MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಪ್ರತಿ ಮನೆಗೂ ಅ.16ರಿಂದ ಬರಲಿದೆ ಕಾವೇರಿ ನೀರು!

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಪ್ರತಿ ಮನೆಗೂ ಅ.16ರಿಂದ ಬರಲಿದೆ ಕಾವೇರಿ ನೀರು!

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ ಯೋಜನೆ ಅಕ್ಟೋಬರ್ 16 ರಂದು ಲೋಕಾರ್ಪಣೆಗೊಳ್ಳಲಿದೆ. ಈ ಯೋಜನೆಯಿಂದ 50 ಲಕ್ಷ ಜನರಿಗೆ ಪ್ರಯೋಜನವಾಗಲಿದ್ದು, ಬೆಂಗಳೂರಿನ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

2 Min read
Sathish Kumar KH
Published : Oct 08 2024, 08:29 PM IST
Share this Photo Gallery
  • FB
  • TW
  • Linkdin
  • Whatsapp
16

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜಾಗುವ ಕಾವೇರಿ ಐದನೇ ಹಂತದ ಯೋಜನೆ ಇದೇ ಅ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

26

ಬೆಂಗಳೂರಿಗೆ ಹೊಸದಾಗಿ ಸೇರ್ಪಡೆಯಾದ ಹಳ್ಳಿಗಳಿಗೆ ಸಮರ್ಪಕ ನೀರನ್ನು ಒದಗಿಸುವ ಹಾಗೂ  ಬೆಂಗಳೂರಿನ ದೂರದೃಷ್ಟಿಯನ್ನಿಟ್ಟುಕೊಂಡು ಮಹತ್ವದ ನಿರ್ಧಾರವನ್ನು 2014ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಈ ಯೋಜನೆ ರೂಪಿಸಿ ಚಾಲನೆ ನೀಡಿದ್ದನ್ನು ಸ್ಮರಿಸಬಹುದು. ಈ ಯೋಜನೆಯಿಂದ ಬೆಂಗಳೂರು ನಗರಕ್ಕೆ ಹೆಚ್ಚುವರಿಯಾಗಿ 775 ಎಂಎಲ್ಡಿ ನೀರು ಪೂರೈಕೆಯಾಗಲಿದ್ದು, ಮೂಲೆಮೂಲೆಗೂ ಕಾವೇರಿ ನೀರು ಸರಬರಾಜಾಗಲಿದೆ.  ಇದರಿಂದ ಹೆಚ್ಚುವರಿಯಾಗಿ 50ಲಕ್ಷ ಜನರು ಇದರ ಸದುಪಯೋಗಪಡೆದುಕೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳು,ಜಲಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರಿಂದ ಕಾರ್ಯಕ್ರಮದ ಆಹ್ವಾನಪತ್ರಿಕೆಯನ್ನು ಸ್ವೀಕರಿಸಿದರು.

36

ಮುಂದುವೆರೆದು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ವೇಗವಾಗಿ ಬೆಳೆಯುತ್ತಿರುವ ಮಹಾನಗರಿ ಬೆಂಗಳೂರಿನ ಭವಿಷ್ಯದ ದೂರದೃಷ್ಟಿಯನ್ನಿಟ್ಟುಕೊಂಡು ಅನುಷ್ಠಾನಗೊಳಿಸಿದ ಮಹತ್ವದ ಯೋಜನೆ ಇದಾಗಿದೆ. ಇದರಿಂದ 110ಹಳ್ಳಿಗಳ ನಿವಾಸಿಗಳಿಗೆ ಹಾಗೂ ಬೆಂಗಳೂರು ನಗರದ ಎಲ್ಲ ನಿವಾಸಿಗಳಿಗೆ ಸಮರ್ಪಕ ನೀರು ಸರಬರಾಜಾಗಲಿದೆ. ಅವಕಾಶಗಳ ನಗರವೆಂದೇ ಖ್ಯಾತಿಯಾಗಿರುವ ಬೆಂಗಳೂರು ನಗರದಲ್ಲಿ ಇನ್ನಷ್ಟು ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ಅಗತ್ಯ ಯೋಜನೆಗಳನ್ನು ನಮ್ಮ ಸರಕಾರ ರೂಪಿಸಿದ್ದು,ಅದನ್ನು ಸಾಕಾರಗೊಳಿಸಲಿದ್ದೇವೆ ಎಂದು ತಿಳಿಸಿದರು.

46

ಸದರಿ ಯೋಜನೆಯನ್ನು ವೇಗವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಇತ್ತೀಚೆಗೆ ಖುದ್ದಾಗಿ ಟಿ.ಕೆ.ಹಳ್ಳಿಗೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಸಲಹೆ-ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ತಿಳಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾವೇರಿ 5ನೇ ಹಂತದ ಯೋಜನೆ ಮೂಲಕ ಯಶವಂತಪುರ, ದಾಸರಹಳ್ಳಿ, ಬ್ಯಾಟರಾಯನಪುರ, ಬೆಂಗಳೂರು ದಕ್ಷಿಣ, ಮಹದೇವಪುರ, ರಾಜರಾಜೇಶ್ವರಿನಗರ, ಕೆಆರ್ಪುರ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧ ಹಳ್ಳಿಗಳ ಮನೆ ಮನೆಗೂ ಹಾಗೂ ಬೆಂಗಳೂರು ನಗರದ ಎಲ್ಲೆಡೆ ಕಾವೇರಿ ನೀರು ಸಮರ್ಪಕ ಸರಬರಾಜು ಆಗಲಿದೆ ಎಂದರು.

56

ಮನೆ ಮನೆಗೆ ಕಾವೇರಿ ತಲುಪಿಸುವ ಬೆಂಗಳೂರು ಜಲಮಂಡಳಿಯ ಈ ಯೋಜನೆಯು ಶೀಘ್ರದಲ್ಲೇ ಬೆಂಗಳೂರನ್ನು ನೀರಿನ ಸಮಸ್ಯೆಯಿಂದ ಮುಕ್ತಿಗೊಳಿಸಲಿದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಪ್ರತಿಯೊಂದು ಮನೆಗೂ ಸಮರ್ಪಕ ನೀರು ಹರಿಸುವುದು ಜಲಮಂಡಳಿಯ ಗುರಿಯಾಗಿದೆ ಎಂದರು. ಕಾವೇರಿ ಐದನೇ ಹಂತದ ಲೋಕಾರ್ಪಣೆಯನ್ನು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ(ಟಿ.ಕೆ.ಹಳ್ಳಿ)ಯ ಬೆಂಗಳೂರು ಜಲಮಂಡಳಿ ಆವರಣದಲ್ಲಿ ಅ.16ರಂದು ಬೆಳಗ್ಗೆ 10.30ಕ್ಕೆ ಲೋಕಾರ್ಪಣೆಯಾಗಲಿದೆ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ/ರಾಜ್ಯ ಸಚಿವರುಗಳು ಹಾಗೂ ಸಂಸದರು ಮತ್ತು ಶಾಸಕರು ಹಾಗೂ ಇನ್ನೀತರ ಎಲ್ಲ ಚುನಾಯಿತ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

66

ಮನೆಮನೆಗೂ  ಕಾವೇರಿ ನೀರು ತಲುಪಿಸಿ ಸಮೃದ್ಧ ಬೆಂಗಳೂರಿಗೆ ಕೈ ಜೋಡಿಸಿರುವ ಜೈಕಾ ಇಂಡಿಯಾ ಕಚೇರಿಯ ಮುಖ್ಯ ಪ್ರತಿನಿಧಿ ಟೇಕುಚಿ ಟಕುರೋ, ಕೌನ್ಸಲ್ ಜನರಲ್ ಆಫ್ ಜಪಾನ್ ಇನ್ ಇಂಡಿಯಾದ ಟ್ಸುಟೋಮು,ಭಾರತದಲ್ಲಿ ಜಪಾನ್ ರಾಯಭಾರ ಕಚೇರಿಯ ಆರ್ಥಿಕ ಸಚಿವ(ಆರ್ಥಿಕ ಮತ್ತು ಅಭಿವೃದ್ಧಿ)ರಾದ ಹೊಕುಗೋ ಕ್ಯೋಕು ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved