- Home
- News
- India News
- ಸಿಎಂ ಆಗಿ ಸುವೇಂದು ಪ್ರಮಾಣವಚನ, ವೇದಿಕೆಯಲ್ಲಿ ಬಂಗಾಳ ಬಿಜೆಪಿಯ ಹಿರಿಯ ನಾಯಕನ ಕಾಲಿಗೆ ನಮಸ್ಕರಿಸಿದ ಪ್ರಧಾನಿ ಮೋದಿ!
ಸಿಎಂ ಆಗಿ ಸುವೇಂದು ಪ್ರಮಾಣವಚನ, ವೇದಿಕೆಯಲ್ಲಿ ಬಂಗಾಳ ಬಿಜೆಪಿಯ ಹಿರಿಯ ನಾಯಕನ ಕಾಲಿಗೆ ನಮಸ್ಕರಿಸಿದ ಪ್ರಧಾನಿ ಮೋದಿ!
ದಶಕಗಳ ನಂತರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬಂಗಾಳದಲ್ಲಿ ಬಿಜೆಪಿ ಯುಗ ಆರಂಭ
ದಶಕಗಳ ಕಾಯುವಿಕೆಯ ನಂತರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಕೆ ಆರಂಭವಾಗಿದೆ. ಶನಿವಾರ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಸುವೇಂದು ಅಧಿಕಾರಿ ಅವರು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಘಟಾನುಘಟಿ ನಾಯಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಮಾರಂಭ
ಸಮಾರಂಭದ ಅತ್ಯಂತ ಭಾವುಕ ಕ್ಷಣವೆಂದರೆ, ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆಯ ಮೇಲಿದ್ದ ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನ್ ಲಾಲ್ ಸರ್ಕಾರ್ ಅವರಿಗೆ ಗೌರವ ಸಲ್ಲಿಸಿದ್ದು. ಬಂಗಾಳದಲ್ಲಿ ದಶಕಗಳಿಂದ ಪಕ್ಷಕ್ಕಾಗಿ ದುಡಿದಿರುವ ಸರ್ಕಾರ್ ಅವರ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ, ನಂತರ ಅವರನ್ನು ಆಲಂಗಿಸಿಕೊಂಡು ಶುಭ ಹಾರೈಸಿದರು. ಸಾಮಾನ್ಯ ಕಾರ್ಯಕರ್ತನಿಗೆ ಪ್ರಧಾನಿ ನೀಡಿದ ಈ ಗೌರವ ನೆರೆದಿದ್ದ ಲಕ್ಷಾಂತರ ಜನರ ಮೆಚ್ಚುಗೆಗೆ ಪಾತ್ರವಾಯಿತು.
ರವೀಂದ್ರನಾಥ ಟ್ಯಾಗೋರ್ ಸ್ಮರಿಸಿದ ಮೋದಿ
ಅದರೊಂದಿಗೆ ಇಂದು ವಿಶ್ವಕವಿ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮದಿನವಾದ್ದರಿಂದ (ರವೀಂದ್ರ ಜಯಂತಿ), ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಟ್ಯಾಗೋರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಿದರು.
ಎನ್‌ಡಿಎ ನಾಯಕರ ದಂಡು
ಈ ಸಮಾರಂಭವು ಎನ್‌ಡಿಎ ಮೈತ್ರಿಕೂಟದ ಶಕ್ತಿ ಪ್ರದರ್ಶನದಂತೆಯೂ ಇತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಜೆ.ಪಿ. ನಡ್ಡಾ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಪಾಲ್ಗೊಂಡಿದ್ದರು. ಅಲ್ಲದೆ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಆಂಧ್ರಪ್ರದೇಶದ ಸಿಎಂ ಎನ್. ಚಂದ್ರಬಾಬು ನಾಯ್ಡು ಮತ್ತು ಹರಿಯಾಣ ಸಿಎಂ ನಾಯಬ್ ಸಿಂಗ್ ಸೈನಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
ಹರಿಯಾಣ ಸಿಎಂ ಹರ್ಷ
ಹರಿಯಾಣ ಸಿಎಂ ನಾಯಬ್ ಸಿಂಗ್ ಸೈನಿ, "ಇಂದು ಪಶ್ಚಿಮ ಬಂಗಾಳಕ್ಕೆ ಐತಿಹಾಸಿಕ ದಿನ. ಪ್ರಧಾನಿ ಮೋದಿಯವರ 'ವಿಕಸಿತ ಭಾರತ 2047' ಕನಸನ್ನು ನನಸು ಮಾಡುವಲ್ಲಿ ಈ ನೂತನ ಸರ್ಕಾರ ಪ್ರಮುಖ ಪಾತ್ರ ವಹಿಸಲಿದೆ" ಎಂದು ಆಶಯ ವ್ಯಕ್ತಪಡಿಸಿದರು. ಕೋಲ್ಕತ್ತಾದ ಮೈದಾನವು ಕೇಸರಿ ಮಯವಾಗಿದ್ದು, ಲಕ್ಷಾಂತರ ಕಾರ್ಯಕರ್ತರು ಈ ಐತಿಹಾಸಿಕ ಬದಲಾವಣೆಯನ್ನು ಸಂಭ್ರಮಿಸಿದರು. ಸುವೇಂದು ಅಧಿಕಾರಿ ಅವರ ನೇತೃತ್ವದಲ್ಲಿ ಬಂಗಾಳದ ಆಡಳಿತದಲ್ಲಿ ಹೊಸ ಬದಲಾವಣೆಯ ನಿರೀಕ್ಷೆ ಮೂಡಿದೆ.
ಅಭಿಮಾನಿಗಳ ಜಲ್ಮುರಿ ಸ್ಮರಣೆ
ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ಬ್ರಿಗೇಡ್ ಪೆರೇಡ್ ಮೈದಾನದೊಳಗೆ ಸ್ಥಾಪಿಸಲಾದ ಅಂಗಡಿಯಲ್ಲಿ ಜನರು 'ಜಲ್ಮುರಿ' ತಿಂದು ಸಂಭ್ರಮಿಸಿದ್ದಾರೆ. ಪಶ್ಚಿಮ ಬಂಗಾಳದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಸುವೇಂದು ಅಧಿಕಾರಿ ಇಲ್ಲಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

