- Home
- Karnataka Districts
- ಶಿವಮೊಗ್ಗ: ಆನಂದಪುರ ಬಳಿ ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಖಾಸಗಿ ಬಸ್..! ಬೆಂಗಳೂರಿಂದ ಸಾಗರಕ್ಕೆ ಬರುತ್ತಿದ್ದ ಸ್ಲೀಪರ್ ಬಸ್ ಭಸ್ಮ
ಶಿವಮೊಗ್ಗ: ಆನಂದಪುರ ಬಳಿ ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಖಾಸಗಿ ಬಸ್..! ಬೆಂಗಳೂರಿಂದ ಸಾಗರಕ್ಕೆ ಬರುತ್ತಿದ್ದ ಸ್ಲೀಪರ್ ಬಸ್ ಭಸ್ಮ
ಶಿವಮೊಗ್ಗ: ಇತ್ತೀಚೆಗೆ ಖಾಸಗಿ ಬಸ್‌ಗಳಲ್ಲಿ ಬೆಂಕಿ ಅವಘಡ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದೀಗ ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ಮತ್ತೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್ ಈಗ ಮಾರ್ಗ ಮಧ್ಯದಲ್ಲೇ ಸುಟ್ಟು ಕರಕಲಾಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ
ಬೆಂಗಳೂರಿನಿಂದ ಸಾಗರ ಕಡೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಬಳಿ ನಡೆದಿದೆ.
ಖಾಸಗಿ ಬಸ್ 80% ಭಸ್ಮ
ಬೆಂಗಳೂರಿನಿಂದ ನಿನ್ನೆ ರಾತ್ರಿ ಹೊರಟ ಖಾಸಗಿ ಡ್ರೀಮ್ ಬಸ್, ಸಾಗರ ತಲುಪುವ ಮುನ್ನವೇ ಆನಂದಪುರ ಬಳಿ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಇಂದು ಬೆಳ್ಳಂಬೆಳಗ್ಗೆ ಬೆಂಕಿಯ ಕೆನ್ನಾಲಿಗೆಗೆ ಬಸ್ ಧಗ ಧಗನೇ ಹೊತ್ತಿ ಉರಿದಿದೆ. ಪರಿಣಾಮ ಬಸ್ 80% ಭಸ್ಮವಾಗಿದೆ.
ಇಂದು ಬೆಳಗಿನ ಜಾವ ಸಂಭವಿಸಿದ ದುರ್ಘಟನೆ
ಕೆಲವೇ ನಿಮಿಷಗಳಲ್ಲಿ ಸಾಗರ ನಿಲ್ದಾಣ ತಲುಪಬೇಕಿದ್ದ ಬಸ್, ಇಂದು ಬೆಳಗಿನ ಜಾವ 5.45ಕ್ಕೆ ಬಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಿಲ್ಲ
ಬೆಂಗಳೂರಿನಿಂದ ಪ್ರಯಾಣಿಸಿದ್ದ ಬಹುತೇಕ ಪ್ರಯಾಣಿಕರು ಶಿವಮೊಗ್ಗದಲ್ಲೇ ಇಳಿದುಕೊಂಡಿದ್ದರು. ಹೀಗಾಗಿ ಬಸ್‌ನಲ್ಲಿ ಕೇವಲ ಇಬ್ಬರು ಪ್ರಯಾಣಿಕರು ಮಾತ್ರ ಇದ್ದರು ಎನ್ನಲಾಗಿದೆ. ಹೀಗಾಗಿ ಯಾವುದೇ ಜೀವಹಾನಿಯಾಗಿಲ್ಲ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಇನ್ನು ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಅಗ್ನಿಶಾಮಕದಳದವರು ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

