ಕರ್ನಾಟಕ ಸೇರಿ 17 ರಾಜ್ಯಗಳಿಗೆ ಹವಾಮಾನ ಇಲಾಖೆ ಮಳೆ ಎಚ್ಚರಿಕೆ, ಹಲೆವೆಡೆ ರಜೆ ಘೋಷಣೆ
ಕರ್ನಾಟಕ ಸೇರಿದಂತೆ 17 ರಾಜ್ಯಗಳಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ. ಈ ಪೈಕಿ ಕೆಲೆವೆಡೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾವ ರಾಜ್ಯಗಳಿಗೆ ಯಾವ ಅಲರ್ಟ್?

ಮಳೆ ಅಲರ್ಟ್, 17 ರಾಜ್ಯಗಳಿಗೆ ಎಚ್ಚರಿಕೆ
ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ಇದೀಗ ಜುಲೈ ಅಂತ್ಯದಲ್ಲಿದ್ದರೂ ಹಲವು ಕಡೆ ಸರಿಯಾದ ಪ್ರಮಾಣದಲ್ಲಿ ಮಳೆಯಾಗಿಲ್ಲ. ಇನ್ನು ಅಸ್ಸಾಂ, ಗುಜರಾತ್, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಕರ್ನಾಟಕ ಕೆಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾದರೆ, ಬಹುತೇಕ ಜಿಲ್ಲೆಗಳು ಬರಪೀಡಿತವಾಗಿದೆ. ಇದೀಗ ಹವಾಮಾನ ಇಲಾಖೆ ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ ಅಲರ್ಟ್ ನೀಡಿದೆ. ಉತ್ತರ ಭಾರತಗಳಲ್ಲಿ ಮಳೆ ತೀವ್ರಗೊಳ್ಳುತ್ತಿದ್ದರೆ, ದಕ್ಷಿಣ ಭಾರತದಲ್ಲಿ ಕ್ಷೀಣಿಸುತ್ತಿದೆ.
ಕರ್ನಾಟಕ ಕರಾವಳಿಗೆ ಮಳೆ
ಕರ್ನಾಟಕ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಆದರೆ ಕರ್ನಾಟರ ಇತರ ಭಾಗದಲ್ಲಿ ಮಳೆ ಕೊರತೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ, ಕಾರವಾರ, ಉತ್ತರಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆ ಸೂಚನೆ ನೀಡಲಾಗಿದೆ. ಆದರೆ ಕೊಡಗು ಸೇರಿದಂತೆ ಇತರ ಹಲವೆಡೆ ಮಳೆ ಕೊರತೆ ಎದುರಾಗಲಿದೆ. ಕೊಡಗಿನ ಮಳೆ ಕೊರತೆಯಿಂದ ಕಾವೇರಿ ತುಂಬಿ ಹರಿಯದೆ ಕೆಆರ್‌ಎಸ್ ಸೇರಿದಂತೆ ರಾಜ್ಯದ ಪ್ರಮುಖ ಭಾಗದಲ್ಲಿ ನೀರಿನ ಕೊರತೆಯಾಗುವ ಸಾಧ್ಯತೆ ಇದೆ.
ಭಾರಿ ಮಳೆ, ರೆಡ್ ಅಲರ್ಟ್
ಈಶಾನ್ಯ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು, ಅಸ್ಸಾಂನಲ್ಲಿ ಕಳೆದ 60 ವರ್ಷದಲ್ಲಿ ಆಗದಂತೆ ಮಳೆಯಿಂದ ಪ್ರವಾಹ ಸೃಷ್ಟಿಯಾಗಿದೆ. ಹಲವರು ಮೃತಪಟ್ಟಿದ್ದರೆ, ಮನೆಗಳು, ಕಟ್ಟಡಗಳು, ಕಾರು, ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ರಕ್ಷಣಾ ತಂಡಗಳು, ಕಾರ್ಯಾಚರಣೆ ತೀವ್ರಗೊಂಡಿದೆ. ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಅಸ್ಸಾಂನಲ್ಲಿ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಉತ್ತರ ಭಾರತದಲ್ಲೂ ಮಳೆ ಎಚ್ಚರಿಕೆ
ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಉತ್ತರಖಂಡ್ ರಾಜ್ಯಗಳಲ್ಲಿ ಭಾರಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಇದೆ ಎಂದಿದೆ. ಭೂಕುಸಿತ ಸಂಭವಿಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆಯಿಂದ ಹಲವು ಪ್ರದೇಶಗಳ ರಸ್ತೆ ಸಂಪರ್ಕ ಕಡಿದುಕೊಂಡಿದೆ. ಹಿಮಾಚಲ ಪ್ರದೇಶ ಹಾಗೂ ಉತ್ತರಖಂಡದಲ್ಲಿ ಭೂಕುಸಿತಗಳು ಸಂಭವಿಸಿದೆ.
ಇಂದಿನಿಂದೆ ಕೆಲ ರಾಜ್ಯದಲ್ಲಿ ಮಳೆ
ಪಂಜಾಬ್,ಚಂಡಿಘಡ, ಉತ್ತರ ಪ್ರದೇಶ,ರಾಜಸ್ಥಾನ, ಹರ್ಯಾಣದ ಕೆಲ ಭಾಗದಲ್ಲಿ ಇಂದಿನಿಂದ ಮಳೆ ತೀವ್ರಗೊಳ್ಳಲಿದೆ. ಈ ರಾಜ್ಯದ ಕೆಲ ಭಾಗದಲ್ಲಿ ಒಂದೇ ಸಮನೇ ಮಳೆ ಸುರಿದು ಪ್ರವಾಹ ಪರಿಸ್ಥಿತಿಗಳು ಸೃಷ್ಟಿಯಾಗಲಿದೆ. ಆದರೂ ಈ ರಾಜ್ಯಗಳು ಮಳೆ ಕೊರತೆ ಎದುರಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಒಡಿಶಾದ ಕೆಲ ಭಾಗದಲ್ಲಿ ಶಾಲಾ ಕಾಲೇಜಿಗೆ ರಜೆ
ಮಧ್ಯಪ್ರದೇಶ, ಚತ್ತೀಸಘಡ ಸೇರಿದಂತೆ ಹಲೆವೆಡೆ ಭಾರಿ ಮಳೆ ಜನಜೀವನ ಅಸ್ತವ್ಯಸ್ತ ಮಾಡಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಇನ್ನು ಒಡಿಶಾದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಒಡಿಶಾ ಕರಾವಳಿ ತೀರದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

