ಮೋದಿ ಸಭೆ ಬೆನ್ನಲ್ಲೇ ಏರಿಕೆಯಾದ ಕೊರೋನಾ; ಎದುರಾಗಿದೆ ಲಾಕ್‌ಡೌನ್ ಆತಂಕ!
ದೇಶದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ದಿಢೀರ್ ಮುಖ್ಯಮಂತ್ರಿಗಳ ಜೊತೆ ಸಭೆ ಕರೆದು ಮುಂದಿನ ಕ್ರಮಗಳ ಕುರಿತ ಚರ್ಚಿಸಿದ್ದಾರೆ. ಸಭೆಯಲ್ಲಿ ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ಈ ಸಭೆ ಮರುದಿನವೇ ಕೊರೋನಾ ನಿಯಂತ್ರಣಕ್ಕೆ ಸಿಗದೆ ಮೇಲೇರುತ್ತಿದೆ. ಇದೀಗ ಹೊಸ ನಿರ್ಧಾರಗಳು ಜಾರಿಯಾಗುವ ಸಾಧ್ಯತೆ ಹೆಚ್ಚಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿ ಪ್ರದೇಶದ ಮುಖ್ಯಮಂತ್ರಿಗಳ ಜೊತೆ ಕೊರೋನಾ ನಿಯಂತ್ರಣ ಕುರಿತು ಮಹತ್ವದ ಸಭೆ ನಡೆಸಿದ್ದಾರೆ. ಕೊರೋನಾ ಹೆಚ್ಚಿರುವ ಹಾಗೂ ಇತರ ರಾಜ್ಯಗಳಿಗೆ ಮಹತ್ವದ ಸಲಹೆ ನೀಡಿದ್ದಾರೆ.

ಸಭೆ ಮರುದಿನದ ಕೊರೋನಾ ಅಂಕಿ ಅಂಶ ಇದೀಗ ಮತ್ತೆ ನಿರ್ಣಯಗಳನ್ನು ಬದಲಾಯಿಸಬೇಕಾದ ಅನಿವಾರ್ಯತೆಗೆ ತಳ್ಳಿದೆ. ಕಾರಣ ಭಾರತದಲ್ಲಿ 2021ರ ಗರಿಷ್ಠ ಪ್ರಕರಣಗಳು ದಾಖಲಾಗಿದೆ. ಹೀಗಾಗಿ ಲಾಕ್‌ಡೌನ್ ಅನಿವಾರ್ಯ ಅನ್ನೋ ಮಾತುಗಳು ಕೇಳಿಬರುತ್ತಿದೆ.

ಮಹಾರಾಷ್ಟ್ರದಲ್ಲಿ ಮಾರ್ಚ್ 17 ರಂದು 23,179 ಹೊಸ ಕೊವಿಡ್ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಒಂದೇ ದಿನ ಮಹಾರಾಷ್ಟ್ರದಲ್ಲಿ 24,886 ಹೊಸ ಪ್ರಕರಣ ದಾಖಲಾಗಿತ್ತು. ಇದು ಒಂದು ದಿನ ದಾಖಲಾದ ಗರಿಷ್ಠ ಪ್ರಕರಣವಾಗಿದೆ. ಆದರೆ ಇದೀಗ ಈ ಸಂಖ್ಯೆಯ ಸನಿಹಕ್ಕೆ ತಲುಪಿದೆ.

ಕೊರೋನಾಗೆ ಬಲಿಯಾಗುತ್ತಿರುವರ ಪೈಕಿ ಪಂಜಾಬ್ 2ನೇ ಸ್ಥಾನ ಪಡೆದುಕೊಂಡಿದೆ. ಕಳೆದೆರಡು ದಿನದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಪಂಜಾಬ್ ನಂತರದಲ್ಲಿದೆ

ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 35,871 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಮಹಾರಾಷ್ಟ್ರ, ಪಂಜಾಬ್, ಕೇರಳ, ತಮಿಳುನಾಡು, ಕರ್ನಾಟಕ, ಗುಜರಾತ್, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ.

ಲಾಕ್‌ಡೌನ್, ಕರ್ಫ್ಯೂ ಹೇರಿಕೆ ನೀರ್ಧಾರಗಳು ಕೇಂದ್ರದ ಮುಂದಿಲ್ಲ ಅನ್ನೋದನ್ನು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಇತ್ತ ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ಇದೇ ಮಾತನ್ನು ಉಚ್ಚರಿಸಿದ್ದಾರೆ.

ಆದರೆ ಸದ್ಯ ಕೊರೋನಾ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದೆ. ಹೀಗಾಗಿ ಮೋದಿ ಸಭೆಯ ನಿರ್ಧಾರಗಳು ಬದಲಾಗುವು ಸಾಧ್ಯತೆಗಳನ್ನು ಅಲ್ಲಗೆಳೆಯುುವಂತಿಲ್ಲ. ಇದೇ ಕಾರಣಕ್ಕೆ ಇದೀಗ ಲಾಕ್‌ಡೌನ್ ಆತಂಕಗಳು ಆರಂಭಗೊಂಡಿದೆ.