ಪ್ರಧಾನಿ ಮೋದಿ ಕಾಲಿಗೆರಗಿ ಆಶೀರ್ವಾದ ಪಡೆದ ಐಪಿಎಲ್ ಸೆನ್ಸೇಶನ್ ವೈಭವ್ ಸೂರ್ಯವಂಶಿ
ಐಪಿಎಲ್ ಟೂರ್ನಿಯ ಸೆನ್ಸೇಶನ್, 14 ವರ್ಷದ ವೈಭವ್ ಸೂರ್ಯವಂಶಿ ಹಾಗೂ ಕ್ರಿಕೆಟಿನ ಪೋಷಕರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ. ಈ ವೇಳೆ ಸೂರ್ಯವಂಶಿ ಮೋದಿ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕೇವಲ 14 ವರ್ಷದ ವೈಭವ್ ಸೂರ್ಯವಂಶಿ ಅದ್ಭುತ ಪ್ರದರ್ಶನದ ಮೂಲಕ ಮಿಂಚಿದ್ದಾರೆ. ಈ ಮೂಲಕ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಕೇವಲ 14ನೇ ವಯಸ್ಸಿಗೆ ಸೆಂಚುರಿ, ಸ್ಫೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದ್ದಾರೆ. ವೈಭವ್ ಸೂರ್ಯವಂಶಿ ಯುವ ಸಮೂಹಕ್ಕೆ ಸ್ಪೂರ್ತಿಯಾಗಿದ್ದಾರೆ. ಐಪಿಎಲ್ ಟೂರ್ನಿಯ ಸೆನ್ಸೇಶನ್ ವೈಭವ್ ಸೂರ್ಯವಂಶಿ ಹಾಗೂ ಕ್ರಿಕೆಟಿನ ಪೋಷಕರನ್ನು ಇಂದು ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯ ಬಿಹಾರ ಪ್ರವಾಸದ ವೇಳೆ ಈ ಭೇಟಿ ನಡೆದಿದೆ. ಪಾಟ್ನ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಭವ್ ಸೂರ್ಯವಂಶಿ ಹಾಗೂ ಸೂರ್ಯವಂತಿ ಪೋಷಕರನ್ನು ಭೇಟಿಯಾಗಿದ್ದಾರೆ. ಕೆಲ ಹೊತ್ತು ಇವರ ಜೊತೆ ಮಾತನಾಡಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿಯನ್ನು ಮೋದಿ ಅಭಿನಂದಿಸಿದ್ದಾರೆ. ಪ್ರದರ್ಶನ ಹೀಗೆ ಮುಂದುವರಿಯಲಿ ಎಂದಿದ್ದಾರೆ.
ಉತ್ತಮ ಪ್ರದರ್ಶನದ ಮೂಲಕ ಟೀಂ ಇಂಡಿಯಾದಲ್ಲೂ ಮಿಂಚಲಿ ಎಂದು ವೈಭವ್ ಸೂರ್ಯವಂಶಿಗೆ ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ. ಇತ್ತ ಪೋಷಕರ ಜೊತೆಗೊ ಮೋದಿ ಮಾತನಾಡಿದ್ದಾರೆ. ಅತೀ ಚಿಕ್ಕ ವಯಸ್ಸಿನಲ್ಲೇ ವೈಭವ್ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿದ್ದೀರಿ, ಅಭಿನಂದನೆಗಳು ಎಂದು ಮೋದಿ ಹೇಳಿದ್ದಾರೆ.
ಮಾತುಕತೆಯ ಕೊನೆಯಲ್ಲಿ ವೈಭವ್ ಸೂರ್ಯವಂಶಿ ಪ್ರಧಾನಿ ಮೋದಿ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ. ಆತ್ಮೀಯ ಮಾತುಕತೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಅದ್ಭುತ ಪ್ರದರ್ಶದನ ಮೂಲಕ ಮಿಂಚಿದ ವೈಭವ್ ಸೂರ್ಯವಂಶಿ ಇದೀಗ ಯುವ ಕ್ರಿಕೆಟಿಗರ ರೋಲ್ ಮಾಡೆಲ್ ಆಗಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿ ಇತ್ತೀಚೆಗೆ ಭಾರತ ಅಂಡರ್ 19 ತಂಡಕ್ಕೂ ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಅಂಡರ್ 19 ಟೂರ್ನಿಗೆ ಪ್ರವಾಸ ಮಾಡಲಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಸೂರ್ಯವಂಶಿ ಗುಜರಾತ್ ಟೈಟಾನ್ಸ್ ವಿರುದ್ದ 38 ಎಸೆತದಲ್ಲಿ 101 ರನ್ ಸಿಡಿಸಿ ಮಿಂಚಿದ್ದರು. ಈ ಮೂಲಕ ಅತೀ ಕಿರಿಯ ವಯಸ್ಸಿಗೆ ಸೆಂಚುರಿ ಸಿಡಿಸಿದ ಐಪಿಎಲ್ ಕ್ರಿಕೆಟಿಗ ಅನ್ನೋ ದಾಖಲೆ ಬರೆದಿದ್ದಾರೆ.
ಐಪಿಎಲ್ 2025 ಟೂರ್ನಿ ಮೂಲಕ ಪ್ರೀಮಿಯರ್ ಲೀಗ್ ಟೂರ್ನಿಗೆ ಪಾದಾರ್ಪಣೆ ಮಾಡಿದ ಸೂರ್ಯವಂಶಿ 7 ಪಂದ್ಯದಲ್ಲಿ 252 ರನ್ ಸಿಡಿಸಿದ್ದಾರೆ. ವೈಭವ್ ಸೂರ್ಯವಂಶಿ ಸ್ಟ್ರೈಕ್ ರೇಟ್ 206.55 ಐಪಿಎಲ್ ಟೂರ್ನಿಗೂ ಮೊದಲು ವೈಭವ್ ಸೂರ್ಯವಂಶಿ ಯೂಥ್ ಟೆಸ್ಟ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 58 ಎಸೆತದಲ್ಲಿ ಶತಕ ಸಿಡಿಸಿದ್ದರು.