ಮುಂದಿನ 3 ಗಂಟೆ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗುವ ಲಕ್ಷಣಗಳು ಕಂಡುಬಂದಿವೆ. ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ಗಂಟೆ ಮಳೆಯ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
15

Image Credit : Asianet News
ಯೆಲ್ಲೋ ಅಲರ್ಟ್
ಬೆಂಗಳೂರು (ಜೂ.07): ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
25
Image Credit : Kannada Prabha
ಮೋಡ ಕವಿದ ವಾತಾವರಣ
ಈಗಾಗಲೇ ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ದಟ್ಟ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಕ್ಷಣದಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.
35
Image Credit : Asianet News
ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆ
ರಾಜ್ಯದ ಕರಾವಳಿ ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಕರಾವಳಿ ಪ್ರದೇಶದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
45
Image Credit : AI
ಯೆಲ್ಲೋ ಅಲರ್ಟ್ ಘೋಷಣೆ
ಇನ್ನೊಂದೆಡೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಬೆಳಗಾವಿ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
55
Image Credit : Gemini AI
ಹವಾಮಾನ ಇಲಾಖೆ ಮನವಿ
ಗುಡುಗು-ಮಿಂಚು ಸಹಿತ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.
Latest Videos

