ಹೊಸ ಸರ್ಕಾರಕ್ಕೆ ನನ್ನ ಬೆಂಬಲ: ಬಿಹಾರದ ಜನತೆಗೆ ಧನ್ಯವಾದ ತಿಳಿಸಿದ ನಿತೀಶ್ ಕುಮಾರ್
ಬಿಹಾರದ ಜನತೆಗೆ ಧನ್ಯವಾದ ಸಲ್ಲಿಸಿರುವ ಸಿಎಂ ನಿತೀಶ್ ಕುಮಾರ್, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ರಾಜ್ಯಸಭಾ ಸದಸ್ಯರಾಗುವ ಇಚ್ಛೆ ವ್ಯಕ್ತಪಡಿಸಿರುವ ಅವರು, ತಮ್ಮ ಪುತ್ರ ನಿಶಾಂತ್ ಕುಮಾರ್‌ರ ರಾಜಕೀಯ ಪ್ರವೇಶಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ ಎನ್ನಲಾಗಿದೆ.

ಧನ್ಯವಾದ ಸಲ್ಲಿಕೆ
ನಾನು ಸಂಪೂರ್ಣ ಭಕ್ತಿಯಿಂದ ಸೇವೆ ಸಲ್ಲಿಸಿದ್ದೇನೆ ಎಂದು ಹೇಳುವ ಮೂಲಕ ಬಿಹಾರದ ಜನತೆಗೆ ಸಿಎಂ ನಿತೀಶ್ ಕುಮಾರ್ ಧನ್ಯವಾದ ಸಲ್ಲಿಕೆ ಮಾಡಿದ್ದಾರೆ ಈ ಮೂಲಕ ನಿತೀಶ್ ಕುಮಾರ್, ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸುಳಿವು ನೀಡಿದ್ದಾರೆ.
ನಂಬಿಕೆ ಮತ್ತು ಬೆಂಬಲ
ಎರಡು ದಶಕಗಳಿಗೂ ಹೆಚ್ಚು ಕಾಲ, ನಂಬಿಕೆ ಮತ್ತು ಬೆಂಬಲವನ್ನು ನಿರಂತರವಾಗಿ ಉಳಿಸಿಕೊಂಡಿದ್ದೀರಿ. ಅದಕ್ಕಾಗಿಯೇ ನಾನು ಬಿಹಾರ ಮತ್ತು ನಿಮ್ಮೆಲ್ಲರಿಗೂ ಸಂಪೂರ್ಣ ಭಕ್ತಿಯಿಂದ ಸೇವೆ ಸಲ್ಲಿಸಿದ್ದೇನೆ. ನಿಮ್ಮ ನಂಬಿಕೆ ಮತ್ತು ಬೆಂಬಲದಿಂದಾಗಿ ಬಿಹಾರ ಅಭಿವೃದ್ಧಿಯತ್ತ ಸಾಗುತ್ತಿದೆ. ನಿಮಗೆ ನನ್ನ ಕೃತಜ್ಞತೆ ಎಂದು ಸಿಎಂ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಆಸೆ
"ನಾನು ನನ್ನ ಸಂಸದೀಯ ಜೀವನವನ್ನು ಪ್ರಾರಂಭಿಸಿದ ಸಮಯದಿಂದ, ಬಿಹಾರ ವಿಧಾನಸಭೆಯ ಎರಡೂ ಸದನಗಳ ಜೊತೆಗೆ ಸಂಸತ್ತಿನ ಎರಡೂ ಸದನಗಳ ಸದಸ್ಯರಾಗಬೇಕೆಂಬ ಆಸೆ ನನಗಿತ್ತು. ಹಾಗಾಗಿ ನಾನು ಈ ಚುನಾವಣೆಯಲ್ಲಿ ರಾಜ್ಯಸಭೆಯ ಸದಸ್ಯರಾಗಲು ಬಯಸುತ್ತೇನೆ ಎಂದು ನಿತೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಸಂಕಲ್ಪ
ನಿಮ್ಮೊಂದಿಗಿನ ನನ್ನ ಈ ಸಂಬಂಧವು ಭವಿಷ್ಯದಲ್ಲಿಯೂ ಮುಂದುವರಿಯುತ್ತದೆ ಮತ್ತು ಅಭಿವೃದ್ಧಿ ಹೊಂದಿದ ಬಿಹಾರವನ್ನು ನಿರ್ಮಿಸಲು ನಿಮ್ಮೊಂದಿಗೆ ಒಟ್ಟಾಗಿ ಕೆಲಸ ಮಾಡುವ ನನ್ನ ಸಂಕಲ್ಪವು ಮೊದಲಿನಂತೆಯೇ ಇರುತ್ತದೆ. ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲ ಮತ್ತು ಮಾರ್ಗದರ್ಶನ ಇರುತ್ತದೆ ಎಂದು ನಿತೀಶ್ ಕುಮಾರ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಪುತ್ರ ನಿಶಾಂತ್ ಕುಮಾರ್ ರಾಜಕೀಯ ಪ್ರವೇಶ
ಜೀವನದುದ್ದಕ್ಕೂ ವಂಶಪಾರಂಪರ್ಯ ರಾಜಕೀಯ ವಿರೋಧಿಸುತ್ತಲೇ ಬಂದಿದ್ದ ನಿತೀಶ್, ಇದೀಗ ತಮ್ಮ ಪುತ್ರ ನಿಶಾಂತ್ ಕುಮಾರ್ ರಾಜಕೀಯ ಪ್ರವೇಶಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

