MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Bengaluru: 5 ತಿಂಗಳ ಹಿಂದೆ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ರಸ್ತೆಯಲ್ಲಿಯೇ ಫ್ಲೈಓವರ್?

Bengaluru: 5 ತಿಂಗಳ ಹಿಂದೆ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ರಸ್ತೆಯಲ್ಲಿಯೇ ಫ್ಲೈಓವರ್?

5 ತಿಂಗಳ ಹಿಂದೆ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ವೈಟ್ ಟಾಪಿಂಗ್ ರಸ್ತೆಯನ್ನು ಅಗೆದು ಫ್ಲೈಓವರ್ ನಿರ್ಮಿಸಲು ಟೆಂಡರ್ ಕರೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ತೆರಿಗೆ ಹಣ ಪೋಲಾಗುತ್ತಿರುವ ಬಗ್ಗೆ ಚರ್ಚೆ ಶುರುವಾಗಿದೆ.

1 Min read
Author : Mahmad Rafik
Published : Jun 23 2026, 10:43 AM IST
Share this Photo Gallery
  • FB
  • TW
  • Linkdin
  • Whatsapp
14
ವೈಟ್ ಟಾಪಿಂಗ್ ರಸ್ತೆಯಲ್ಲಿ ಫ್ಲೈಓವರ್?
Image Credit : Asianet News

ವೈಟ್ ಟಾಪಿಂಗ್ ರಸ್ತೆಯಲ್ಲಿ ಫ್ಲೈಓವರ್?

ಕೇವಲ 5 ತಿಂಗಳ ಹಿಂದೆಯಷ್ಟೇ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ವೈಟ್ ಟಾಪಿಂಗ್ ರಸ್ತೆಯನ್ನು ಅಗೆದು, ಅದೇ ಜಾಗದಲ್ಲಿ ಫ್ಲೈಓವರ್ ನಿರ್ಮಿಸಲು ಟೆಂಡರ್ ಆಹ್ವಾನಿಸುವ ಮೂಲಕ ಸಾರ್ವಜನಿಕರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣಬೈರೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಸಾರ್ವಜನಿಕರ ಆಕ್ರೋಶ
Image Credit : Asianet News

ಸಾರ್ವಜನಿಕರ ಆಕ್ರೋಶ

ಮಿನರ್ವಾ ಸರ್ಕಲ್‌ನಿಂದ ಟೌನ್ ಹಾಲ್ ವರೆಗೆ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಿದ ವೈಟ್ ಟಾಪಿಂಗ್ ರಸ್ತೆಯಲ್ಲೇ ಈಗ ಫ್ಲೈಓವರ್ ಕಾಮಗಾರಿಗೆ ಟೆಂಡರ್ ಕರೆದಿರುವುದು ಸಾರ್ವಜನಿಕರ ತೆರಿಗೆ ದುಡ್ಡನ್ನು ಬೇಕಾಬಿಟ್ಟಿ ಪೋಲು ಮಾಡುವ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. 20 ಕೋಟಿ ಖರ್ಚು ಮಾಡಿ 5 ತಿಂಗಳ ಹಿಂದೆ ನಿರ್ಮಿಸಿದ 2 ಕಿಮೀ ಉದ್ದದ ವೈಟ್ ಟಾಪಿಂಗ್ ರಸ್ತೆ ಮಾಡಲಾಗಿತ್ತು.

Related Articles

Related image1
ಬೆಂಗಳೂರು ರಸ್ತೆ ಗುಂಡಿ ಮುಚ್ಚೋದು ರಾಕೆಟ್ ಸೈನ್ಸಾ? ಜಿಬಿಎ ಅಧಿಕಾರಿಗಳ ಮೇಲೆ ಗುಡುಗಿದ ಸಚಿವ ಕೃಷ್ಣ ಬೈರೇಗೌಡ
Related image2
ಬೆಂಗಳೂರು ಆಡಳಿತಕ್ಕೆ ನೂತನ ಸಾರಥಿ: ಕೊನೆಗೂ ಮುನಿಸು ಬಿಟ್ಟು ಜಿಬಿಎ ಅಂಗಳಕ್ಕೆ ಬಂದ ಸಚಿವ ಕೃಷ್ಣಬೈರೆಗೌಡ!
34
ಮಹೇಶ್ವರ್ ರಾವ್ ಹೇಳಿದ್ದೇನು?
Image Credit : Asianet News

ಮಹೇಶ್ವರ್ ರಾವ್ ಹೇಳಿದ್ದೇನು?

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವೈಟ್ ಟಾಪಿಂಗ್ ರಸ್ತೆಯಲ್ಲಿ ಫ್ಲೈಓವರ್ ನಿರ್ಮಾಣ ಮಾಡುವ ಬಗ್ಗೆ ಸಾಧಕ ಬಾಧಕಗಳನ್ನ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸಚಿವರು ಕೂಡಾ ಈ ಬಗ್ಗೆ ಹೇಳಿದ್ದಾರೆ. ಹೊಸ ರಸ್ತೆಯಲ್ಲಿ ಫ್ಲೈಓವರ್ ನಿರ್ಮಾಣದ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ತೇವೆ ಎಂದು ಹೇಳಿದ್ದಾರೆ.

44
ಎಲಿವೇಟೆಡ್ ರೋಡ್
Image Credit : Asianet News

ಎಲಿವೇಟೆಡ್ ರೋಡ್

ನಗರದ ಟ್ರಾಫಿಕ್ ದಟ್ಟಣೆ ಸಮಸ್ಯೆಗೆ ಧೀರ್ಘಕಾಲದ ಪರಿಹಾರಕ್ಕಾಗಿ ಸುರಂಗ ರಸ್ತೆಯ ಜೊತೆಗೆ 150 ಕಿ.ಮೀ ಉದ್ದದ ಎತ್ತರಿಸಿದ ರಸ್ತೆ (ಎಲಿವೇಟೆಡ್ ರೋಡ್) ನಿರ್ಮಿಸಲಾಗುವುದು. ಪೂರ್ವ ಭಾಗದಿಂದ ಪಶ್ಚಿಮ ಭಾಗವನ್ನು ಸಂಪರ್ಕಿಸಲು ಹಳೇ ಮದ್ರಾಸ್ ರಸ್ತೆಯಿಂದ ಮೈಸೂರು ರಸ್ತೆಯವರೆಗೆ 22 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಮುಂದಿನ ಹಂತದಲ್ಲಿ ಟೆಂಡರ್ ಕರೆಯಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬೆಂಗಳೂರು ಮಹಾನಗರ
ಗ್ರೇಟರ್ ಬೆಂಗಳೂರು ಪ್ರಾಧಿಕಾರ
ಕೃಷ್ಣ ಬೈರೇಗೌಡ
ಬೆಂಗಳೂರು

Latest Videos
Recommended Stories
Recommended image1
ಚಿಕ್ಕಮಗಳೂರು: ಆಶ್ರಮ ಶಾಲೆಯ ಸಿಬ್ಬಂದಿ ನಿರ್ಲಕ್ಷ್ಯ, ತಡರಾತ್ರಿ ಗಲಾಟೆಗೆ ಹೆದರಿ ಓಡಿಹೋದ 4 ಪುಟ್ಟ ಮಕ್ಕಳು!
Recommended image2
ಸರ್ಕಾರದ ಕಿಕ್ ಏರಿಸಿದ ಮದ್ಯಪ್ರಿಯರು; ಹೊಸ ಅಬಕಾರಿ ನೀತಿಯಿಂದ ಸರ್ಕಾರದ ಬೊಕ್ಕಸಕ್ಕೆ ಹರಿದು ಬಂತು ಕೋಟಿ ಕೋಟಿ ಆದಾಯ
Recommended image3
Kumta Incident: ಕುಮಟಾದಲ್ಲಿ ಅಮಾನವೀಯ ಕೃತ್ಯ: ಊಟ ಕೇಳಿದ್ದಕ್ಕೆ ಭಿಕ್ಷುಕ ದಂಪತಿಗಳ ಮೇಲೆ ಹೋಟೆಲ್ ಮಾಲೀಕ ಹಲ್ಲೆ!
Related Stories
Recommended image1
ಬೆಂಗಳೂರು ರಸ್ತೆ ಗುಂಡಿ ಮುಚ್ಚೋದು ರಾಕೆಟ್ ಸೈನ್ಸಾ? ಜಿಬಿಎ ಅಧಿಕಾರಿಗಳ ಮೇಲೆ ಗುಡುಗಿದ ಸಚಿವ ಕೃಷ್ಣ ಬೈರೇಗೌಡ
Recommended image2
ಬೆಂಗಳೂರು ಆಡಳಿತಕ್ಕೆ ನೂತನ ಸಾರಥಿ: ಕೊನೆಗೂ ಮುನಿಸು ಬಿಟ್ಟು ಜಿಬಿಎ ಅಂಗಳಕ್ಕೆ ಬಂದ ಸಚಿವ ಕೃಷ್ಣಬೈರೆಗೌಡ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved