ಮಥುರಾದಲ್ಲಿ ಮದ್ಯ, ಮಾಂಸ ಮಾರಾಟ ಸಂಪೂರ್ಣ ನಿಷೇಧ
ಮಥುರಾದಲ್ಲಿ ಮದ್ಯ, ಮಾಂಸ ಮಾರಾಟವಿಲ್ಲ ಸಂಪೂರ್ಣ ನಿಷೇಧ ಹೇರಿದ ಸಿಎಂ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಿದ್ದಾರೆ. ನಿಷೇಧಕ್ಕೆ ಯೋಜನೆಗಳನ್ನು ರೂಪಿಸಲು ಹಾಗೂ ಇತರ ವ್ಯಾಪಾರಗಳಲ್ಲಿ ತೊಡಗಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಲಕ್ನೋದಲ್ಲಿ ನಡೆದ ಕೃಷ್ಣೋತ್ಸವ 2021 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಾತನಾಡಿ ಈ ವಿಚಾರವನ್ನು ಘೋಷಿಸಿದ್ದಾರೆ. ಈ ಮೂಲಕ ಮಥುರಾದಲ್ಲಿ ಸಂಪೂರ್ಣವಾಗಿ ಮದ್ಯ ಮತ್ತು ಮಾಂಸ ಮಾರಾಟ ನಿಷೇಧವಾಗಿದೆ.
ಮದ್ಯ ಮತ್ತು ಮಾಂಸ ವ್ಯಾಪಾರದಲ್ಲಿ ತೊಡಗಿರುವವರು ಮಥುರಾ ವೈಭವವನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಹಾಲಿನ ಮಾರಾಟವನ್ನು ಕೈಗೊಳ್ಳಬಹುದು ಎಂದು ಅವರು ಸಲಹೆ ನೀಡಿದ್ದಾರೆ. ಇಲ್ಲಿ ದೊಡ್ಡ ಪ್ರಮಾಣದಲ್ಲಿ ಹಾಲನ್ನು ಉತ್ಪಾದಿಸಲಾಗುತ್ತದೆ.
ಆದಿತ್ಯನಾಥ್ ಕೂಡ ಶ್ರೀಕೃಷ್ಣನನ್ನು ಪ್ರಾರ್ಥಿಸಿ ಕೊರೊನಾ ಸೋಂಕನ್ನು ಹೋಗಲಾಡಿಸಲು ಪ್ರಾರ್ಥಿಸಿದರು. ಬ್ರಿಜ್ ಭೂಮಿಯನ್ನು ಅಭಿವೃದ್ಧಿಪಡಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಮತ್ತು ಇದಕ್ಕಾಗಿ ಯಾವುದೇ ಹಣದ ಕೊರತೆಯಿಲ್ಲ ಎಂದಿದ್ದಾರೆ.
ಬಹಳ ಹಿಂದಿನಿಂದಲೂ ನಿರ್ಲಕ್ಷಿಸಲ್ಪಟ್ಟ ನಂಬಿಕೆಯ ಸ್ಥಳಗಳು ಈಗ ಪುನರುಜ್ಜೀವನಗೊಳ್ಳುತ್ತಿವೆ ಎಂದು ಅವರು ಹೇಳಿದ್ದಾರೆ. ಕ್ಯಾಬಿನೆಟ್ ಮಂತ್ರಿಗಳಾದ ಲಕ್ಷ್ಮಿ ನಾರಾಯಣ್ ಚೌಧರಿ ಮತ್ತು ಶ್ರೀಕಾಂತ್ ಶರ್ಮಾ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.
Liqour Thumb
ಮಥುರಾದಲ್ಲಿ ಮದ್ಯ ಮಾರಾಟ ಕಡಿಮೆಯಾದರೆ ವ್ಯಸನಿಗಳ ಸಂಖ್ಯೆಯೂ ಕಡಿಮೆಯಾಗುವ ಸಾಧ್ಯತೆ ಇದೆ. ಹಾಲು ಮಾರಲು ಪರ್ಯಾಯ ಅವಕಾಶ ನೀಡಿದ್ದು ಹೈನುಗಾರಿಕೆ ಅಭಿವೃದ್ಧಿಯಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ