ಯಲಹಂಕ ಕೋವಿಡ್ ಆಸ್ಪತ್ರೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
ಬೆಂಗಳೂರು(ಜು. 01) ಬೋಯಿಂಗ್ ಸಂಸ್ಥೆಯು, ಸೆಲ್ಕೋ ಡಾಕ್ಟರ್ಸ್ ಫಾರ್ ಯು ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೋವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಯಲಹಂಕದಲ್ಲಿ ಬೋಯಿಂಗ್ ಸಂಸ್ಥೆಯು ಕೋವಿಡ್ ಕೇರ್ ಆಸ್ಪತ್ರೆ ನಿರ್ಮಿಸುತ್ತಿರುವ ವಿಷಯವನ್ನು ನಿರ್ಮಲಾ ಸೀತಾರಾಮನ್ ಈ ಮೊದಲೇ ತಿಳಿಸಿದ್ದರು.
ಸಿಎಂ ಬಿಎಸ್ ಯಡಿಯೂರಪ್ಪ ಧನ್ಯವಾದ ಹೇಳಿದ್ದರು.
ಬೋಯಿಂಗ್ ಸಂಸ್ಥೆಯು ಕೋವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿರುವ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದರು.
ಕಾರ್ಪೋರೇಟ್ ಕಂಪನಿಗಳು ಸಾಂಪ್ರದಾಯಿಕ ಜವಾಬ್ದಾರಿ ಮೆರೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣಾ ಉಪಸ್ಥಿತರಿದ್ದರು.