ಟ್ರೆಂಡಿಂಗ್ ನೋಡುತ್ತಲೇ ತಮ್ಮ ಕಾರ್ಯಕರ್ತರಿಗೆ ಮಹತ್ವದ ಸಂದೇಶ ನೀಡಿದ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಟಿಎಂಸಿಗೆ ಆಘಾತ ನೀಡಿದೆ. ಈ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಕಾರ್ಯಕರ್ತರಿಗೆ ಮತಗಟ್ಟೆಗಳನ್ನು ಬಿಟ್ಟು ಬರಬಾರದೆಂದು ಮತ್ತು ಫಲಿತಾಂಶ ಸಂಜೆಯ ವೇಳೆಗೆ ಬದಲಾಗಬಹುದೆಂದು ಸಂದೇಶ ನೀಡಿದ್ದಾರೆ.

ಟಿಎಂಸಿಗೆ ಬಿಗ್ ಶಾಕ್
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅತ್ಯಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತರೂಢ ಟಿಎಂಸಿಗೆ ಬಿಗ್ ಶಾಕ್ ಎದುರಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಬ್ಯಾನರ್ಜಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮಹತ್ವದ ಸಂದೇಶ ನೀಡಿದ್ದಾರೆ.
ಕಾರ್ಯಕರ್ತರಿಗೆ ದೀದಿ ಸಂದೇಶ
ಸದ್ಯದ ಟ್ರೆಂಡ್ ನೋಡಿಕೊಂಡು ಕಾರ್ಯಕರ್ತರು, ಪಕ್ಷದ ಏಜೆಂಟ್‌ಗಳು ಮತಗಟ್ಟೆಯಿಂದ ಹೊರಗಡೆ ಬರಬೇಡಿ. ಸದ್ಯ ಕೇವಲ ಮೂರ್ನಾಲ್ಕು ಸುತ್ತುಗಳ ಮತಎಣಿಕೆ ನಡೆದಿದೆ. ಸಂಜೆ ವೇಳೆಗೆ ಫಲಿತಾಂಶ ಬದಲಾಗಲಿದೆ. ಹಾಗಾಗಿ ಮತಗಟ್ಟೆಯಿಂದ ಹೊರಬರದಂತೆ ಮಮತಾ ಬ್ಯಾನರ್ಜಿ ಮನವಿ ಮಾಡಿಕೊಂಡಿದ್ದಾರೆ.
148 ಮ್ಯಾಜಿಕ್ ನಂಬರ್
ಪಶ್ಚಿಮ ಬಂಗಾಳದ 294 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸರ್ಕಾರ ರಚನೆಗೆ 148 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಿದೆ. ಸದ್ಯದ ಅಂಶಗಳ ಪ್ರಕಾರ, ಬಿಜೆಪಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ರೆ, ಟಿಎಂಸಿ 99ರಲ್ಲಿ ಮುನ್ನಡೆಯಲ್ಲಿದೆ.
ಮಮತಾ ಬ್ಯಾನರ್ಜಿಗೆ ಮುನ್ನಡೆ
ಮತ್ತೊಂದೆಡೆ ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಭಾರೀ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಇತ್ತ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ಮತದಾನ ನಡೆದಿದೆ.
জরুরি বার্তা pic.twitter.com/Uc82oihwEL
— Mamata Banerjee (@MamataOfficial) May 4, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

