ಮೊಬೈಲ್‌ನಲ್ಲಿ ಮಾತನಾಡುತ್ತಾ ಮ್ಯಾನ್‌ಹೋಲ್‌ಗೆ ಬಿದ್ದ ವ್ಯಕ್ತಿ; ಗುತ್ತಿಗೆದಾರರನ ವಿರುದ್ಧ ಕ್ರಮ
ಭಾರೀ ಮಳೆಯಿಂದಾಗಿ, ಫೋನ್‌ನಲ್ಲಿ ಮಾತನಾಡುತ್ತಾ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು 55 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಖಾಸಗಿ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದ್ದು, ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಕಠಿಣ ಕ್ರಮದ ಭರವಸೆ ನೀಡಿದೆ.

ಮ್ಯಾನ್‌ಹೋಲ್‌ಗೆ ಬಿದ್ದ ವ್ಯಕ್ತಿ
ಮುಂಬೈ ಮಹಾನಗರಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನಗರದಲ್ಲಿ ಪ್ರವಾಹ ಸೃಷ್ಟಿಯಾಗಿದೆ. ವ್ಯಕ್ತಿಯೋರ್ವ ಫೋನ್‌ನಲ್ಲಿ ಮಾತನಾಡುತ್ತಾ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು ಸಾವನ್ನಪ್ಪಿದ್ದಾರೆ. ಇಂದು ಮಧ್ಯಾಹ್ನ ಅಂಧೇರಿ-ಸಕಿನಾಕ ಮತ್ತು ಕುರ್ಲಾ-ಘಾಟ್ಕೋಪರ್ ಅನ್ನು ಸಂಪರ್ಕಿಸುವ ಖೈರಾನಿ ರಸ್ತೆಯಲ್ಲಿ ಘಟನೆ ನಡೆದಿದೆ.
ರಸ್ತೆ ತುಂಬೆಲ್ಲಾ ನೀರು
ಹೆಚ್ಚು ಮಳೆಯಿಂದಾಗಿ ರಸ್ತೆ ತುಂಬೆಲ್ಲಾ ನೀರು ತುಂಬಿಕೊಂಡಿತ್ತು. ಈ ವೇಳೆ 55 ವರ್ಷದ ಅಸ್ಲಂ ಇಸಾಫ್ ಶೇಖ್ ಎಂಬವರು ಮೊಬೈಲ್‌ನಲ್ಲಿ ಮಾತನಾಡುತ್ತಾ ರಸ್ತೆ ಕ್ರಾಸ್ ಮಾಡುತ್ತಿದ್ದರು. ಮಳೆ ನೀರು ತುಂಬಿದ್ದರಿಂದ ಮ್ಯಾನ್‌ಹೋಲ್ ಇರೋದು ಅಸ್ಲಂ ಅವರ ಗಮನಕ್ಕೆ ಬಂದಿಲ್ಲ. ಸುಮಾರು ಎರಡು ಗಂಟೆ ಕಾರ್ಯಾಚರಣೆ ಬಳಿಕ ಅಸ್ಲಂ ಮೃತದೇಹವನ್ನು ಹೊರಗೆ ತೆಗೆಯಲಾಗಿದೆ.
ಖಾಸಗಿ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ, ಪೊಲೀಸರು ಮೃತದೇಹ ಹೊರಗೆ ತೆಗೆದಿದ್ದಾರೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ), ಸಂಬಂಧಪಟ್ಟ ಖಾಸಗಿ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ. ಮಳೆಯಿಂದಾಗಿ ಅಂಧೇರಿ ಭಾಗದ ರಸ್ತೆಗಳಲ್ಲಿ ನೀರು ಹೊಳೆಯಂತೆ ಹರಿಯುತ್ತಿರೋದು ಜನರು ಭಯದಿಂದ ರಸ್ತೆ ದಾಟುತ್ತಿದ್ದಾರೆ.
ಮ್ಯಾನ್‌ಹೋಲ್
ಮ್ಯಾನ್‌ಹೋಲ್ ಬಳಿ ಅಸ್ಲಂ ಅವರ ಛತ್ರಿ ಮತ್ತು ಚಪ್ಪಲಿ ಬಿದ್ದಿರೋದನ್ನು ಗಮನಿಸಿ ಶೋಧಕಾರ್ಯ ನಡೆಸಲಾಗಿತ್ತು. ಮ್ಯಾನ್‌ಹೋಲ್‌ನಿಂದ ಹೊರತೆಗೆಯುತ್ತಿದ್ದಂತೆ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಪರೀಕ್ಷಿಸಿದ ವೈದ್ಯರು ಅಸ್ಲಂ ಮೃತರಾಗಿರೋದನ್ನು ಖಚಿತಪಡಿಸಿದ್ದಾರೆ. ಈ ಘಟನೆ ಮಧ್ಯಾಹ್ನ ಸುಮಾರು 12.30ರ ವೇಳೆಗೆ ನಡೆದಿದೆ.
ಧಾರಾಕಾರ ಮಳೆ
ಪ್ರಾಥಮಿಕ ಮಾಹಿತಿಯ ಪ್ರಕಾರ, ಖಾಸಗಿ ಗುತ್ತಿಗೆದಾರರೊಬ್ಬರು ನಡೆಸುತ್ತಿರುವ ನಿರ್ವಹಣಾ ಕಾರ್ಯದಿಂದಾಗಿ ವ್ಯಕ್ತಿ ಬಿದ್ದಿದ್ದ ಮ್ಯಾನ್‌ಹೋಲ್ ಮುಚ್ಚಳ ತೆರೆದೇ ಇತ್ತು. ಗುತ್ತಿಗೆದಾರರ ವಿರುದ್ಧ ಅಪರಾಧಿ ಕೊಲೆ ಪ್ರಕರಣ ದಾಖಲಿಸಲಾಗುವುದು ಎಂದು ಉಪ ಮೇಯರ್ ಸಂಜಯ್ ಘಾಡಿ ಹೇಳಿದ್ದಾರೆ. ಮಳೆಯಿಂದಾಗಿ ದಾದರ್, ಪರೇಲ್, ಹಿಂದ್ಮಾತಾ, ಚಾರ್ಕೋಪ್, ವರ್ಲಿ, ಗೋರೆಗಾಂವ್ ಮತ್ತು ಅಂಧೇರಿ ಸೇರಿದಂತೆ ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಶುಕ್ರವಾರದರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

