MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಗ್ರೇಟರ್ ಬೆಂಗಳೂರಿಗೆ ಮೊದಲ ಬಲಿ; ಮಳೆಯಿಂದ ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಜಾರಿಬಿದ್ದು ವೃದ್ಧನ ಸಾವು!

ಗ್ರೇಟರ್ ಬೆಂಗಳೂರಿಗೆ ಮೊದಲ ಬಲಿ; ಮಳೆಯಿಂದ ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಜಾರಿಬಿದ್ದು ವೃದ್ಧನ ಸಾವು!

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆ ಕೆಸರಿನಲ್ಲಿ ಜಾರಿ ಬಿದ್ದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಈ ವೃದ್ಧನ ಸಾವು ಗ್ರೇಟರ್ ಬೆಂಗಳೂರಿನ ಮೊದಲ ಬಲಿ ಎಂದು ಜನ ಆಕ್ರೋಶ ಹೊರಹಾಕಿದ್ದಾರೆ.

2 Min read
Sathish Kumar KH
Published : Sep 03 2025, 05:48 PM IST
Share this Photo Gallery
  • FB
  • TW
  • Linkdin
  • Whatsapp
18
Image Credit : Asianet News

ಬೆಂಗಳೂರು (ಸೆ.03): ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಧ್ಯಾಹ್ನದ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದ್ದು, ರಸ್ತೆಯ ಕೆಸರಿನಲ್ಲಿ ಜಾರಿ ಬಿದ್ದು ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ರಣಸಿಂಗ್‌ಪೇಟೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮಳೆಯ ನೀರು ಮತ್ತು ಕೆಸರು ತುಂಬಿದ್ದ ರಸ್ತೆಯಲ್ಲಿ ಕಾಲು ಜಾರಿ ಬಿದ್ದ ವೃದ್ಧರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

28
Image Credit : Asianet News

ಈ ಘಟನೆಯು ಬೆಂಗಳೂರಿನ ಹದಗೆಟ್ಟ ರಸ್ತೆಗಳ ಗುಣಮಟ್ಟ ಮತ್ತು ನಿರ್ವಹಣೆಯ ಕೊರತೆಯನ್ನು ಮತ್ತೊಮ್ಮೆ ಎತ್ತಿ ಹಿಡಿದಿದೆ. ಬೆಂಗಳೂರಿನಲ್ಲಿ ಪ್ರತಿ ವರ್ಷ ಮಳೆಗಾಲ ಬಂತೆಂದರೆ ರಸ್ತೆಗಳು ಜಲಾವೃತವಾಗುವುದು, ಗುಂಡಿಗಳು ತುಂಬಿ ಹೋಗುವುದು ಮತ್ತು ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆಗೆ ಸಿಲುಕುವುದು ಸಾಮಾನ್ಯವಾಗಿದೆ. 

ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ನಡೆಸುವ ಕಾಮಗಾರಿಗಳು ಹೆಚ್ಚಾಗಿ ಕಳಪೆ ಗುಣಮಟ್ಟದಿಂದ ಕೂಡಿರುತ್ತವೆ. ಮಳೆ ಬಿದ್ದ ಕೂಡಲೇ ಈ ಗುಂಡಿಗಳು ಮತ್ತೆ ತೆರೆದುಕೊಳ್ಳುತ್ತವೆ, ರಸ್ತೆಗಳು ಮತ್ತಷ್ಟು ಕೆಸರುಮಯವಾಗುತ್ತವೆ.

Related Articles

Related image1
ಜೋರಾಗಿ ಮಳೆ, ಕೈಗೆ ಸಿಗದ ಉಬರ್ ಓಲಾ: ಮನೆಗೆ ಹೋಗಲು ಮಿನಿ ಟ್ರಕ್ ಬುಕ್ ಐಟಿ ಉದ್ಯೋಗಿಗಳು
Related image2
ಬಿಬಿಎಂಪಿ ಇನ್ನು ನೆನಪು ಮಾತ್ರ,ಕಚೇರಿಗೆ ಗ್ರೇಟರ್ ಬೆಂಗಳೂರು ನಾಮಫಲಕ ಅಳವಡಿಕೆ
38
Image Credit : Asianet News

ಇದೀಗ ವೃದ್ಧನ ಸಾವಿನ ಬಗ್ಗೆ ಪೊಲೀಸ್ ಇಲಾಖೆಯು ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಸುತ್ತಿದೆ. ಆದರೆ, ಈ ಘಟನೆಗೆ ಕಾರಣವಾದ ನಿರ್ಲಕ್ಷ್ಯಕ್ಕೆ ಯಾರು ಹೊಣೆ ಎಂಬುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಈವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದ್ದುದ್ದನ್ನು ಸರ್ಕಾರ ಜನಸಂಖ್ಯೆಗೆ ಅನುಗುಣ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಾಡಿದೆ. ಆದರೆ, ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ ಎಂಬ ಆಕ್ರೋಶ ಜನರಿಂದ ಕೇಳಿಬಂದಿದೆ.

48
Image Credit : Asianet News

ನಗರದ ರಸ್ತೆಗಳನ್ನು ವೈಜ್ಞಾನಿಕವಾಗಿ ಮತ್ತು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸದಿದ್ದರೆ, ಇಂತಹ ದುರಂತಗಳು ಮುಂದುವರೆಯುವ ಅಪಾಯವಿದೆ. ಬೆಂಗಳೂರನ್ನು 'ಸಿಲಿಕಾನ್ ಸಿಟಿ' ಎಂದು ಕರೆಯುವ ಜೊತೆಗೆ ಇಲ್ಲಿನ ರಸ್ತೆಗಳ ಗುಣಮಟ್ಟವನ್ನು ಸುಧಾರಿಸಲು ಸರ್ಕಾರ ಮತ್ತು ಪಾಲಿಕೆ ಆದ್ಯತೆ ನೀಡಬೇಕಿದೆ ಎಂದು ಜನ ಒತ್ತಾಯಿಸಿದ್ದಾರೆ.

58
Image Credit : Asianet News

ಬೆಂಗಳೂರು ಮಹಾನಗರದಲ್ಲಿನ ರಸ್ತೆಗಳ ದುಸ್ಥಿತಿ ಪ್ರಾಣಕ್ಕೆ ಕುತ್ತು ತರುತ್ತಿರುವ ಅನೇಕ ಉದಾಹರಣೆಗಳು ಇವೆ. ಮಳೆಗಾಲದಲ್ಲಿ ಕೆಸರು ಮತ್ತು ನೀರು ತುಂಬಿದ ರಸ್ತೆಗಳಲ್ಲಿ ವಾಹನಗಳು ನಿಯಂತ್ರಣ ಕಳೆದುಕೊಂಡು ಜಾರಿ ಬೀಳುವುದು, ದ್ವಿಚಕ್ರ ವಾಹನ ಸವಾರರು ಗುಂಡಿಗಳಿಂದಾಗಿ ಬಿದ್ದು ಗಾಯಗೊಳ್ಳುವುದು ಅಥವಾ ಪ್ರಾಣ ಕಳೆದುಕೊಳ್ಳುವುದು ಆಗಾಗ ವರದಿಯಾಗುತ್ತಿದೆ. 

ಪಾದಚಾರಿ ಮಾರ್ಗಗಳೂ ಕೂಡ ಸರಿಯಾಗಿ ನಿರ್ವಹಣೆಯಿಲ್ಲದೆ ಹಾಳಾಗಿರುವುದರಿಂದ ಪಾದಚಾರಿಗಳು ರಸ್ತೆಯ ಮೇಲೆಯೇ ನಡೆದು ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಪರಿಸ್ಥಿತಿಗಳು ಇಂದಿನ ಸಾವಿನಂತಹ ದುರಂತಗಳಿಗೆ ನೇರವಾಗಿ ಕಾರಣವಾಗುತ್ತಿವೆ.

68
Image Credit : Asianet News

ಎಲೆಕ್ಟ್ರಾನಿಕ್ ಸಿಟಿ ವೀರಸಂದ್ರ ಜಂಕ್ಷನ್ ಜಲಾವೃತ, ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯು ಹಲವು ಅವಾಂತರಗಳಿಗೆ ಕಾರಣವಾಗಿದ್ದು, ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಸಂಪೂರ್ಣ ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿದೆ. ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಕೆರೆಯಂತಾದ ರಸ್ತೆಯಲ್ಲಿ 4-5 ಅಡಿಗಳಷ್ಟು ನೀರು ನಿಂತಿದ್ದರಿಂದ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

78
Image Credit : Asianet News

ಮಳೆಯಿಂದಾಗಿ ರಸ್ತೆ ಜಲಾವೃತಗೊಂಡಿದ್ದರಿಂದ ವಾಹನಗಳು ನಿಂತ ನೀರಲ್ಲೇ ಕೆಟ್ಟು ನಿಂತಿವೆ. ಬೈಕ್, ಕಾರು ಮತ್ತು ಆಟೋಗಳಂತಹ ವಾಹನಗಳು ರಸ್ತೆಯ ಮಧ್ಯದಲ್ಲೇ ಸ್ಥಗಿತಗೊಂಡ ಪರಿಣಾಮ ಸಂಚಾರ ಅಸಾಧ್ಯವಾಗಿತ್ತು. ರಸ್ತೆಯಲ್ಲೇ ಸಿಕ್ಕಿಹಾಕಿಕೊಂಡ ವಾಹನ ಸವಾರರು ಮತ್ತು ಪ್ರಯಾಣಿಕರು ಪರ್ಯಾಯ ಮಾರ್ಗವಿಲ್ಲದೆ ಕಷ್ಟಪಟ್ಟಿದ್ದಾರೆ.

ಈ ಪರಿಸ್ಥಿತಿ ಎಷ್ಟು ಗಂಭೀರವಾಗಿತ್ತೆಂದರೆ, ಟ್ರಾಫಿಕ್ ಪೊಲೀಸರು ಕೂಡ ನೀರು ತುಂಬಿದ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಯಂತ್ರಿಸಲು ಸಾಧ್ಯವಾಗದೆ ಅಸಹಾಯಕರಾಗಿದ್ದರು. ನಿರಂತರವಾಗಿ ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯಿಂದಾಗಿ ಟ್ರಾಫಿಕ್ ಜಾಮ್ ಮತ್ತಷ್ಟು ಬಿಗಡಾಯಿಸಿತು.

88
Image Credit : Asianet News

ಕಳೆದ ಕೆಲವು ವರ್ಷಗಳಿಂದ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಮಳೆ ಬಂದರೆ ಜಲಾವೃತವಾಗುವುದು ಸಾಮಾನ್ಯವಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದು, ನೀರು ಹರಿದು ಹೋಗಲು ಸೂಕ್ತ ಮಾರ್ಗವಿಲ್ಲದಿರುವುದು ಇಂತಹ ಸಮಸ್ಯೆಗಳಿಗೆ ಮುಖ್ಯ ಕಾರಣ ಎನ್ನಲಾಗಿದೆ.

ಪ್ರತಿ ಮಳೆಗಾಲದಲ್ಲೂ ಇದೇ ರೀತಿ ಪ್ರಮುಖ ರಸ್ತೆಗಳು ಕೆರೆಯಂತಾಗಿ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದರೂ, ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಸಂಬಂಧಪಟ್ಟ ಇಲಾಖೆಗಳು ವಿಫಲವಾಗಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದಾಗಿ ಎಲೆಕ್ಟ್ರಾನಿಕ್ ಸಿಟಿಯಂತಹ ಐಟಿ ಕಾರಿಡಾರ್‌ಗಳಲ್ಲಿನ ಮೂಲಸೌಕರ್ಯಗಳ ಕೊರತೆ ಮತ್ತೊಮ್ಮೆ ಎದ್ದು ಕಾಣಿಸಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು
ಬೆಂಗಳೂರು ಮಳೆ
ಬೆಂಗಳೂರು ಹವಾಮಾನ
ಕರ್ನಾಟಕ ಮಳೆ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved