ತವರಿನಲ್ಲಿ ಬ್ಯಾಟ್ ಹಿಡಿದು ಅಭ್ಯಾಸ ಆರಂಭಿಸಿದ ಧೋನಿ
ಸೆಪ್ಟೆಂಬರ್ 19ರಿಂದ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ನಡೆಯಲಿದ್ದು, ಆ.22ರಂದು ಚೆನ್ನೈ ಸೂಪರ್ ಕಿಂಗ್ಸ್ ಯುಎಇಗೆ ಹೊರಡಲಿದೆ ಎನ್ನಲಾಗಿದೆ. ತಂಡದ ನಾಯಕ ಎಂ.ಎಸ್.ಧೋನಿ, ಇಲ್ಲಿನ ಜಾರ್ಖಂಡ್ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದ್ದಾರೆ. ಧೋನಿಗಾಗಿ ಕ್ರೀಡಾಂಗಣದಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಧೋನಿ ಬ್ಯಾಟಿಂಗ್‌ಗೆ ನೆರವಾಗಲು ಒಬ್ಬ ಸಹಾಯಕನಿಗೆ ಮಾತ್ರ ಕ್ರೀಡಾಂಗಣಕ್ಕೆ ಪ್ರವೇಶ ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
13ನೇ ಆವೃತ್ತಿಯ ಐಪಿಎಲ್‌ನಲ್ಲಿ ಘರ್ಜಿಸಲು ರೆಡಿಯಾದ ಕ್ಯಾಪ್ಟನ್ ಕೂಲ್
ಯುಎಇಗೆ ವಿಮಾನ ಹತ್ತುವ ಮುನ್ನ ತವರಿನಲ್ಲೇ ಅಭ್ಯಾಸ ಶುರು ಮಾಡಿಕೊಂಡ ಮಹಿ.
ಮತ್ತೊಂದು ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿರುವ ರಾಂಚಿ ಹೀರೋ
2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಸೋಲಿನ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವೇ ಉಳಿದಿರುವ ಧೋನಿ
ಮಾರ್ಚ್ 29ರಿಂದ ಶುರುವಾಗಬೇಕಿದ್ದ ಟೂರ್ನಿ ಕೊರೋನಾ ಭೀತಿಯಿಂದಾಗಿ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿತ್ತು.
ಕೊರೋನಾ ಭಾರತಕ್ಕೆ ಎಂಟ್ರಿ ಕೊಡುವ ಮುನ್ನವೇ ಧೋನಿ ಚೆನ್ನೈಗೆ ಬಂದಿಳಿದು ಅಭ್ಯಾಸ ಆರಂಭಿಸಿದ್ದರು.
ಮಾರ್ಚ್ ಮೊದಲ ವಾರವೇ ಧೋನಿಗೆ ಚೆನ್ನೈನಲ್ಲಿ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿತ್ತು.
ಧೋನಿ ಟೀಂ ಇಂಡಿಯಾಗೆ ಎಂಟ್ರಿ ಕೊಡುತ್ತಾರಾ ಎನ್ನುವ ಪ್ರಶ್ನೆಗೆ ಸದ್ಯಕ್ಕಂತೂ ಉತ್ತರ ಸಿಕ್ಕಿಲ್ಲ.
2020ರ ಐಪಿಎಲ್ ಟೂರ್ನಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿದೆ.
ಭಾರತದಲ್ಲಿ ನಡೆಯಬೇಕಿದ್ದ ಟೂರ್ನಿ ಕೊರೋನಾ ಭೀತಿಯಿಂದಾಗಿ ಯುಎಇಗೆ ಶಿಫ್ಟ್ ಆಗಿದೆ.
ದುಬೈ, ಅಬುದಾಬಿ ಹಾಗೂ ಶಾರ್ಜಾ ಈ ಮೂರು ಮೈದಾನದಲ್ಲಿ ನಡೆಯಲಿದೆ ಐಪಿಎಲ್ ಟೂರ್ನಿ
ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.