ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು
ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ.

ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ. ಆಪರೇಷನ್ ಸಿಂದೂರ ಕಾರ್ಯಾಚರಣೆಯ ಯಶಸ್ಸಿನ ಬಳಿಕ ಪ್ರಧಾನಿಗಳು ಮೊದಲು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇಂದು ರಾತ್ರಿ 8 ಗಂಟೆಗೆ ಪ್ರಧಾನಿಗಳು ಏನು ಮಾತನಾಡಲಿದ್ದಾರೆ ಎಂಬುದರ ಬಗ್ಗೆ ಭಾರತ ಮಾತ್ರವಲ್ಲದೇ ಇಡೀ ವಿಶ್ವದ ಗಮನ ಚಿತ್ತವಿದೆ. ಈಗಾಗಲೇ ಭಾರತದ ತಂಟೆಗೆ ಬಂದವರ ಸ್ಥಿತಿ ಏನಾಗುತ್ತೆ ಎಂಬುದನ್ನು ಪ್ರಧಾನಿಗಳು ತೋರಿಸಿಕೊಟ್ಟಿದ್ದಾರೆ.
ಆಪರೇಷನ್ ಸಿಂದೂರ್ ಕಾರ್ಯಾಚರಣೆ, ಪಾಕಿಸ್ತಾನಕ್ಕೆ ತಿರುಗೇಟು, ಕದನ ವಿರಾಮ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಪ್ರಧಾನಿಗಳು ಮಾತನಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಸಹ ಅಜಿತ್ ದೋವಲ್ ಸೇರಿದಂತೆ ಸೇನಾ ಮುಖ್ಯಸ್ಥರೊಂದಿಗೆ ಪ್ರಧಾನಿಗಳು ಸಾಲು ಸಾಲು ಸಭೆಗಳನ್ನು ನಡೆಸಿದ್ದಾರೆ.
ಪಹಲ್ಗಾಮ್ ದಾಳಿ ಬಳಿಕ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂದೂರ ಹೆಸರಿನಲ್ಲಿ ಕಾರ್ಯಾಚರಣೆಯನ್ನು ನಡೆಸಿತ್ತು. ಇತ್ತ ಏಪ್ರಿಲ್ 22ರ ನಂತರ ಗಡಿಯಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿಕೊಂಡು ಬಂದಿದೆ. ಭಾರತ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ 9 ಅಡಗುತಾಣಗಳ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 100ಕ್ಕೂ ಅಧಿಕ ಉಗ್ರರು ಹತರಾಗಿದ್ದಾರೆ.
ಮತ್ತೊಂದೆಡೆ ಪಾಕಿಸ್ತಾನ ರಾತ್ರಿಯಾಗುತ್ತಿದ್ದಂತೆ ಜಮ್ಮು, ಕಾಶ್ಮೀರ, ಪಂಜಾಬ್, ರಾಜಸ್ಥಾನ ಭಾಗದಲ್ಲಿ ಅಪ್ರಚೋದಿತ ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿತ್ತು. ಭಾರತೀಯ ಸೇನೆ ಈ ದಾಳಿಯನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು. ಶನಿವಾರ ಕದನವಿರಾಮ ಘೋಷನೆಯಾಗಿದ್ರೂ ರಾತ್ರಿ ಪಾಕಿಸ್ತಾನದಿಂದ ಡ್ರೋನ್ ದಾಳಿ ನಡೆದಿತ್ತು. ಇಂದು ದೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿಗಳು ಈ ಎಲ್ಲಾ ವಿಷಯಗಳ ಕುರಿತು ಮಾತನಾಡುವ ಸಾಧ್ಯತೆಗಳಿವೆ .