ರಾಹುಲ್ ಗಾಂಧಿಗೆ ಸಮನ್ಸ್ ಹೀಗಿದೆ ಪ್ರತಿಭಟನೆಯ ತೀವ್ರತೆ, ಪೊಲೀಸರ ಜೊತೆ ಹೆಣ್ಮಕ್ಕಳ ಜಟಾಪಟಿ!
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜೂನ್ 15ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಹುಲ್ ಗಾಂಧಿ ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿದ್ದರು. ರಾಹುಲ್ ಗಾಂಧಿ ಅವರ ಉತ್ತರದಿಂದ ಅಧಿಕಾರಿಗಳು ತೃಪ್ತರಾಗದ ಕಾರಣ ಅವರನ್ನು ವಿಚಾರಣೆಗಾಗಿ ಇಡಿ ಕಚೇರಿಗೆ ಕರೆಸಲಾಯಿತು ಇದು ಮೂರನೇ ದಿನವಾಗಿದೆ. ಮೊದಲು ಜೂನ್ 13 ರಂದು 10 ಗಂಟೆಗಳ ಕಾಲ ಮತ್ತು ಜೂನ್ 14 ರಂದು ಸುಮಾರು 11 ಗಂಟೆಗಳ ಕಾಲ ಅವರನ್ನು ವಿಚಾರಣೆ ನಡೆಸಲಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಪ್ರತಿಭಟನೆ ಮುಂದುವರೆಯಿತು. ಬುಧವಾರ ಮಹಿಳಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ದೆಹಲಿಯ ಪಕ್ಷದ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, "ನಾವು ಭಯೋತ್ಪಾದಕರೇ? ನಮಗೇಕೆ ಭಯ? ಅವರು ಕಾಂಗ್ರೆಸ್ ಮುಖಂಡ-ಕಾರ್ಯಕರ್ತರ ಮೇಲೆ ಪೊಲೀಸ್ ಬಲಪ್ರಯೋಗ ಮಾಡುತ್ತಿದ್ದಾರೆ" ಎಂದು ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಸತತ ಮೂರನೇ ದಿನವೂ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಿದ್ದಾರೆ. 51 ವರ್ಷದ ರಾಹುಲ್ ಗಾಂಧಿ ಅವರು ತಮ್ಮ Z+ ವರ್ಗದ ಸಿಆರ್‌ಪಿಎಫ್ ಭದ್ರತಾ ಬೆಂಗಾವಲು ಪಡೆಗಳೊಂದಿಗೆ ಮಧ್ಯ ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಡಿ ಪ್ರಧಾನ ಕಚೇರಿಗೆ ಬೆಳಗ್ಗೆ 11.35 ರ ಸುಮಾರಿಗೆ ಆಗಮಿಸಿದರು.
ಇಡಿ ಕಚೇರಿಯ ಸುತ್ತ ಪೊಲೀಸ್ ಮತ್ತು ಅರೆಸೇನಾ ಪಡೆಗಳ ದೊಡ್ಡ ತುಕಡಿಯನ್ನು ನಿಯೋಜಿಸಲಾಗಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಿತ ಆದೇಶಗಳು ಜಾರಿಯಲ್ಲಿವೆ. (ರಾಹುಲ್ ಗಾಂಧಿ ಅವರನ್ನು ಇಡಿ ಪ್ರಶ್ನಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ)
ಇಡಿ ಕಚೇರಿಯ ಸುತ್ತ ಪೊಲೀಸ್ ಮತ್ತು ಅರೆಸೇನಾ ಪಡೆಗಳ ದೊಡ್ಡ ತುಕಡಿಯನ್ನು ನಿಯೋಜಿಸಲಾಗಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಿತ ಆದೇಶಗಳು ಜಾರಿಯಲ್ಲಿವೆ. (ರಾಹುಲ್ ಗಾಂಧಿ ಅವರನ್ನು ಇಡಿ ಪ್ರಶ್ನಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ)
ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ಪೊಲೀಸರು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯನ್ನು ಬಂಧಿಸಿದ ಲೇಡಿ ಪೊಲೀಸರು. ಇಡಿ ಪ್ರಕರಣದಲ್ಲಿ ಕಾಂಗ್ರೆಸ್ ಬಿಜೆಪಿಯನ್ನು ದೂರುತ್ತಿದೆ.