ಖಾಸಗಿ ಕ್ಷಣ ಸೆರೆ ಹಿಡಿದು ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ: ಮಹಿಳಾ ಆಯೋಗದಿಂದ ಪತ್ರ
ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾ ಬಳಸಿ ಚಿತ್ರೀಕರಿಸಿ, 50 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟ ಪ್ರಕರಣಕ್ಕೆ ರಾಜ್ಯ ಮಹಿಳಾ ಆಯೋಗ ಪ್ರವೇಶಿಸಿದೆ. ಬೆಳಗಾವಿ ಎಸ್‌ಪಿಗೆ ಪತ್ರ ಬರೆದಿರುವ ಆಯೋಗ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚಿಸಿದೆ.

ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣ
ರಹಸ್ಯವಾಗಿ ಖಾಸಗಿ ಕ್ಷಣ ಸೆರೆ ಹಿಡಿದು ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗ ವರದಿಯನ್ನು ಕೇಳಿದೆ. ಬೆಳಗಾವಿ ಎಸ್‌ಪಿ ಅವರಿಗೆ ಈ ಸಂಬಂಧ ಪತ್ರ ಬರೆಯಲಾಗಿದೆ.
ರಾಜ್ಯ ಮಹಿಳಾ ಆಯೋಗ
ಬೆಳಗಾವಿಯ ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣಕ್ಕೆ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ಬೆಳಗಾವಿ ಎಸ್‌ಪಿ ಅವರಿಗೆ ಪತ್ರ ಬರೆದಿರುವ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಪ್ರಕರಣದ ಕುರಿತು ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ಸಂಬಂಧಪಟ್ಟ ಠಾಣಾಧಿಕಾರಿಯವರಿಗೆ ಸೂಚಿಸುವಂತೆ ಪತ್ರ ಬರೆಯಲಾಗಿದೆ.
ಇದನ್ನೂ ಓದಿ: ಲಕ್ಕುಂಡಿ : 10 ಪಲ್ಲಕ್ಕಿಯಲ್ಲಿ ಬೀದಿಗೆ ಬಂದಾಗ ಮನೆಯಲ್ಲಿದ್ದ ಶಿಲ್ಪ, ಮುತ್ತು, ಹವಳ ಕೊಟ್ಟ ಊರ ಜನ
50 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ
ಸರ್ಕಾರಿ ಮಹಿಳಾ ಅಧಿಕಾರಿ ಮನೆಯ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಬಳಸಿ, ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ ಅಧಿಕಾರಿಗೆ 50 ಲಕ್ಷ ರೂಪಾಯಿ ಬೇಡಿಕೆ ಇಟ್ಟ ಯೂಟ್ಯೂಬ್‌ನ ಮೂವರು ನಕಲಿ ಪತ್ರಕರ್ತರನ್ನು, ಮಾಳಮಾರುತಿ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿರುತ್ತದೆ.
ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳಕರ್ ಬ್ಯಾಟಿಂಗ್‌ಗೆ ಶಾಸಕ ಆಸೀಫ್ ಸೇಠ್ ಬೋಲ್ಡ್

