ರಾಜಸ್ಥಾನ ರಾಯಲ್ಸ್‌ಗೂ ಆಘಾತ: ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಟೂರ್ನಿಯಿಂದಲೇ ಔಟ್..?

First Published 2, Sep 2020, 9:24 AM

ಲಂಡನ್‌: ಕೊರೋನಾ ಭೀತಿಯ ನಡುವೆಯೇ 13ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಸೆಪ್ಟೆಂಬರ್ 19ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದ್ದು, ಈಗಾಗಲೇ ಎಲ್ಲಾ ತಂಡಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಕೆಲ ಆಟಗಾರರು ಟೂರ್ನಿ ಆರಂಭಕ್ಕೂ ಮುನ್ನವೇ ಹಿಂದೆ ಸರಿಯುತ್ತಿದ್ದರೆ, ಮತ್ತೆ ಕೆಲವರು ತಂಡ ಕೂಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಏಕಾಂಗಿಯಾಗಿ ತಂಡವನ್ನು ಗೆಲ್ಲಿಸುವ ಸಾಮರ್ಥ್ಯವಿರುವ ರಾಜಸ್ಥಾನ ರಾಯಲ್ಸ್ ತಂಡದ ಆಟಗಾರರ ಈ ಬಾರಿ ಐಪಿಎಲ್‌ ಟೂರ್ನಿಯಲ್ಲಿ ಪಾಲ್ಗೊಳ್ಳುವುದರ ಬಗ್ಗೆ ಕಾರ್ಮೋಡ ಆವರಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

IPL ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್ ತಂಡದ ಪಾಳಯದಲ್ಲಿ ಆತಂಕದ ಕಾರ್ಮೋಡ ಕವಿದಿದೆ.

ಇಂಗ್ಲೆಂಡ್‌ ತಂಡದ ಆಲ್ರೌಂಡರ್‌ ಹಾಗೂ ರಾಜಸ್ಥಾನ ರಾಯಲ್ಸ್‌ ತಂಡದ ಆಟಗಾರ ಬೆನ್‌ಸ್ಟೋಕ್ಸ್‌ ಐಪಿಎಲ್‌ ಟೂರ್ನಿಯಲ್ಲಿ ಆಡುವುದು ಅನುಮಾನವಾಗಿದೆ.

ಸ್ಟೋಕ್ಸ್‌ ಅವರ ತಂದೆ ಮೆದುಳು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಪಾಕಿಸ್ತಾನ ವಿರುದ್ಧದ ಸರಣಿಯನ್ನು ಅರ್ಧಕ್ಕೆ ಬಿಟ್ಟು ಸ್ಟೋಕ್ಸ್‌ ನ್ಯೂಜಿಲೆಂಡ್‌ಗೆ ತೆರಳಿದ್ದರು. ಆದ ಕಾರಣ ಅವರು ಐಪಿಎಲ್‌ನಲ್ಲಿ ಆಡುವುದು ಅನುಮಾನ ಎನ್ನಲಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸ್ಟೋಕ್ಸ್ ಅದ್ಭುತ ಪ್ರದರ್ಶನ ತೋರುವ ಮೂಲಕ ಇಂಗ್ಲೆಂಡ್ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ತಂದೆಯ ಆರೋಗ್ಯ ಕಾರಣದಿಂದಾಗಿಯೇ ಆಸ್ಪ್ರೇಲಿಯಾ ಹಾಗೂ ಇಂಗ್ಲೆಂಡ್‌ ನಡುವಣ ದ್ವಿಪಕ್ಷೀಯ ಸರಣಿಗೂ ಅವರು ಅಲಭ್ಯರಾಗಲಿದ್ದಾರೆ.

ಸ್ಟೋಕ್ಸ್ ಐಪಿಎಲ್ ಟೂರ್ನಿಯ ಬಗ್ಗೆ ಅಲಭ್ಯರಾಗುವ ಕುರಿತಂತೆ ಯಾವುದೇ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲ. ಆದರೆ ರಾಜಸ್ಥಾನ ರಾಯಲ್ಸ್ ಸ್ಟೋಕ್ಸ್ ಲಭ್ಯತೆಯ ಬಗ್ಗೆ ಆದಷ್ಟು ಖಚಿತಪಡಿಸಿಕೊಳ್ಳಲು ಎದುರು ನೋಡುತ್ತಿದೆ.

ಒಂದು ವೇಳೆ ಸ್ಟೋಕ್ಸ್ ಅಲಭ್ಯವಾದರೆ ಬದಲಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಗೆ ಸ್ವಲ್ಪ ಸಮಯ ಸಿಕ್ಕಂತೆ ಆಗಲಿದೆ.

ರೈನಾ ಈಗಾಗಲೇ ಟೂರ್ನಿಯಿಂದ ಹೊರ ನಡೆದಿದ್ದಾರೆ. ಆರ್‌ಸಿಬಿಯ ಕೇನ್‌ ರಿಚರ್ಡಸನ್‌ ಮೊದಲ ಮಗುವಿನ ನಿರೀಕ್ಷೆಯಲ್ಲಿ ಐಪಿಎಲ್‌ನಿಂದ ಹಿಂದೆ ಸರಿದಿದ್ದಾರೆ. ಇದೀಗ ಸ್ಟೋಕ್ಸ್‌ ಅಲಭ್ಯರಾದರೇ ಐಪಿಎಲ್‌ನಲ್ಲಿ ತಾರಾ ಆಟಗಾರರ ಬಲ ಕೊಂಚ ಕಡಿಮೆಯಾಗಲಿದೆ.

13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಇದೇ ಸೆಪ್ಟೆಂಬರ್ 19ರಿಂದ ಆರಂಭವಾಗಿ ನವೆಂಬರ್ 10ರ ವರೆಗೆ ನಡೆಯಲಿದೆ

loader