ ನೀಡಿದೆ.

ಮಳೆ ನಡುವೆ ಬಿಸಿಗಾಳಿ ಎಚ್ಚರಿಕೆ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ಬಾರಿ ಮಳೆ ಪ್ರಮಾಣ ಕಡಿಮೆ ಅನ್ನೋ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಈಗಾಗಲೇ ನೀಡಿದೆ. ಇತ್ತ ಕರ್ನಾಟಕ, ಕೇರಳ, ಆಂಧ್ರ ಪ್ರದೇಶ ಸೇರಿದಂತೆ ದಕ್ಷಿಣದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಹವಾಮಾನ ಇಲಾಖೆ ನೀಡಿದ ಎಚ್ಚರಿಕ ಇದೀಗ ಆತಂಕ ಹೆಚ್ಚಿಸಿದೆ. ಕಾರಣ ಮಳೆಗಾಲ ಆರಂಭವಾಗುತ್ತಿದ್ದಂತೆ ಬಿಸಿಗಾಳಿ, 46ಡಿಗ್ರಿಗೂ ಮೀರಲಿದೆ ಎಂದಿದೆ.

ಬಿಸಿಗಾಳಿ ಸಂಕಷ್ಟ ತೀವ್ರ
ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ. ಐದು ದಿನಗಳ ಕಾಲ ತೀವ್ರ ಬಿಸಿಗಾಳಿ ಜನರನ್ನು ಹೈರಾಣು ಮಾಡಲಿದೆ ಎಂದಿದೆ. ಮೇ 20-21 ಹಾಗೂ ಮೇ.24-26ರಂದು ದೆಹಲಿಯಲ್ಲಿ ಬಿಸಿಗಾಳಿ ಜನರ ಆರೋಗ್ಯ ಹದಗೆಡಿಸಲಿದೆ ಎಂದು ಎಚ್ಚರಿಕೆ ನೀಡಿದೆ.
ಉತ್ತರ ಭಾರತಕ್ಕೆ ಎದುರಾದ ಆತಂಕ
ದೆಹಲಿ, ರಾಷ್ಟ್ರ ರಾಜಧಾನಿ ವ್ಯಾಪ್ತಿ, ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶಗಳು ಬಿಸಿಗಾಳಿಗೆ ತತ್ತರಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಒಟ್ಟು 5 ದಿನಗಳ ಕಾಲ ಬಿಸಿಗಾಳಿ ಉತ್ತರ ಭಾರತದ ಪರಿಸ್ಥಿತಿಯನ್ನು ಬದಲಿಸುವ ಸಾಧ್ಯತೆ ಇದೆ ಎಂದಿದೆ.
ಎನ್ ನಿನೋ ಭೀತಿ
ಬದಲಾದ ಹವಾಮಾನ ಪರಿಸ್ಥಿತಿಯಲ್ಲಿ ಈ ಬಾರಿ ಎಲ್ ನಿನೋ ಆತಂಕವನ್ನು ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಾಗಿ ದಕ್ಷಿಣದ ಕೆಲ ಭಾಗದಲ್ಲಿ ವಿಪರೀತ ಮಳೆ ಹಾಗೂ ಪ್ರವಾಹ, ಉತ್ತರದ ಭಾಗದಲ್ಲಿ ಬರಗಾಲದ ಸಾಧ್ಯತೆನ್ನು ಹೇಳಿತ್ತು. ಇದೀಗದ ಆತಂಕ ಹೆಚ್ಚಾಗುತ್ತಿದೆ. ಇದರಂತೆ ಮುಂಗಾರು ಆರಂಭದಲ್ಲೇ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ.
ಮುಂಗಾರು ಪ್ರವೇಶ
ಮೇ.26ಕ್ಕೆ ಮುಂಗಾರು ಮಳೆ ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಮೇ.26ರಿಂದ ಮಳೆಗಾಲ ಆರಂಭಗೊಳ್ಳಲಿದೆ. ಇದೇ ವೇಳೆ ಎಲ್ ನಿನೋ ಭೀತಿಯಿಂದ ಚೆನ್ನೈನಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಹಾಗೂ ಉತ್ತರದಲ್ಲಿ ಬರಗಾಲ ಪರಿಸ್ಥಿತಿ ಎದುರಾಗುವ ಸಾಧ್ಯತೆಯನ್ನು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

