7 ಬಾರಿ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಮೊದಲ ಕಾಂಗ್ರೆಸ್ಸೇತರ ಪಿಎಂ ನರೇಂದ್ರ ಮೋದಿ!

First Published 15, Aug 2020, 11:55 AM

ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ 7.30ಕ್ಕೆ ದೆಹಲಿಯ ಕೆಂಪುಕೋಟಡಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ 74ನೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಕೊರೋನಾತಂಕ ನಡುವೆ ಸರಳವಾಗಿ ಈ ಬಾರಿ ಸ್ವಾತಂತ್ರ್ಯ ದಿನ ಆಚರಿಸಲಾಗಿದ್ದು, ಕೆಲವೇ  ಕೆಲವು ಅತಿಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಾರ್ವಜನಿಕರಿಗೂ ಈ ಬಾರಿ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಈ ಬಾರಿ ಧ್ವಜಾರೋಹಣ ಮಾಡುವ ಮೂಲಕ ಪಿಎಂ ಮೋದಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಏನದು ಅಂತೀರಾ? ಇಲ್ಲಿದೆ ವಿವರ.

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಸತತ ಏಳನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಮೂಲಕ ಐತಿಹಾಸಿಕ ಸ್ಮಾರಕ ರೆಡ್‌ ಫೋರ್ಟ್‌ನಲ್ಲಿ 7 ಬಾರಿ ತ್ರಿವರ್ಣ ಧ್ವಜ ಹಾರಿಸಿದ ಮೊದಲ ಕಾಂಗ್ರೆಸ್ಸೇತರ ಪ್ರಧಾನ ಮಂತ್ರಿ ಎಂಬ ದಾಖಲೆ ಬರೆದಿದ್ದಾರೆ.

ಜವಾಹರಲಾಲ್ ನೆಹರು: ಕಾಂಗ್ರೆಸ್‌ ನಾಯಕ ಹಾಗೂ ಸ್ವತಂತ್ರ ಭಾರತದ ಮೊದಲ ಪ್ರಧಾನ ಮಂತ್ರಿ ಜವಹರಲಾಲ್ ನೆಹರು(1947 ರಿಂದ 1964), 17  ಬಾರಿ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಈ ಮೂಲಕ ಅತಿ ಹೆಚ್ಚು ಬಾರಿ ರೆಡ್‌ ಫೋರ್ಟ್‌ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪಿಎಂ ಎಂಬ ದಾಖಲೆ ಬರೆದಿದ್ದಾರೆ

ಇಂದಿರಾ ಗಾಂಧಿ: ಕಾಂಗ್ರೆಸ್‌ ನಾಯಕಿ ಹಾಗೂ ಭಾರತದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.1966 ರಿಂದ 1976 ಹಾಗೂ1980-1984ವರೆಗೆ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ 16 ಬಾರಿ ಧ್ವಜಾರೋಹಣ ನೆರವೇರಿಸಿದ್ದಾರೆ.

ಮನಮೋಹನ್ ಸಿಂಗ್: ಇನ್ನು ಕೆಂಪು ಕೋಟೆ ಮೇಲೆ ಅತಿ ಹೆಚ್ಚು ಬಾರಿ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಇದ್ದಾರೆ. 2004- 2013ವರೆಗೆ ದೇಶದ ಪ್ರಧಾನ ಮಂತ್ರಿಯಾಗಿದ್ದ ಡಾ| ಸಿಂಗ್ ಬರೋಬ್ಬರಿ 10 ಬಾರಿ ಧ್ವಜಾರೋಹಣ ನೆರವೇರಿಸಿದ್ದಾರೆ.

ನರೇಂದ್ರ ಮೋದಿ: ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಹಾಲಿ ಪಿಎಂ ನರೇಂದ್ರ ಮೋದಿ ಇದ್ದಾರೆ. ಪ್ರಧಾನಿ ಮೋದಿ ಬರೋಬ್ಬರಿ 7 ಬಾರಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇದರೊಂದಿಗೆ ಕೆಂಪುಕೋಟೆಯಲ್ಲಿ ಅತಿಹೆಚ್ಚು ಬಾರಿ ಧ್ವಜಾರೋಹಣ ಮಾಡಿದ ಕಾಂಗ್ರೆಸ್ಸೇತರ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಯೂ ಗಳಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ: ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲೂ ಕಾಂಗ್ರೆಸ್ಸೇತರ ಪ್ರಧಾನ ಮಂತ್ರಿ ಇದ್ದಾರೆ. 1998 ರಿಂದ 2003ವರೆಗೆ ಪ್ರಧಾನಿಯಾಗಿದ್ದ ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ 6 ಬಾರಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ನರಸಿಂಹರಾವ್: 1991 ರಿಂದ 1995ರ ಅವಧಿಯಲ್ಲಿ ಪ್ರಧಾನ ಮಂತ್ರಿಯಾಗಿದ್ದ ಕಾಂಗ್ರೆಸ್ ನಾಯಕ ನರಸಿಂಹ ರಾವ್ 5 ಬಾರಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ 6 ನೇ ಸ್ಥಾನದಲ್ಲಿದ್ದಾರೆ.

ರಾಜೀವ್ ಗಾಂಧಿ: ಕಾಂಗ್ರೆಸ್ ನಾಯಕ, 1985 ರಿಂದ 1989ರವರೆಗೆ ಪ್ರಧಾನ ಮಂತ್ರಿಯಾಗಿದ್ದ ರಾಜೀವ್ ಗಾಂಧಿ ಕೆಂಪುಕೋಟೆಯಲ್ಲಿ 5 ಬಾರಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ.

loader