ರಾಜ್ಯದಲ್ಲಿ ಕೋವಿಡ್‌ಗೆ ಮತ್ತೆರೆಡು ಬಲಿ, 7 ಸಾವಿರ ಗಡಿ ತಲುಪಿದ ವೈರಸ್ ಕೇಸ್
ಭಾರತದಲ್ಲಿ ಕೋವಿಡ್ ಪ್ರಕರಣ ಮತ್ತೆ ಹೆಚ್ಚಾಗಿದೆ. ಇದೀಗ 7000 ಗಡಿ ತಲುಪಿದೆ. ಇತ್ತ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಇಬ್ಬರು ಕೋವಿಡ್ ವೈರಸ್‌ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಏರಿಕೆಯಾಗಿದೆ. ಇದೀಗ ಭಾರತದಲ್ಲಿ ಕೋವಿಡ್ ಸಂಖ್ಯೆ ಒಟ್ಟು 7000 ಗಡಿ ತಲುಪಿದೆ. ಕಳೆದ 24 ಗಂಟೆಯಲ್ಲಿ ಮೂವರು ಕೋವಿಡ್‌ಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 324 ಕೋವಿಡ್ ಕೇಸ್ ದಾಖಲಾಗಿದೆ. ಇದರ ನಡುವೆ ಹೊಸ ಕೋವಿಡ್ ತಳಿ ಪತ್ತೆಯಾಗಿದೆ. ಇತರ ದೇಶಗಳಲ್ಲಿ ಆತಂಕ ಸೃಷ್ಟಿಸಿರುವ XFG ಕೋವಿಡ್ ತಳಿ ಭಾರತದಲ್ಲೂ ಪತ್ತೆಯಾಗಿದೆ. XFG ವೇರಿಯೆಂಟ್ ತಳಿ 163 ಪ್ರಕರಣಗಳು ಪತ್ತೆಯಾಗಿದೆ.
ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 67 ಹೊಸ ಕೋವಿಡ್ ಪ್ರಕರಣ ವರದಿಯಾಗಿದೆ. ಇನ್ನು ಇಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ. ಈ ಮೂಲಕ ಈ ಬಾರಿ ಕಾಣಿಸಿಕೊಂಡ ಕೋವಿಡ್ ಅಲೆಗೆ ಇದುವರೆಗೆ 11 ಮಂದಿ ಬಲಿಯಾಗಿದ್ದಾರೆ. ಭಾನುವಾರಕ್ಕೆ ಹೋಲಿಸಿದರೆ ಸೋಮವಾರ (ಜೂ.10) ಕ್ಕೆ ಕೋವಿಡ್ ಪಾಸಿಟಿವಿಟಿ ರೇಟ್ ಇಳಿಕೆಯಾಗಿದೆ. ರಾಜ್ಯದಲ್ಲಿ ಯಾವುದೇ ಆತಂಕದ ವಾತಾವರವಿಲ್ಲ.ಕೇರಳದಲ್ಲಿ ಸಕ್ರೀಯ ಕೋವಿಡ್ ಪ್ರಕರಣ ಸಂಖ್ಯೆ 2000 ಗಡಿ ದಾಟಿದೆ.
ಆರೋಗ್ಯ ಸಚಿವಾಲಯದ ದೈನಂದಿನ ಕೋವಿಡ್-19 ವರದಿಯ ಪ್ರಕಾರ, 24 ಗಂಟೆಗಳಲ್ಲಿ 625 ರೋಗಿಗಳು ಗುಣಮುಖರಾಗಿದ್ದಾರೆ. ಕೇರಳದ ಜೊತೆಗೆ, ಗುಜರಾತ್, ಪಶ್ಚಿಮ ಬಂಗಾಳ ಮತ್ತು ದೆಹಲಿಯಲ್ಲಿಯೂ ಪ್ರಕರಣಗಳು ಹೆಚ್ಚುತ್ತಿವೆ.ಕೊರೊನಾ ದೇಶದ ವಿವಿಧ ಭಾಗಗಳ ಮೇಲೆ ಪರಿಣಾಮ ಬೀರಿದ್ದರೂ, ಕೆಲವು ರಾಜ್ಯಗಳಲ್ಲಿ ಕಡಿಮೆ ಪರಿಣಾಮ ಕಂಡುಬಂದಿದೆ. ಆರೋಗ್ಯ ಸಚಿವಾಲಯದ ಪ್ರಕಾರ, ಕಡಿಮೆ ಪರಿಣಾಮ ಬೀರಿರುವ ರಾಜ್ಯಗಳಲ್ಲಿ ಮಿಜೋರಾಂ, ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ಚಂಡೀಗಢ ಸೇರಿವೆ. ಹೆಚ್ಚಿನ ಜನರಲ್ಲಿ ಕೋವಿಡ್-19 ಲಕ್ಷಣಗಳು ಸೌಮ್ಯವಾಗಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಭವಿಷ್ಯದ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ದೇಶಾದ್ಯಂತ ಆಸ್ಪತ್ರೆಗಳಲ್ಲಿ ಆಮ್ಲಜನಕ, ವೆಂಟಿಲೇಟರ್‌ಗಳು ಮತ್ತು ಔಷಧಿಗಳ ಲಭ್ಯತೆಯನ್ನು ಪರಿಶೀಲಿಸಲಾಗುತ್ತಿದೆ.
ದೆಹಲಿಯಲ್ಲಿ ಕೊವಿಡ್ ಪ್ರಕರಣಗಳು ಏರುತ್ತಲೇ ಇವೆ. ಪ್ರಸ್ತುತ ದೆಹಲಿಯಲ್ಲಿ 700 ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 42 ಹೊಸ ರೋಗಿಗಳು ಪತ್ತೆಯಾಗಿದ್ದಾರೆ. ಇಲ್ಲಿಯವರೆಗೆ ದೆಹಲಿಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ.ಮಹಾರಾಷ್ಟ್ರದಲ್ಲೂ ಕೊರೋನಾ ಪ್ರಕರಣಗಳು 600 ದಾಟಿವೆ. ಕೇರಳದಲ್ಲಿ 1957 ಸಕ್ರಿಯ ಪ್ರಕರಣಗಳಿದ್ದು, ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇದಲ್ಲದೆ, ಗುಜರಾತ್‌ನಲ್ಲಿ 980 ಮತ್ತು ಪಶ್ಚಿಮ ಬಂಗಾಳದಲ್ಲಿ 747 ಪ್ರಕರಣಗಳು ದೃಢಪಟ್ಟಿವೆ.
ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸರ್ಕಾರವು ಮಾಸ್ಕ್ ಧರಿಸುವುದು, ಜನಸಂದಣಿಯಿಂದ ದೂರವಿರುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡಿದೆ.ಸಾಮಾನ್ಯವಾಗಿ ಶೀತ 1 ರಿಂದ 3 ದಿನಗಳಲ್ಲಿ ಗುಣವಾಗುತ್ತದೆ. ಕೊರೊನಾ ಲಕ್ಷಣಗಳು ಶೀತದಂತೆಯೇ ಇದ್ದರೂ, ಅವು ಒಂದು ವಾರಕ್ಕಿಂತ ಹೆಚ್ಚು ಕಾಲ ಇರುತ್ತವೆ. ದೀರ್ಘಕಾಲದವರೆಗೆ ಶೀತದ ಲಕ್ಷಣಗಳು ಇದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ