Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • Vande Bharat Express: ದೇಶದ ಮೂರನೇ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ದೇಶದ ಮೂರನೇ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಗುಜರಾತಿನ ಗಾಂಧಿನಗರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ (PM Narendra Modi) ರೈಲಿನಲ್ಲಿ ಗಾಂಧಿನಗರದಿಂದ ಅಹಮ್ಮದಾಬಾದ್‌ಗೆ ಪ್ರಯಾಣ ಮಾಡಿದರು   

Manjunath Nayak | Published : Sep 30 2022, 01:13 PM
1 Min read
Share this Photo Gallery
  • FB
  • TW
  • Linkdin
  • Whatsapp
  • Google NewsFollow Us
15
Asianet Image

ಪ್ರಧಾನಿ ನರೇಂದ್ರ ಮೋದಿ ಗುಜರಾತಿನ ಗಾಂಧಿನಗರದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಹೊಸ ಮತ್ತು ನವೀಕರಿಸಿದ ರೈಲನ್ನು ಉದ್ಘಾಟಿಸಿದರು. ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ಮೋದಿ ಮೋದಿ ಘೋಷಣೆಗಳು ಮೊಳಗಿತ್ತು. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಚಾಲನೆ ಮಾಡುತ್ತಿದ್ದಂತೆ  ವಂದೇ ಭಾರತ್ ಘೋಷಣೆ ಮೊಳಗಿತು. 
 

25
Asianet Image

ಉದ್ಘಾಟನೆ ಬಳಿಕ ಪ್ರಧಾನಿ ಮೋದಿ ಗಾಂಧಿನಗರದಿಂದ ಅಹಮದಾಬಾದ್‌ನ ಕಲುಪುರ್ ರೈಲು ನಿಲ್ದಾಣದವರೆಗೆ ರೈಲಿನಲ್ಲಿ ಪ್ರಯಾಣಿಸಿದರು. ರೈಲಿನಲ್ಲಿ ಪ್ರಧಾನಿ ಮೋದಿ, ವಂದೇ ಭಾರತ್ ರೈಲು ತಯಾರಿಕೆಯಲ್ಲಿ ದುಡಿದ ಕಾರ್ಮಿಕರು, ಇಂಜಿನೀಯರ್ಸ್ ಹಾಗೂ ಇತರ ಸಿಬ್ಬಂದಿಗಳ ಜೊತೆ ಸಂವಾದ ನಡೆಸಿದರು. 

35
Asianet Image

ಗಾಂಧಿನಗರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಉದ್ಘಾಟನಾ ಸಮಾರಂಭದಲ್ಲಿ ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ರೈಲ್ವೇ ಸಚಿವ ಅಶ್ವಿನ್ ವೈಷ್ಣವ್, ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಸೇರಿದಂತೆ ಹಲವು ಹಣ್ಯರು ಹಾಜರಿದ್ದರು. 
 

45
Asianet Image

ವಂದೇ ಭಾರತ್ ರೈಲಿನಲ್ಲಿ ಪ್ರಯಾಣದ ವೇಳೆ ಮೋದಿ ಮಹಿಳಾ ಉದ್ಯಮಿಗಳು, ಸಂಶೋಧಕರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಮಾತುಕತೆ ನಡೆಸಿದರು. ಗಾಂಧಿನಗರದಿಂದ ರೈಲಿನಲ್ಲಿ ಪ್ರಯಾಣಿಸಿದ ಮೋದಿ ಅಹಮ್ಮದಾಬಾದ್‌ಗೆವರೆಗೆ ಪ್ರಯಾಣಿಸಿದರು. 

55
Asianet Image

ಪ್ರಧಾನಿ ಮೋದಿ ಉದ್ಘಾಟಿಸಿರುವ ಈ ಸೆಮಿ-ಹೈ ಸ್ಪೀಡ್ ರೈಲು ಗಾಂಧಿನಗರ ಮತ್ತು ಮುಂಬೈ - ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳ ರಾಜಧಾನಿಗಳನ್ನು ಸಂಪರ್ಕಿಸುತ್ತದೆ. ರೈಲು ಅಕ್ಟೋಬರ್ 1 ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಲಿದ್ದು ಭಾನುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಪ್ರಯಾಣ ಬೆಳಸಲಿದೆ. 

Manjunath Nayak
About the Author
Manjunath Nayak
ನರೇಂದ್ರ ಮೋದಿ
ಗುಜರಾತ್
 
Recommended Stories
Top Stories