ಐಪಿಎಲ್ 2020: ಈ 4 ತಂಡಗಳಲ್ಲಿದ್ದಾರೆ ಸೂಪರ್ ಓವರ್ ಗೆಲ್ಲಿಸಬಲ್ಲ ಸ್ಫೋಟಕ ಬ್ಯಾಟ್ಸ್‌ಮನ್‌ಗಳು..!

First Published 15, Sep 2020, 3:18 PM

ಬೆಂಗಳೂರು: ಜಗತ್ತಿನ ಅತ್ಯಂತ ಜನಪ್ರಿಯ ಕ್ರಿಕೆಟ್ ಟೂರ್ನಿಯಾದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಸೆಪ್ಟೆಂಬರ್ 19ರಿಂದ ಆರಂಭವಾಗಲಿದ್ದು, ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷೆ ಮಾಡಲಾಗುತ್ತಿದೆ.
ರೋಚಕ ಟೈನಲ್ಲಿ ಅಂತ್ಯವಾದ ಪಂದ್ಯಗಳ ಫಲಿತಾಂಶಕ್ಕಾಗಿ ಸೂಪರ್ ಓವರ್ ಮೊರೆ ಹೋಗಲಾಗುತ್ತದೆ. ಈ ಸಂದರ್ಭಗಳು ಎದುರಾದರೆ ಅದನ್ನು ಅತ್ಯಂತ ಯಶಸ್ವಿಯಾಗಿ ಎದುರಿಸಲು ಎಲ್ಲಾ ತಂಡಗಳು ಮಾನಸಿಕವಾಗಿ ಸಿದ್ದವಾಗಿರುತ್ತವೆ. ಹೀಗೇನಾದರು ಆದರೆ ಈ ನಾಲ್ಕು ತಂಡಗಳು ಬಲಿಷ್ಠ ಸೂಪರ್ ಓವರ್ ಸ್ಪೆಷಲಿಸ್ಟ್‌ಗಳನ್ನು ಹೊಂದಿದ್ದು, ಕೊನೆಯ ಕ್ಷಣದಲ್ಲಿ ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಯಾವವು ಆ 4 ತಂಡಗಳು? ಯಾರು ಆ ಆಟಗಾರರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

1. ರಾಜಸ್ಥಾನ ರಾಯಲ್ಸ್

1. ರಾಜಸ್ಥಾನ ರಾಯಲ್ಸ್

ರಾಜಸ್ಥಾನ ರಾಯಲ್ಸ್ ತಂಡವು ಜೋಸ್ ಬಟ್ಲರ್, ಡೇವಿಡ್ ಮಿಲ್ಲರ್ ಹಾಗೂ ಸಂಜು ಸ್ಯಾಮ್ಸನ್ ಅವರಂತಹ ಬಲಿಷ್ಠ ಬ್ಯಾಟ್ಸ್‌ಮನ್‌ಗಳನ್ನು ಹೊಂದಿದ್ದು, ಸೂಪರ್ ಓವರ್‌ನಲ್ಲಿ ತಂಡವನ್ನು ಗೆಲುವಿನ ದಡ ಸೇರಿಸುವ ಸಾಮರ್ಥ್ಯ ಹೊಂದಿದ್ದಾರೆ.

2. ಕಿಂಗ್ಸ್ ಇಲೆವನ್ ಪಂಜಾಬ್

2. ಕಿಂಗ್ಸ್ ಇಲೆವನ್ ಪಂಜಾಬ್

ಪ್ರೀತಿ ಝಿಂಟಾ ಸಹ ಒಡೆತನದ ಪಂಜಾಬ್ ತಂಡದಲ್ಲಿ ಸ್ಫೋಟಕ ಬ್ಯಾಟ್ಸ್‌ಮನ್‌ಗಳ ದಂಡೇ ಇದೆ. ಕ್ರಿಸ್‌ ಗೇಲ್, ಕೆ.ಎಲ್. ರಾಹುಲ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಸೂಪರ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿದ್ದಾರೆ.

3. ಕೋಲ್ಕತ ನೈಟ್‌ ರೈಡರ್ಸ್

3. ಕೋಲ್ಕತ ನೈಟ್‌ ರೈಡರ್ಸ್

ಐಪಿಎಲ್ ಟೂರ್ನಿಯಲ್ಲಿ 2 ಬಾರಿ ಚಾಂಪಿಯನ್ ತಂಡ ಕೂಡಾ ಬಲಿಷ್ಠ ಬ್ಯಾಟ್ಸ್‌ಮನ್‌ಗಳ ಪಡೆ ಹೊಂದಿದೆ. ಅದರಲ್ಲೂ ಆ್ಯಂಡ್ರೆ ರಸೆಲ್, ಇಯಾನ್ ಮಾರ್ಗನ್ ಹಾಗೂ ದಿನೇಶ್ ಕಾರ್ತಿಕ್ ಸೂಪರ್‌ ಓವರ್‌ನಲ್ಲಿ ಪಂದ್ಯದ ಫಲಿತಾಂಶವನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

4. ರಾಯಲ್ ಚಾಲೆಂಜರ್ಸ್ ಬೆಂಗಳೂರು

4. ರಾಯಲ್ ಚಾಲೆಂಜರ್ಸ್ ಬೆಂಗಳೂರು

ಬಲಿಷ್ಠ ಬ್ಯಾಟಿಂಗ್ ಲೈನ್‌ ಅಪ್ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೃಹತ್ ಮೊತ್ತವನ್ನು ಬೆನ್ನತ್ತಿ ಸುಲಭವಾಗಿ ಗೆಲುವು ದಾಖಲಿಸುವ ಸಾಮರ್ಥ್ಯ ಹೊಂದಿದೆ. ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ ಹಾಗೂ ಆ್ಯರೋನ್ ಫಿಂಚ್ ಸೂಪರ್ ಓವರ್‌ನಲ್ಲಿ ಬೃಹತ್ ಮೊತ್ತ ಕಲೆಹಾಕುವ ಇಲ್ಲವೇ ಚೇಸ್‌ ಮಾಡುವ ಸಾಮರ್ಥ್ಯ ಹೊಂದಿದೆ.

loader