- Home
- Karnataka Districts
- ಕಾರವಾರ: ಹೇರ್ ಕಟಿಂಗ್ ಶಾಪ್ಗೆ ಬಂದ 10 ವರ್ಷದ ಬಾಲಕಿಗೆ ಕಿರುಕುಳ, ಪೊಕ್ಸೊ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಎಸ್ಕೇಪ್!
ಕಾರವಾರ: ಹೇರ್ ಕಟಿಂಗ್ ಶಾಪ್ಗೆ ಬಂದ 10 ವರ್ಷದ ಬಾಲಕಿಗೆ ಕಿರುಕುಳ, ಪೊಕ್ಸೊ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಎಸ್ಕೇಪ್!
ಸೆಲ್ಯೂನ್ಗೆ ಹೇರ್ ಕಟ್ ಮಾಡಿಸಲು ಬಂದ ಹತ್ತು ವರ್ಷದ ಬಾಲಕಿಗೆ ಉತ್ತರ ಪ್ರದೇಶ ಮೂಲದ ವ್ಯಕ್ತಿಯೋರ್ವ ಕಿರುಕುಳ ನೀಡಿದ ಆಘಾತಕಾರಿ ಘಟನೆ ಉತ್ತರಕನ್ನಡದಲ್ಲಿ ನಡೆದಿದ್ದು. ಪರಾರಿಯಾಗಿರುವ ಆರೋಪಿಯ ಬಂಧನಕ್ಕೆ ಬಾಲಕಿಯ ಪೋಷಕರು, ಗ್ರಾಮಸ್ಥರು ಠಾಣೆ ಮುಂದೆ ಪ್ರತಿಭಟನೆ ನಡೆಸಿದರುರ.

ಉತ್ತರಕನ್ನಡ: ಹೇರ್ ಸೆಲ್ಯೂನ್ಗೆ ಬಂದ ಬಾಲಕಿಗೆ ಕಿರುಕುಳ
ಕಾರವಾರ, ಉತ್ತರ ಕನ್ನಡ (ನ.14): ಹೇರ್ ಕಟಿಂಗ್ ಶಾಪ್ಗೆ ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈ ಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈ ಪ್ರಕರಣ ಸಂಬಂಧ ಉತ್ತರ ಪ್ರದೇಶ ಮೂಲದ ಹೇರ್ ಕಟಿಂಗ್ ಶಾಪ್ ಸಿಬ್ಬಂದಿ ಸಂಶಾದ್ ವಿರುದ್ಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ!
ಆರೋಪಿ ವಿರುದ್ಧ ಮಗುವಿನ ಪೋಷಕರು ಪೊಲೀಸ್ ಠಾಣೆಗೆ ತೆರಳಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಯಾವಾಗ ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸಂಶಾದ್ ನಾಪತ್ತೆಯಾಗಿದ್ದಾನೆ. ಆರೋಪಿಯನ್ನು ಕೂಡಲೇ ಪತ್ತೆಹಚ್ಚಿ ಬಂಧಿಸುವಂತೆ ಆಗ್ರಹಿಸಿ ಕಾರವಾರ ತಾಲೂಕಿನ ಚಿತ್ತಾಕುಲ ಪೊಲೀಸ್ ಠಾಣೆ ಎದುರು ಮಾಜಾಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಆರೋಪಿ ಬಂಧನಕ್ಕೆ ಮಾಜಾಳಿ ವಾಂಗಡ ಗ್ರಾಮಸ್ಥರ ಒತ್ತಾಯ
ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ಸಾಮಾನ್ಯ ಪ್ರಕರಣವಲ್ಲ. ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು, ಶೀಘ್ರವೇ ಆರೋಪಿಯನ್ನ ಪತ್ತೆ ಹಚ್ಚಿ ಬಂಧಿಸುವಂತೆ ಮಾಜಾಳಿ, ವಾಂಗಡ ಭಾಗದ ಸಾರ್ವಜನಿಕರು ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಆರೋಪಿ ಶೀಘ್ರ ಬಂಧನಕ್ಕೆ ಒತ್ತಾಯ
ಸದ್ಯ ಆರೋಪಿಯನ್ನ ಪತ್ತೆಹಚ್ಚಿ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಪೊಲೀಸರು. ಗ್ರಾಮಸ್ಥರ ದೂರು ಆಧಾರಿಸಿ ತನಿಖೆ ನಡೆಸಲಿದ್ದಾರೆ. ಉತ್ತರ ಪ್ರದೇಶ ಮೂಲದವನಾದ ಆರೋಪಿಯು ಇದೇ ರೀತಿ ಬೇರೆ ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದಾನೆಯೇ ಎಂಬ ಗ್ರಾಮಸ್ಥರಿಗೆ ಅನುಮಾನ ಮೂಡಿಸಿದೆ. ಈ ಹಿನ್ನೆಲೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಬಂಧಿಸುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.













