ಜಸ್ಪ್ರೀತ್ ಬುಮ್ರಾ ಜಗತ್ತಿನ ಶ್ರೇಷ್ಠ ಟಿ20 ಬೌಲರ್ ಎಂದು ಬಣ್ಣಿಸಿದ ಶೇನ್ ಬಾಂಡ್..!
ದುಬೈ: ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಮಾರಕ ದಾಳಿಯ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ದಾಖಲಿಸಿದೆ.ಡೆಲ್ಲಿ ವಿರುದ್ದ 57 ರನ್‌ಗಳ ಗೆಲುವು ದಾಖಲಿಸುವ ಮೂಲಕ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಮಾರಕ ದಾಳಿ ನಡೆಸಿದ ಬುಮ್ರಾ ಪಂದ್ಯಶ್ರೇಷ್ಠ ಗೌರವಕ್ಕೂ ಭಾಜನರಾಗಿದ್ದಾರೆ. ಇದೀಗ ಬುಮ್ರಾ ಮಿಂಚಿನ ಬೌಲಿಂಗ್ ಪ್ರದರ್ಶನಕ್ಕೆ ಜಗತ್ತಿನಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ 57 ರನ್‌ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ.

ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ 4 ಓವರ್ ಬೌಲಿಂಗ್ ಮಾಡಿ ಕೇವಲ 14 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ಡೆಲ್ಲಿ ಕುಸಿತದಲ್ಲಿ ಪ್ರಮುಖ ಪಾತ್ರವಹಿಸಿದರು.

ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಎದುರು ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಅಕ್ಷರಶಃ ಪರದಾಡಿದರು.

ಡೆಲ್ಲಿ ವಿರುದ್ಧದ 4 ವಿಕೆಟ್ ಸೇರಿದಂತೆ ಬುಮ್ರಾ ಒಟ್ಟಾರೆ 27 ವಿಕೆಟ್ ಕಬಳಿಸುವ ಮೂಲಕ ಮತ್ತೆ ಪರ್ಪಲ್ ಕ್ಯಾಪ್ ಮುಡಿಗೇರಿಸಿಕೊಳ್ಳುವಲ್ಲಿ ಮತ್ತೆ ಯಶಸ್ವಿಯಾಗಿದ್ದಾರೆ.

ಇದೀಗ ಬುಮ್ರಾ ಪ್ರದರ್ಶನವನ್ನು ಗತಕಾಲ ಸ್ಪೀಡ್ ಗನ್ ಎಂದೇ ಗುರುತಿಸಿಕೊಂಡಿದ್ದ ನ್ಯೂಜಿಲೆಂಡ್ ಮಾಜಿ ವೇಗಿ ಶೇನ್ ಬಾಂಡ್ ಗುಣಗಾನ ಮಾಡಿದ್ದಾರೆ.

ಜಗತ್ತಿನ ಶ್ರೇಷ್ಠ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ತುಂಬಾ ಹತ್ತಿರದಿಂದ ನೋಡುತ್ತಿರುವುದೇ ನಮ್ಮ ಸೌಭಾಗ್ಯವೆಂದು ಶೇನ್ ಬಾಂಡ್ ಬಣ್ಣಿಸಿದ್ದಾರೆ.

ಶೇನ್ ಬಾಂಡ್ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಬಾಂಡ್ ಮಾರ್ಗದರ್ಶನದಲ್ಲಿ ಮುಂಬೈ ಇಂಡಿಯನ್ಸ್ ಬೌಲಿಂಗ್ ವಿಭಾಗ ಸಾಕಷ್ಟು ಬಲಿಷ್ಠ ಹಾಗೂ ಸಮತೋಲಿತ ತಂಡವಾಗಿ ಗುರುತಿಸಿಕೊಂಡಿದೆ.

ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಫೈನಲ್ ಪ್ರವೇಶಿಸಿದ್ದು, 5ನೇ ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ.