- Home
- News
- India News
- ಗೋಲ್ಡನ್ ಚಾರಿಯಟ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂದಲೆಳೆ ಅಂತರದಲ್ಲಿ ಪಾರು!
ಗೋಲ್ಡನ್ ಚಾರಿಯಟ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂದಲೆಳೆ ಅಂತರದಲ್ಲಿ ಪಾರು!
RSS Chief Mohan Bhagwat: ಉತ್ತರ ಪ್ರದೇಶದ ಕಾನ್ಪುರದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವೇಳೆ ಗೋಲ್ಡನ್ ಚಾರಿಯಟ್ ಎಕ್ಸ್ ಪ್ರೆಸ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಇದೇ ರೈಲಿನಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದರು ಸುರಕ್ಷಿತ.

ಗೋಲ್ಡನ್ ಚಾರಿಯಟ್ ಎಕ್ಸ್‌ಪ್ರೆಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ
ಉತ್ತರಪ್ರದೇಶ ಕಾನ್ಪುರದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ 'ಗೋಲ್ಡನ್ ಚಾರಿಯಟ್' ಎಕ್ಸ್‌ಪ್ರೆಸ್(ರೈಲು ಸಂಖ್ಯೆ 12003) ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಗುರುವಾರ ಸಂಜೆ 7.15ರ ಸುಮಾರಿಗೆ ನಡೆದಿದೆ.
RSS ಮುಖ್ಯಸ್ಥ ಮೋಹನ್ ಭಾಗವತ್ ಸುರಕ್ಷಿತ
ವಿಶೇಷ ಎಂದರೆ ಇದೇ ರೈಲಿನಲ್ಲಿ ಆರ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದರು. ದುಷ್ಕರ್ಮಿಗಳು ಎಸೆದ ಕಲ್ಲುಗಳು E1 ಕೋಚ್‌ನ ಕಿಟಕಿಗೆ ಬಡಿದ ಪರಿಣಾಮ ಗಾಜು ಪುಡಿಪುಡಿಯಾಗಿದೆ. ಅದೃಷ್ಟವಶಾತ್ ಇದೇ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಮೋಹನ್ ಭಾಗವತ್ ಸುರಕ್ಷಿತವಾಗಿದ್ದಾರೆ. ಘಟನೆ ಸಂಬಂಧ ಪೊಲೀಸರು ಓರ್ವನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಗೋಲ್ಡನ್ ಚಾರಿಯಟ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ, ಪ್ರಾಣಾಪಾಯ ಇಲ್ಲ
ಈ ಘಟನೆ ಫಿರೋಜಾಬಾದ್ ಮತ್ತು ಮಖನ್‌ಪುರ ನಡುವೆ ಪ್ರಯಾಣಿಸುತ್ತಿದ್ದಾಗ ಸಂಭವಿಸಿದೆ. ಇದೇ ರೈಲಿನಲ್ಲಿ ಆರೆಸ್ಸೆಸ್ ಮುಖ್ಯಸ್ಥ ಪ್ರಯಾಣಿಸುತ್ತಿರುವುದು ರೈಲ್ವೆ ಭದ್ರತಾ ಸಿಬ್ಬಂದಿಗೆ ತಿಳಿದು ಇನ್ನಷ್ಟು ಆತಂಕದ ವಾತಾವರಣ ಸೃಷ್ಟಿಸಿತು. ಸಮಾಧಾನಕಾರಿ ಸಂಗತಿಯೆಂದರೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರೂ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯಾವುದೇ ಪ್ರಯಾಣಿಕರಿಗೆ ಪ್ರಾಣಾಪಾಯ ಸಂಭವಿಸಿಲ್ಲ.
ತನಿಖೆ ಚುರುಕುಗೊಳಿಸಿದ ಭದ್ರತಾ ಸಂಸ್ಥೆಗಳು
ಈ ಘಟನೆಯನ್ನ ಭದ್ರತಾ ಸಂಸ್ಥೆಗಳು ಗಂಭೀರವಾಗಿ ಪರಿಗಣಿಸಿದ್ದು, ಸದ್ಯ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ವ್ಯಕ್ತಿ ಯಾರು? ಯಾಕಾಗಿ ಕಲ್ಲು ತೂರಿದ್ದು, ವ್ಯಕ್ತಿಯ ಹಿನ್ನೆಲೆ ಜಾಲಾಡುತ್ತಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ರೈಲ್ವೆ ಪೊಲೀಸರು ರೈಲ್ವೆ ಸುರಕ್ಷತೆಗೆ ಇನ್ನಷ್ಟು ಭದ್ರತೆ ಹೆಚ್ಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

