MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Asian Games 2026
Today's Horoscope
Srirangapatna Dasara 2026
Shivamogga Rain Deficit
Karnataka Power Crisis
Satish Jarkiholi ED Probe
Sharavathi Back Water Muppane
Yeswantpur-Mangaluru Vande Bharat
Kasturi Rangan Report
Siddaramaiah vs Dr HC Mahadevappa
Actress Krishi Thapanda
  • Home
  • Karnataka Districts
  • Belagavi: ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸಗೊಳಿಸಿದ ಮಹಿಳೆ ಕುಟುಂಬಸ್ಥರು

Belagavi: ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸಗೊಳಿಸಿದ ಮಹಿಳೆ ಕುಟುಂಬಸ್ಥರು

ವಿವಾಹಿತ ಮಹಿಳೆಯೊಂದಿಗೆ ಯುವಕನೊಬ್ಬ ಪರಾರಿಯಾದ ಘಟನೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯ ಸಂಬಂಧಿಕರು ಯುವಕನ ಮನೆ ಮೇಲೆ ದಾಳಿ ನಡೆಸಿ, ಧ್ವಂಸಗೊಳಿಸಿದ್ದಾರೆ. ಸಂತ್ರಸ್ತ ಕುಟುಂಬವು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

1 Min read
Author : Kannadaprabha News
Published : Jun 30 2026, 07:49 AM IST
Share this Photo Gallery
  • FB
  • TW
  • Linkdin
  • Whatsapp
15
ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ
Image Credit : Asianet News

ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ

ವಿವಾಹಿತ ಮಹಿಳೆಯೊಂದಿಗೆ ಪರಾರಿಯಾಗಿದ್ದಕ್ಕೆ ಆಕ್ರೋಶಗೊಂಡ ಆಕೆಯ ಸಂಬಂಧಿಕರು ಯುವಕನ ಮನೆಯ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿರುವ ಘಟನೆ ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಸಂಬಂಧ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂತ್ರಸ್ತರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ವಿವಾಹಿತೆಯೊಂದಿಗೆ ಯಲ್ಲಪ್ಪ ನಾಯಕ ಎಂಬಾತ ಪರಾರಿ
Image Credit : Asianet News

ವಿವಾಹಿತೆಯೊಂದಿಗೆ ಯಲ್ಲಪ್ಪ ನಾಯಕ ಎಂಬಾತ ಪರಾರಿ

ಕಳೆದ ಎರಡು ದಿನಗಳ ಹಿಂದೆ ಗ್ರಾಮದ ನಾಗವ್ವ ಎಂಬ ವಿವಾಹಿತೆಯೊಂದಿಗೆ ಯಲ್ಲಪ್ಪ ನಾಯಕ ಎಂಬಾತ ಪರಾರಿಯಾಗಿದ್ದಾನೆ ಎನ್ನಲಾಗಿದೆ. ನಾಗವ್ವ ಕಳೆದ ವರ್ಷ ಬಸಪ್ಪ ನಾಯಕ ಎಂಬಾತನನ್ನು ವಿವಾಹವಾಗಿದ್ದಳು. ಬಸಪ್ಪ ನಾಯಕ ಮತ್ತು ಯಲ್ಲಪ್ಪ ನಾಯಕ ಆತ್ಮೀಯ ಸ್ನೇಹಿತರಾಗಿದ್ದು, ಮೂವರೂ ಉದ್ಯಮಭಾಗದಲ್ಲಿರುವ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

Related Articles

Related image1
ಬೆಳಗಾವಿ ಪರ ಗೊತ್ತುವಳಿ ನಿರ್ಧಾರದಿಂದ ದೂರುಳಿಯಿತೇ ಪಾಲಿಕೆ? ಹೊಸ ಚರ್ಚೆ ಹುಟ್ಟುಹಾಕಿದ ಮೇಯರ್ ಪತ್ರ !
Related image2
ಬೆಳಗಾವಿ: ವಿಧವೆ ಜತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಗೆ ಚಟ್ಟ ಕಟ್ಟಿದ ಗಂಡ! ಬಳೆಚೂರು, ಪ್ರಸಾದ, ಇಲಿಪಾಷಾಣ!
35
ಯುವಕನ ಪೋಷಕರ ಕಣ್ಣೀರು
Image Credit : Asianet News

ಯುವಕನ ಪೋಷಕರ ಕಣ್ಣೀರು

ಈ ಘಟನೆಗೆ ಆಕ್ರೋಶಗೊಂಡ ನಾಗವ್ವ ಅವರ ಪೋಷಕರು ಹಾಗೂ ಪತಿಯ ಕಡೆಯ ಸಂಬಂಧಿಕರು ಸೇರಿದಂತೆ ದೊಡ್ಡ ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಯಲ್ಲಪ್ಪನ ಮನೆ ಮೇಲೆ ದಾಳಿ ನಡೆಸಿ ಮನೆಯನ್ನು ಧ್ವಂಸಗೊಳಿಸಿದೆ. ಮನೆಯನ್ನು ಕಳೆದುಕೊಂಡ ಯುವಕನ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ

45
 ಚಿನ್ನಾಭರಣ, ನಗದು ಹಾಗೂ 25 ಕುರಿ
Image Credit : Asianet News

ಚಿನ್ನಾಭರಣ, ನಗದು ಹಾಗೂ 25 ಕುರಿ

ದಾಳಿಯಲ್ಲಿ ಮನೆಯ ಹಂಚುಗಳನ್ನು ಒಡೆದು, ಅಲ್ಮಾರಿ, ಟಿವಿ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ಹಾನಿಗೊಳಿಸಲಾಗಿದೆ. ಘಟನೆ ವೇಳೆ ಮನೆಯಲ್ಲಿದ್ದ ಯಲ್ಲಪ್ಪನ ಪೋಷಕರು ಜೀವಭಯದಿಂದ ಪರಾರಿಯಾಗಿದ್ದು, ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಮನೆಯಿಂದ ಚಿನ್ನಾಭರಣ, ನಗದು ಹಾಗೂ 25 ಕುರಿಗಳನ್ನು ದೋಚಿಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪ ಮಾಡಿದೆ

55
ತನಿಖೆ ಆರಂಭ
Image Credit : Asianet News

ತನಿಖೆ ಆರಂಭ

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂತ್ರಸ್ತ ಕುಟುಂಬ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಒಕ್ಕಲಿಗರ ಸಂಘದ ಹಗರಣ: ನನ್ನ ಬಳಿ ದಾಖಲೆ ಇವೆ, ಇಂಚಿಂಚು ಬಿಚ್ಚಿಡ್ತೇನೆ - ಉಮಾಪತಿ ಶ್ರೀನಿವಾಸಗೌಡ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬೆಳಗಾವಿ
ಪ್ರೀತಿ
ಸಂಬಂಧಗಳು
ಕ್ರೈಮ್ ನ್ಯೂಸ್
 

Latest Videos
Recommended Stories
Recommended image1
ಈ ಊರಿನ ಯುವಕರು ಡಿಜೆ ಅಬ್ಬರಕ್ಕೆ ಬೇಕ್, ಅದೇ ಹಣದಿಂದ ಸರ್ಕಾರಿ ಶಾಲೆಗೆ ಬಣ್ಣ ತುಂಬಿದರು!
Recommended image2
ರಾಜ್ಯಕ್ಕೆ ಬರಗಾಲ ಬಂದಿದ್ರೂ ಹೇಮಾವತಿಯಿಂದ ತಮಿಳನಾಡಿಗೆ ನೀರು! ನಿಮ್ಮ ಜಿಲ್ಲೆಯ ಜಲಾಶಯದ ಇಂದಿನ ನೀರಿನ ಮಟ್ಟ ಎಷ್ಟಿದೆ?
Recommended image3
ಜಿಬಿಎ ಡ್ರೋನ್ ಸರ್ವೇ ಯಡವಟ್ಟು: ಬೆಂಗಳೂರು ಆಸ್ತಿ ಮಾಲೀಕರಿಗೆ ಡಬಲ್ ತೆರಿಗೆ ಶಾಕ್!
Related Stories
Recommended image1
ಬೆಳಗಾವಿ ಪರ ಗೊತ್ತುವಳಿ ನಿರ್ಧಾರದಿಂದ ದೂರುಳಿಯಿತೇ ಪಾಲಿಕೆ? ಹೊಸ ಚರ್ಚೆ ಹುಟ್ಟುಹಾಕಿದ ಮೇಯರ್ ಪತ್ರ !
Recommended image2
ಬೆಳಗಾವಿ: ವಿಧವೆ ಜತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಗೆ ಚಟ್ಟ ಕಟ್ಟಿದ ಗಂಡ! ಬಳೆಚೂರು, ಪ್ರಸಾದ, ಇಲಿಪಾಷಾಣ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved