ಹಿಂದು ಸಂಘಟನೆ, ಸಚಿವರ ಒತ್ತಡಕ್ಕೆ ಮಣಿದ ಸರ್ಕಾರ: ಗಣೇಶೋತ್ಸವಕ್ಕೆ ಷರತ್ತಿನ ಸಮ್ಮತಿ!
ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಈ ವರ್ಷ ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ವಿಧಿಸಿದ್ದ ರಾಜ್ಯ ಸರ್ಕಾರ, ಇದೀಗ ವಿವಿಧ ಹಿಂದು ಪರ ಸಂಘಟನೆಗಳು ಹಾಗೂ ಕೆಲವು ಸಚಿವರ ಒತ್ತಡಕ್ಕೆ ಮಣಿದು ಸಾರ್ವಜನಿಕ ಗಣೇಶೋತ್ಸವವನ್ನು ಷರತ್ತುಬದ್ಧವಾಗಿ ಆಚರಿಸಲು ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.

ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಮನೆ,ದೇವಸ್ಥಾನ ,ಖಾಸಗಿ ,ಸರ್ಕಾರಿ ಕಚೇರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸರಳವಾಗಿ ಆಚರಿಸಬಹುದು

ಮನೆಯಲ್ಲಿ ಎರಡು ಅಡಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಡಿ ಎತ್ತರದ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು.

ಸಮಿತಿ ,ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕಾರ್ಪೊರೇಷನ್/ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು.

ಒಂದು ವಾರ್ಡ್ / ಗ್ರಾಮಕ್ಕೆ ಒಂದು ಗಣೇಶೋತ್ಸವ ಮಾತ್ರ ಮಾಡಬೇಕು .

20 ಜನಕ್ಕೆ ಸೀಮಿತವಾದ ಆವರಣ ನಿರ್ಮಿಸಿ ಒಮ್ಮೆಲೇ ಅದಕ್ಕಿಂತ ಹೆಚ್ಚು ಜನರು ಸೇರದಂತೆ ನೋಡಿಕೊಳ್ಳಬೇಕು.

ಹಾಡು,ನೃತ್ಯ ಹೀಗೆ ಯಾವುದೇ ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶವಿರುವುದಿಲ್ಲ .

ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜಿಸುವಾಗ ಮೆರವಣಿಗೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಮನೆಯಲ್ಲಿ ಗಣೇಶ ಪೂರ್ತಿ ಪೂಜಿಸುವವರು ಮನೆಯಲ್ಲಿಯೇ ವಿಸರ್ಜನೆ ಮಾಡಬೇಕು.

ಸಾರ್ವಜನಿಕ ಸ್ಥಳಗಳಲ್ಲಿ ಪೂಜಿಸುವವರು ಸರ್ಕಾರದ ವತಿಯಿಂದ ನಿರ್ಮಿಸಲಾದ ಮೊಬೈಲ್ ಟ್ಯಾಂಕ್ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜನೆ ಮಾಡಬೇಕು.