- Home
- News
- India News
- Pahalgam Attack ನಿಸ್ಸಂದೇಹವಾಗಿ ಭದ್ರತಾ ವೈಫಲ್ಯ, ಸಂಪೂರ್ಣ ಹೊಣೆ ನಾನು ಹೊರುತ್ತೇನೆ: ಮನೋಜ್ ಸಿನ್ಹಾ
Pahalgam Attack ನಿಸ್ಸಂದೇಹವಾಗಿ ಭದ್ರತಾ ವೈಫಲ್ಯ, ಸಂಪೂರ್ಣ ಹೊಣೆ ನಾನು ಹೊರುತ್ತೇನೆ: ಮನೋಜ್ ಸಿನ್ಹಾ
ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯ ಹೊಣೆಯನ್ನು ಜಮ್ಮು ಕಾಶ್ಮೀರದ ಲೆಫ್ಟಿನಂಟ್ ಗವರ್ನರ್ ಮನೋಜ್ ಸಿನ್ಹಾ ವಹಿಸಿಕೊಂಡಿದ್ದಾರೆ. ಪಾಕಿಸ್ತಾನ ಪ್ರಾಯೋಜಿತ ಈ ದಾಳಿಯನ್ನು ಭದ್ರತಾ ವೈಫಲ್ಯ ಎಂದು ಒಪ್ಪಿಕೊಂಡ ಅವರು, ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿರುವುದರ ಬಗ್ಗೆಯೂ ಮಾತನಾಡಿದ್ದಾರೆ.

ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆದ ದಾಳಿ ನಿಸ್ಸಂದೇಹವಾಗಿ ಭದ್ರತಾ ವೈಫಲ್ಯವಾಗಿತ್ತು. ಇದರ ಎಲ್ಲಾ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ ಎಂದು ಜಮ್ಮು ಕಾಶ್ಮೀರದ ಲೆಫ್ಟಿನಂಟ್ ಗರ್ವನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಲೆಫ್ಟಿನಂಟ್ ಗವರ್ನರ್ ಆಗಿ ಐದು ವರ್ಷ ಪೂರ್ಣಗೊಳಿಸಿರುವ ಮನೋಜ್ ಸಿನ್ಹಾ, ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಪಹಲ್ಗಾಂ ದಾಳಿ ಕುರಿತು ಮಾತನಾಡಿದ್ದಾರೆ. ಇದು ಪಾಕಿಸ್ತಾನ ಪ್ರಾಯೋಜಿತ ದಾಳಿಯಾಗಿದ್ದು, ಅಮಾಯಕ ಪ್ರವಾಸಿಗರನ್ನು ಕೊಲ್ಲಲಾಗಿದೆ. ಈ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊರುತ್ತೇನೆ ಎಂದು ಹೇಳಿದ್ದಾರೆ.
ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿ ದುರದೃಷ್ಟಕರ. ನಿಸ್ಸಂದೇಹವಾಗಿ ಇದು ಭದ್ರತಾ ವೈಫಲ್ಯ ಎಂದು ಜಮ್ಮು ಕಾಶ್ಮೀರದ ಲೆಫ್ಟಿನಂಟ್ ಗರ್ವನರ್ ಮನೋಜ್ ಸಿನ್ಹಾ ಒಪ್ಪಿಕೊಂಡಿದ್ದಾರೆ. ಉಗ್ರರು ಸಾಮಾನ್ಯ ಜನರನ್ನು ಮತ್ತು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲ್ಲ ಎಂಬುವುದು ಸಾಮನ್ಯ ನಂಬಿಕೆಯಾಗಿತ್ತು. ಪಹಲ್ಲಾಂ ಹುಲ್ಲುಗಾವಲಿನ ಪ್ರದೇಶವಾಗಿದ್ದು, ಇಲ್ಲಿ ಯಾವುದೇ ಹೋಟೆಲ್ ವ್ಯವಸ್ಥೆಗಳಿಲ್ಲ ಮತ್ತು ಭದ್ರತಾ ಸಿಬ್ಬಂದಿಯ ನಿಯೋಜನೆ ಆಗಿರಲ್ಲ ಎಂಬ ವಿಷಯವನ್ನು
ಕಳೆದ ಐದು ವರ್ಷದಲ್ಲಿ ಪಾಕಿಸ್ತಾನದ ಆರ್ಥಿಕತೆ ದ್ವಿಗುಣಗೊಂಡಿದೆ. ಜಮ್ಮು ಕಾಶ್ಮೀರ ಶಾಂತವಾಗಿರೋದನ್ನು ಪಾಕಿಸ್ತಾನ ಎಂದಿಗೂ ಸಹಿಸಲ್ಲ. ಐದು ವರ್ಷಗಳಲ್ಲಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಏರಿಕೆಯಾಗಿತ್ತು. ಪ್ರವಾಸೋದ್ಯಮ ಅಭಿವೃದ್ಧಿಯತ್ತ ಸಾಗುತ್ತಿರುವಾಗಲೇ ಈ ದಾಳಿ ನಡೆದಿದೆ. ಪಹಲ್ಗಾಂ ದಾಳಿಯಿಂದಾಗಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ ಎಂದು ಮನೋಜ್ ಸಿನ್ಗಾ ಸಂದರ್ಶನದಲ್ಲಿ ಹೇಳಿದ್ದಾರೆ.
ಆಪರೇಷನ್ ಸಿಂದೂರ ಕಾರ್ಯಚರಣೆ ಬಳಿಕ ಜಮ್ಮು ಕಾಶ್ಮೀರದಲ್ಲಿ ಯಾವುದೇ ಉಗ್ರ ದಾಳಿಗಳು ನಡೆದಿಲ್ಲ. ಕದನ ವಿರಾಮ ಉಲ್ಲಂಘನೆಯನ್ನು ಯುದ್ಧ ಎಂದು ಪರಿಗಣಿಸಲಾಗುವುದು ಅಂತ ಭಾರತ ಸರ್ಕಾರ ಹೇಳಿದೆ. ಪಾಕಿಸ್ತಾನದ ಉಗ್ರರ ನೆಲೆಗಳನ್ನು ಆಪರೇಷನ್ ಸಿಂದೂರ ಕಾರ್ಯಚರಣೆಯಲ್ಲಿ ನಾಶಗೊಳಿಸಲಾಗಿದೆ ಎಂದರು.