ಕಲಬುರಗಿ ವಿಮಾನ ನಿಲ್ದಾಣಕ್ಕೆ ಅತ್ಯಾಧುನಿಕ ಅಗ್ನಿಶಾಮಕ ವಾಹನ
ಕಲಬುರಗಿ(ಆ.02): ನಗರದ ವಿಮಾನ ನಿಲ್ದಾಣಕ್ಕೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ 6 ಕೋಟಿ ರು ಮೌಲ್ಯದ ಅಗ್ನಿಶಾಮಕ ವಾಹನ ಸೇರ್ಪಡೆಯಾಗಿದೆ. ಕಲಬುರಗಿ ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ಅವರು ನಿನ್ನೆ(ಶನಿವಾರ) ವಿಮಾನ ನಿಲ್ದಾಣದ ಸೇವೆಗೆ ಇದನ್ನು ಅರ್ಪಿಸಿದ್ದಾರೆ.

<p>6 ಕೋಟಿ ರು ವೆಚ್ಚದಲ್ಲಿ ಆಸ್ಟ್ರಿಯಾ ದೇಶದಿಂದ ರೊಸೆನ್ ಬೌರ್ ಎಂಬ ವೊಲ್ವೋ ಕಂಪೆನಿಯ ಅಗ್ನಿಶಾಮಕ ವಾಹನ ಖರೀದಿಸಿ ತಂದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ</p>
6 ಕೋಟಿ ರು ವೆಚ್ಚದಲ್ಲಿ ಆಸ್ಟ್ರಿಯಾ ದೇಶದಿಂದ ರೊಸೆನ್ ಬೌರ್ ಎಂಬ ವೊಲ್ವೋ ಕಂಪೆನಿಯ ಅಗ್ನಿಶಾಮಕ ವಾಹನ ಖರೀದಿಸಿ ತಂದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ
<p>ಅತಿಹೆಚ್ಚು ಉಷ್ಣಾಂಶ/ ಶೀತ/ಆದ್ರ್ರತೆ, ಹೊಗೆ, ಧೂಳುಮಯದಂತಹ ಪ್ರತಿಕೂಲ ವಾತಾವರಣದಲ್ಲಿಯೂ ಈ ಅಗ್ನಿಶಾಮಕ ವಾಹನ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಹೊಂದಿದೆ. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಸಂಪೂರ್ಣ ಸ್ವಯಂಚಾಲಿತ ವಾಹನ ಇದಾಗಿದ್ದು, ಗರಿಷ್ಠ 121 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ. ಅಗ್ನಿ ಅವಘಡ ಸಂಭವಿಸಿದಾಗ 65 ಮೀಟರ್ ದೂರದವರೆಗೆ ನೀರು ಚಿಮುಕಿಸುವ ಶಕ್ತಿ ಇದಕ್ಕಿದೆ. </p>
ಅತಿಹೆಚ್ಚು ಉಷ್ಣಾಂಶ/ ಶೀತ/ಆದ್ರ್ರತೆ, ಹೊಗೆ, ಧೂಳುಮಯದಂತಹ ಪ್ರತಿಕೂಲ ವಾತಾವರಣದಲ್ಲಿಯೂ ಈ ಅಗ್ನಿಶಾಮಕ ವಾಹನ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಹೊಂದಿದೆ. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಸಂಪೂರ್ಣ ಸ್ವಯಂಚಾಲಿತ ವಾಹನ ಇದಾಗಿದ್ದು, ಗರಿಷ್ಠ 121 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ. ಅಗ್ನಿ ಅವಘಡ ಸಂಭವಿಸಿದಾಗ 65 ಮೀಟರ್ ದೂರದವರೆಗೆ ನೀರು ಚಿಮುಕಿಸುವ ಶಕ್ತಿ ಇದಕ್ಕಿದೆ.
<p>ಟ್ಯಾಂಕರ್ 6000 ಲೀಟರ್ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದ್ದು, ಕಾರ್ಯಾಚರಣೆ ವೇಳೆ ಕೆಲವೇ ನಿಮಿಷಗಳಲ್ಲಿ 3000 ಲೀಟರ್ ಹೊರಚಿಮ್ಮಿಸಿ, ಬೆಂಕಿಯ ಜ್ವಾಲೆಗಳನ್ನು ಶಮನಗೊಳಿಸಲಿದೆ. 800 ಲೀಟರ್ ನೊರೆ (ರಾಸಾಯನಿಕ ಮಿಶ್ರಿತ) ಟ್ಯಾಂಕರನ್ನು ಕೂಡ ಒಳಗೊಂಡಿದೆ. ಅಂದರೆ ತೈಲಗಾರ , ವಿಮಾನ ನಿಲ್ದಾಣಗಳಂತಹ ಸ್ಥಳಗಳಲ್ಲಿ ಅತಿವೇಗವಾಗಿ ವ್ಯಾಪಿಸುವ ಬೆಂಕಿಯನ್ನು ನಂದಿಸಲು ಬಳಸುವ ನೊರೆ ಇದಾಗಿದೆ.</p>
ಟ್ಯಾಂಕರ್ 6000 ಲೀಟರ್ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದ್ದು, ಕಾರ್ಯಾಚರಣೆ ವೇಳೆ ಕೆಲವೇ ನಿಮಿಷಗಳಲ್ಲಿ 3000 ಲೀಟರ್ ಹೊರಚಿಮ್ಮಿಸಿ, ಬೆಂಕಿಯ ಜ್ವಾಲೆಗಳನ್ನು ಶಮನಗೊಳಿಸಲಿದೆ. 800 ಲೀಟರ್ ನೊರೆ (ರಾಸಾಯನಿಕ ಮಿಶ್ರಿತ) ಟ್ಯಾಂಕರನ್ನು ಕೂಡ ಒಳಗೊಂಡಿದೆ. ಅಂದರೆ ತೈಲಗಾರ , ವಿಮಾನ ನಿಲ್ದಾಣಗಳಂತಹ ಸ್ಥಳಗಳಲ್ಲಿ ಅತಿವೇಗವಾಗಿ ವ್ಯಾಪಿಸುವ ಬೆಂಕಿಯನ್ನು ನಂದಿಸಲು ಬಳಸುವ ನೊರೆ ಇದಾಗಿದೆ.
<p>ಒಮ್ಮೆಗೆ ಇಡೀ ಅಗ್ನಿ ಅವಘಡ ಪ್ರದೇಶವನ್ನು ನಿಯಂತ್ರಿಸುವ ಹಾಗೂ ವಿಮಾನದ ರನ್ ವೇ ಗಳಲ್ಲಿ ಚಲಿಸುತ್ತಲೇ ಕಾರ್ಯಾಚರಿಸುವಂತಹ ಆನೆಬಲ ಇದಕ್ಕಿದೆ ಎಂದು ಸಂಸದ ಡಾ ಉಮೇಶ್ ಜಾಧವ್ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಲಬುರಗಿ ವಿಮಾನ ನಿಲ್ದಾಣ ನಿರ್ದೇಶಕ ಜ್ಞಾನೇಶ್ವರ್ ರಾವ್ ರಾಜ್ಯ ಅಗ್ನಿಶಾಮಕ ಇಲಾಖೆ ಅಧಿಕಾರಿ ಮಧು ರಾಠೋಡ್, ಏರ್‌ಲೈಸ್ಸ್ ಇಲಾಖೆ ಅಧಿಕಾರಿಗಳು ಇದ್ದರು.</p>
ಒಮ್ಮೆಗೆ ಇಡೀ ಅಗ್ನಿ ಅವಘಡ ಪ್ರದೇಶವನ್ನು ನಿಯಂತ್ರಿಸುವ ಹಾಗೂ ವಿಮಾನದ ರನ್ ವೇ ಗಳಲ್ಲಿ ಚಲಿಸುತ್ತಲೇ ಕಾರ್ಯಾಚರಿಸುವಂತಹ ಆನೆಬಲ ಇದಕ್ಕಿದೆ ಎಂದು ಸಂಸದ ಡಾ ಉಮೇಶ್ ಜಾಧವ್ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಲಬುರಗಿ ವಿಮಾನ ನಿಲ್ದಾಣ ನಿರ್ದೇಶಕ ಜ್ಞಾನೇಶ್ವರ್ ರಾವ್ ರಾಜ್ಯ ಅಗ್ನಿಶಾಮಕ ಇಲಾಖೆ ಅಧಿಕಾರಿ ಮಧು ರಾಠೋಡ್, ಏರ್‌ಲೈಸ್ಸ್ ಇಲಾಖೆ ಅಧಿಕಾರಿಗಳು ಇದ್ದರು.