- Home
- News
- India News
- ‘ವಾಡಿಕೆ ಮಳೆಯ ಆಸೆನೇ ಬಿಟ್ಟುಬಿಡಿ!’: ದೇಶಾದ್ಯಂತ ಶೇ. 42 ರಷ್ಟು ಮುಂಗಾರು ಕೊರತೆ, ಹವಾಮಾನ ಇಲಾಖೆಯಿಂದ ಶಾಕಿಂಗ್ ನ್ಯೂಸ್!
‘ವಾಡಿಕೆ ಮಳೆಯ ಆಸೆನೇ ಬಿಟ್ಟುಬಿಡಿ!’: ದೇಶಾದ್ಯಂತ ಶೇ. 42 ರಷ್ಟು ಮುಂಗಾರು ಕೊರತೆ, ಹವಾಮಾನ ಇಲಾಖೆಯಿಂದ ಶಾಕಿಂಗ್ ನ್ಯೂಸ್!
ದೇಶಕ್ಕೆ ಮುಂಗಾರು ಪ್ರವೇಶಿಸಿ ಎರಡು ವಾರ ಕಳೆದರೂ, ಶೇ.42ರಷ್ಟು ಮಳೆ ಕೊರತೆ ಉಂಟಾಗಿದೆ. ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಒತ್ತಡ ಸೃಷ್ಟಿಯಾಗದಿರುವುದು ಹಾಗೂ ಎಲ್ ನಿನೋ ಪ್ರಭಾವದಿಂದಾಗಿ ಮಳೆ ಚೇತರಿಕೆ ಕಷ್ಟ ಎಂದು ಹವಾಮಾನ ಇಲಾಖೆ ಆತಂಕ ವ್ಯಕ್ತಪಡಿಸಿದೆ.

ಮಾನ್ಸೂನ್ ಕಣ್ಣಾಮುಚ್ಚಾಲೆ
ದೇಶಕ್ಕೆ ಮುಂಗಾರು ಪ್ರವೇಶಿಸಿ ಎರಡು ವಾರಗಳು ಕಳೆದರೂ ಮಾನ್ಸೂನ್ ಮಳೆ ಮಾತ್ರ ಜನರ ಜತೆ ಕಣ್ಣಾಮುಚ್ಚಾಲೆ ಆಡುತ್ತಿದೆ. ಮುಂಗಾರು ಕೊರತೆ ಪ್ರಮಾಣ ಈಗ ಶೇ.42ಕ್ಕೇರಿದೆ. ಇನ್ನು ಇದರ ಚೇತರಿಕೆ ಕಷ್ಟ ಎಂದು ಹವಾಮಾನ ಇಲಾಖೆ ಹೇಳಿದೆ.
ಜೂ.4ರಂದು ಮುಂಗಾರು ಪ್ರವೇಶ
ಜೂ.4ರಂದು ದೇಶಕ್ಕೆ ಮುಂಗಾರು ಪ್ರವೇಶಿಸಿದ್ದು, ಜೂ.18ರವರೆಗೆ ವಾಡಿಕೆ ಪ್ರಕಾರದಲ್ಲಿ 72.2 ಮೀ.ಮೀ. ಮಳೆಯಾಗಬೇಕಿತ್ತು. ಆದರೆ ಸದ್ಯ ಕೇವಲ 42.1 ಮೀ.ಮೀ ಮಾತ್ರ ಮಳೆಯಾಗಿದೆ.
ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ
ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಗಳಲ್ಲಿ ಒತ್ತಡ ಸೃಷ್ಟಿಯಾಗದೇ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಮುಂದಿನ ದಿನಗಳಲ್ಲಿ ಇದು ಚೇತರಿಸಿಕೊಂಡು, ವಾಡಿಕೆಯಷ್ಟು ಮಳೆಯಾಗುವ ಸಾಧ್ಯತೆ ಕಮ್ಮಿ ಎಂದು ಅದು ಆತಂಕ ವ್ಯಕ್ತಪಡಿಸಿದೆ.
ಪ್ರದೇಶವಾರು ಭಾರೀ ಕೊರತೆ
ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಶೇ.42, ದಕ್ಷಿಣ ಪರ್ಯಾಯ ದ್ವೀಪ ಭಾಗದಲ್ಲಿ ಶೇ.22 ಹಾಗೂ ಮತ್ತು ವಾಯವ್ಯ ಭಾರತದಲ್ಲಿ ಶೇ.6ರಷ್ಟು ಮಳೆ ಕೊರತೆ ಇದೆ. ಒಟ್ಟಾರೆ ಮಧ್ಯ ಭಾರತದಲ್ಲಿಯೇ ಶೇ. 67ರಷ್ಟು ಮಳೆ ಕೊರತೆ ಆಗಲಿದೆ ಎಂದು ಐಎಂಡಿ ಹೇಳಿದೆ.
ಎಲ್‌ನಿನೋ ಪ್ರಭಾವ
ಈ ಹಿಂದೆಯೇ ಎಲ್ ನಿನೋ ಪ್ರಭಾವದಿಂದ ಈ ವರ್ಷ ವಾಡಿಕೆಯ ಶೇ.90ರಷ್ಟು ಮಾತ್ರ ಮಳೆ ಆಗಬಹುದು ಎಂದು ಐಎಂಡಿ ಮುನ್ಸೂಚನೆ ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

