ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ದಾಖಲೆ ಬರೆದ ದೇವದತ್ ಪಡಿಕ್ಕಲ್!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ದಿಟ್ಟ ಹೋರಾಟದ ಮೂಲಕ ದಾಖಲೆ ಬರೆಯುತ್ತಿದ್ದಾರೆ. ಆದರೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಪಡಿಕ್ಕಲ್ ಅಬ್ಬರಸಲಿಲ್ಲ. ಆದರೆ ಟಿ20 ಕ್ರಿಕೆಟ್‌ನಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಬ್ಯಾಟ್ಸಮನ್ ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 1000 ರನ್ ಪೂರೈಸಿದ ಪಡಿಕ್ಕಲ್
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೂ ಮೊದಲು ದೇವದತ್ ಪಡ್ಡಿಕ್ಕಲ್ ಒಟ್ಟು ಟಿ20 ಕ್ರಿಕೆಟ್‌ನಲ್ಲಿ 997 ರನ್ ಸಿಡಿಸಿದ್ದರು. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 5 ರನ್ ಸಿಡಿಸಿ ಔಟಾದರು.
ಟಿ20 ಕ್ರಿಕೆಟ್‌ನಲ್ಲಿ 47.47 ರ ಸರಾಸರಿ ಹಾಗೂ 152.44ರ ಸ್ಟ್ರೈಕ್‌ರೇಟ್‌ನಲ್ಲಿ ದೇವದತ್ ಪಡಿಕ್ಕಲ್ ಬ್ಯಾಟ್ ಬೀಸಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಒಟ್ಟು ಸಾವಿರ ರನ್ ಪೂರೈಸಿದ ದೇವದತ್ ಪಡಿಕ್ಕಲ್ 9 ಅರ್ಧಶತಕ ಹಾಗೂ ಏಕೈಕ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ 40ರ ಸರಾಸರಿ ಹಾಗೂ 150ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಏಕೈಕ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ 13 ಇನ್ನಿಂಗ್ಸ್‌ನಿಂದ 442 ರನ್ ಸಿಡಿಸಿದ್ದಾರೆ. ಈ ಮೂಲಕ ಪದಾರ್ಪಣಾ ಐಪಿಎಲ್ ಟೂರ್ನಿಯಲ್ಲಿ ಗರಿಷ್ಠ ರನ್ ಸಿಡಿಸಿದ ದಾಖಲೆ ಬರೆದಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ 127.10 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಇನ್ನು 4 ಬಾರಿ 50+ ಸ್ಕೋರ್ ಸಿಡಿಸಿದ್ದಾರೆ.