RCB ವಿರುದ್ಧ ಸೋಲಿನ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ಗೆ ಸಿಕ್ತು ಗುಡ್ ನ್ಯೂಸ್..!
ದುಬೈ: 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಿ 15 ದಿನಗಳಾಗಿವೆ. ಎಲ್ಲಾ ತಂಡಗಳು ಆರಂಭಿಕ ಮೇಲುಗೈ ಸಾಧಿಸಲು ಸಾಕಷ್ಟು ಕಸರತ್ತು ಪಡುತ್ತಿವೆ, ಹೀಗಿರುವಾಗಲೇ ಸ್ಟೀವ್ ಸ್ಮಿತ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು ಆರಂಭಿಕ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತಿತ್ತು. ಆದರೆ ಆ ಬಳಿಕ 2 ಪಂದ್ಯಗಳನ್ನು ಸೋತು ಆಘಾತಕ್ಕೊಳಗಾಗಿದೆ. ಹೀಗಿರುವಾಗಲೇ ರಾಜಸ್ಥಾನ ರಾಯಲ್ಸ್ ಪಾಲಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.

ಸ್ಟೀವ್ ಸ್ಮಿತ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಗೆದ್ದು ಬೀಗಿತ್ತು.

ಇದಾದ ಬಳಿಕ ಕೋಲ್ಕತ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ ಆಘಾತಕಾರಿ ಸೋಲು ಕಂಡಿತ್ತು.

ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ರಾಜಸ್ಥಾನ ರಾಯಲ್ಸ್ ಪಾಲಿಗೆ ಇದೀಗ ಸಮಾಧಾನಕರವಾದ ಸುದ್ದಿಯೊಂದು ಹೊರಬಿದ್ದಿದೆ.

ಇಂಗ್ಲೆಂಡ್ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಡುವುದು ಖಚಿತವಾಗಿದೆ.

ಬೆನ್ ಸ್ಟೋಕ್ಸ್ ಭಾನುವಾರ(ಅ.04) ದುಬೈಗೆ ಬಂದಿಳಿಯಲಿದ್ದು 6 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.

ಈ ಸಂದರ್ಭದಲ್ಲಿ ಸ್ಟೋಕ್ಸ್ ಕೊರೋನಾ ಟೆಸ್ಟ್‌ಗೂ ಒಳಗಾಗಬೇಕಾಗಿದೆ. ಇದಾದ ಬಳಿಕವಷ್ಟೇ ಬೆನ್ ಸ್ಟೋಕ್ಸ್ ರಾಜಸ್ಥಾನ ರಾಯಲ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಪಾಕಿಸ್ತಾನ ವಿರುದ್ಧದ ಸರಣಿ ವೇಳೆ ಸ್ಟೋಕ್ಸ್ ತಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೀಗಾಗಿ ಸ್ಟೋಕ್ಸ್ ಟೂರ್ನಿಯನ್ನು ಅರ್ಧದಲ್ಲೇ ತೊರೆದು ನ್ಯೂಜಿಲೆಂಡ್‌ನಲ್ಲಿ ನೆಲೆಸಿರುವ ಪೋಷಕರನ್ನು ಭೇಟಿಯಾಗಲು ತೆರಳಿದ್ದರು.

ಇದೀಗ ಸ್ಟೋಕ್ಸ್ ದುಬೈಗೆ ಆಗಮಿಸಿದ್ದು, ರಾಜಸ್ಥಾನ ರಾಯಲ್ಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಹಾಗೂ ಬೌಲಿಂಗ್‌ಗೆ ಮತ್ತಷ್ಟು ಬಲ ಬಂದಂತೆ ಆಗಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.