ವಿಮಾನ ದುರಂತದಲ್ಲಿ ಕೊನೆಯುಸಿರೆಳೆದ ಅಜಿತ್ ಪವಾರ್ ಎಲ್ಲಿಗೆ ಪ್ರಯಾಣ ಮಾಡುತ್ತಿದ್ದರು?
ಭಾರಮತಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣ ಮಾಡುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶದ ವೇಳೆ ನಡೆದ ಸಮಯದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಆರು ಮಂದಿಯೂ ಕೊನೆಯುಸಿರೆಳೆದಿದ್ದಾರೆ. ಅಷ್ಟಕ್ಕೂ ಅವರು ಎಲ್ಲಿಗೆ ಹೋಗುತ್ತಿದ್ದರು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.

ಲಘು ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು
66 ವರ್ಷದ ಹಿರಿಯ ರಾಜಕಾರಣಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ವಿಮಾನ ದುರಂತದಲ್ಲಿ ಕೊನೆಯುಸಿರೆಳೆದಿದ್ದಾರೆ. ಬಾರಾಮತಿಯಲ್ಲಿ ಲಘು ವಿಮಾನ ಲ್ಯಾಂಡ್ ಆಗುವ ಮುನ್ನ ಈ ದುರಂತ ಸಂಭವಿಸಿದ್ದು, ವಿಮಾನದೊಳಗಿದ್ದ ಎಲ್ಲಾ ಆರು ಮಂದಿಯೂ ಕೊನೆಯುಸಿರೆಳೆದಿದ್ದಾರೆ.
ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್
ನ್ಯಾಷನಲ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ)ಯ ಅಧ್ಯಕ್ಷರೂ ಆಗಿರುವ ಅಜಿತ್ ಪವಾರ್ ಅವರ ಜತೆ ಅಂಗರಕ್ಷಕ, ಪೈಲಟ್ ಸೇರಿದಂತೆ ಆರು ಮಂದಿ ಈ ಲಘು ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ವಿಮಾನ ಪ್ರಯಾಣ ಆರಂಭವಾಗಿತ್ತು. ಆದರೆ ಇದಾಗಿ ಒಂದು ಗಂಟೆಯೊಳಗೆ ಈ ಅವಘಡ ಸಂಭವಿಸಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರಕ್ಕಾಗಿ ಹೊರಟಿದ್ದ ಪವಾರ್
ಇನ್ನು ಅಜಿತ್ ಪವಾರ್, ಈಗಾಗಲೇ ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಪಕ್ಷದ ಪರ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲು ಬಾರಾಮತಿಗೆ ಹೊರಟಿದ್ದರು. ಆದರೆ ವಿಮಾನ ಲ್ಯಾಂಡ್ ಆಗುವ ವೇಳೆಯೇ ಈ ದುರಂತ ಸಂಭವಿಸಿದೆ.
ಕೆಲವೇ ಕ್ಷಣಗಳಲ್ಲಿ ಸುಟ್ಟು ಕರಕಲಾದ ವಿಮಾನ
ಎನ್‌ಸಿಪಿ ನಾಯಕ ಅಜಿತ್ ಪವಾರ್ ಮಂಗಳವಾರ ಮುಂಬೈನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು. ಇದಾದ ನಂತರ ಮುಂಬೈನಿಂದ ಪುಣೆ ಕಡೆಗೆ ಪ್ರಯಾಣ ಬೆಳೆಸಿದ್ದರು. ಆದರೆ ಬಾರಾಮತಿಯಲ್ಲಿ ವಿಮಾನ ಲ್ಯಾಂಡಿಂಗ್ ವೇಳೆ ಪತನವಾಗಿದೆ. ಈ ದುರ್ಘಟನೆಯ ತೀವ್ರತೆ ಎಷ್ಟಿತ್ತೆಂದರೇ, ಕೆಲವೇ ನಿಮಿಷಗಳಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿ ಹೋಗಿವೆ.
ಮಹಾರಾಷ್ಟ್ರದಾದ್ಯಂತ ಕಟ್ಟೆಚ್ಚರ
ಇದೀಗ ದುರಂತ ಸಂಭವಿಸಿದ ವಿಮಾನ ನಿಲ್ದಾಣದಲ್ಲಿ, ವಿಮಾನ ಹಾರಾಟಗಳನ್ನು ನಿಷೇಧಿಸಲಾಗಿದ್ದು, ಬೆಂಕಿ ನಂದಿಸುವ ಕಾರ್ಯ ಕ್ಷಿಪ್ರಗತಿಯಲ್ಲಿ ಸಾಗುತ್ತಿದೆ. ಘಟನಾ ಸ್ಥಳದಲ್ಲಿ ತನಿಖಾಧಿಕಾರಿಗಳ ತಂಡ ಹಾಜರಿದ್ದು, ಮಹಾರಾಷ್ಟ್ರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ವಿಮಾನ ದುರಂತಕ್ಕೆ ಕಾರಣವೇನು?
ಅಷ್ಟಕ್ಕೂ ಈ ವಿಮಾನ ದುರಂತ ತಾಂತ್ರಿಕ ದೋಷದಿಂದ ಆಗಿದೆಯೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎನ್ನುವುದನ್ನು ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

