MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಬ್ರಿಟೀಷರ ಕಾಲದಲ್ಲಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಸಿದ್ದ ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಶ್ಚೇತನ

ಬ್ರಿಟೀಷರ ಕಾಲದಲ್ಲಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಸಿದ್ದ ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಶ್ಚೇತನ

ಬೆಂಗಳೂರು (ಏ.14): ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ 1896ರಲ್ಲಿ ಬ್ರಿಟೀಷರ ಕಾಲಾವಧಿಯಲ್ಲಿ ಅರ್ಕಾವತಿ ನದಿಯ ನೀರನ್ನ ಹರಿಸಿದ್ದ ಐತಿಹಾಸಿಕ ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಗೊಳಿಸುವ ಐತಿಹಾಸಿಕ ನಿರ್ಧಾರವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಕೈಗೊಂಡಿದೆ.   

2 Min read
Author : Sathish Kumar KH
| Updated : Apr 14 2024, 03:57 PM IST
Share this Photo Gallery
  • FB
  • TW
  • Linkdin
  • Whatsapp
16

ದೇಶದಲ್ಲೇ ಮೊದಲ ಬಾರಿಗೆ ವ್ಯವಸ್ಥಿತವಾದ ನೀರು ಸರಬರಾಜು ವ್ಯವಸ್ಥೆಯನ್ನು ಹೊಂದಿದ ಎರಡನೇ ನಗರ ಬೆಂಗಳೂರು. 1873 ರಲ್ಲಿ ಮೊದಲ ಬಾರಿಗೆ ಮಿಲ್ಲರ್ಸ್‌ ಟ್ಯಾಂಕ್ಸ್‌ ಎಂದು ಹೆಸರು ಪಡೆದಂತಹ ಹಲವಾರು ಕೆರೆಗಳ ಜಾಲದ ಮೂಲಕ ಬೆಂಗಳೂರು ನಗರಕ್ಕೆ ನೀರು ಪೂರೈಸುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. 1875-77 ರ ಧಾತು ಈಶ್ವರ ಕ್ಷಾಮ (Great Famine of 1875-77) ದಿಂದ ಎರಡೂವರೆ ವರ್ಷಗಳ ಕಾಲ ಮಳೆ ಇಲ್ಲದೆ ಎಲ್ಲಾ ಜಲಮೂಲಗಳೂ ಬತ್ತಿ ಹೋಗಿದ್ದವು. 
 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26

ಬೆಳೆಯುತ್ತಿರುವ ನಗರದ ನೀರಿನ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಅಂದಿನ ಮೈಸೂರು ರಾಜರ ದಿವಾನರಾಗಿದ್ದ ಕೆ. ಶೇಷಾದ್ರಿ ಅಯ್ಯರ್‌ ಅವರು, ಹೆಸರುಘಟ್ಟ ಕೆರೆಯ ಮೂಲಕ ಅರ್ಕಾವತಿ ನದಿಯ ನೀರನ್ನ ಬೆಂಗಳೂರಿಗೆ ಹರಿಸುವ ಚಿಂತನೆ ನಡೆಸಿದರು. ಚಾಮರಾಜೇಂದ್ರ ವಾಟರ್‌ ವರ್ಕ್ಸ್‌ ಎಂದು ಇದಕ್ಕೆ ಹೆಸರಿಡಲಾಗಿತ್ತು. ಐತಿಹಾಸಿಕ ಕ್ಷಾಮದಿಂದ ಬಳಲಿದ್ದ ನಗರಕ್ಕೆ ನೀರು ಹರಿಸಲು ಸೋಲದೇವನಹಳ್ಳಿಯಲ್ಲಿ 1896 ರಲ್ಲಿ ಸ್ಥಾಪಿತವಾದ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ಇಂದಿಗೂ ಇದಕ್ಕೆ ಸಾಕ್ಷಿಭೂತವಾಗಿ ನಿಂತಿದೆ. 

36

ಏಪ್ರಿಲ್‌ 20ರ ಒಳಗಾಗಿ ಸಿದ್ದತೆ ಪೂರ್ಣಗೊಳಿಸಲು ಸೂಚನೆ:
ಇತ್ತೀಚಿಗೆ ಹೆಸರಘಟ್ಟ ಕೆರೆಗೆ ಹಾಗೂ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ಗೆ ಭೇಟಿ ನೀಡಿದ್ದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಡಾ ವಿ ರಾಮ್‌ ಪ್ರಸಾತ್‌ ಮನೋಹರ್‌, 125 ವರ್ಷಗಳ ಹಿಂದಿನ ತಾಂತ್ರಿಕತೆಯ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದರು. ಈ ಪಂಪಿಂಗ್‌ ಸ್ಟೇಷನ್‌ ನಲ್ಲಿರುವಂತಹ ಅನುಕೂಲತೆಗಳ ಬಗ್ಗೆ ಹಾಗೂ ನೀರು ಸರಬರಾಜಿಗೆ ಇಲ್ಲಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಏಪ್ರಿಲ್‌ 20ರ ಒಳಗಾಗಿ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

46

ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ಪುನಃಶ್ಚೇತನ:
ಭೀಕರ ಕ್ಷಾಮದಿಂದ ಬಳಲಿದ್ದ ಬೆಂಗಳೂರು ನಗರಕ್ಕೆ ನೀರು ಹರಿಸಿದ್ದ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ನಿಂದ 1896 ರಲ್ಲಿ ನೀರು ಹರಿಸಿದಂತೆ ಹೆಸರಘಟ್ಟ ಕೆರೆಯಿಂದ ಮತ್ತೆ ನಗರಕ್ಕೆ ನೀರು ಹರಿಸಲು ಜಲಮಂಡಳಿ ಚಿಂತನೆ ನಡೆಸುತ್ತಿದೆ. ಸದ್ಯ ಹೆಸರಘಟ್ಟ ಕೆರೆಯಲ್ಲಿ ಸುಮಾರು 0.3 ಟಿಎಂಸಿ ಯಷ್ಟು ನೀರು ಲಭ್ಯವಿದೆ. ಇದಕ್ಕೆ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ನಲ್ಲಿ ಅಗತ್ಯ ಟ್ರೀಟ್‌ಮೆಂಟ್‌ ನೀಡಿ, ಎಂ.ಇ.ಐ ಲೇಔಟ್‌ನಲ್ಲಿರುವ ಜಲಸಂಗ್ರಾಹಾರಕ್ಕೆ ಪಂಪ್‌ ಮಾಡಲಾಗುವುದು. ಇಲ್ಲಿನಿಂದ ಅಗತ್ಯವಿರುವಂತಹ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವುದು ಇದರ ಉದ್ದೇಶವಾಗಿದೆ

56

128 ವರ್ಷಗಳ ಹಿಂದಿನ ಭೀಕರ ಬರಗಾಲದ ಸಮಯದಲ್ಲಿ ನಗರದ ಭವಿಷ್ಯಕ್ಕಾಗಿ ಅಂದಿನ ಮಹನೀಯರುಗಳು ಕೈಗೊಂಡ ಮಹತ್ವದ ನಿರ್ಧಾರಗಳಿಂದ ಇಂದು ಬೆಂಗಳೂರು ನಗರ ಸಮರ್ಪಕ ನೀರು ಸರಬರಾಜನ್ನು ಕಾಣುತ್ತಿದೆ. ಮೇ ತಿಂಗಳಲ್ಲಿ ಮಳೆ ಬೀಳದೇ ನೀರಿನ ಕೊರತೆ ಹೆಚ್ಚಾದಲ್ಲಿ ಅದನ್ನ ಎದುರಿಸಲು ಜಲಮಂಡಳಿ ಸಿದ್ದವಾಗುತ್ತಿದೆ. ಗತಕಾಲದ ವೈಭವ ಮತ್ತು ತಂತ್ರಜ್ಞಾನವನ್ನು ಸಾರವಂತಹ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ಪುನಃಶ್ಚೇತಗೊಳಿಸುವಂತೆ ಸೂಚನೆ ನೀಡಲಾಗಿದೆ. ಈ ಮೂಲಕ ಇತಿಹಾಸದ ಮೈಲುಗಲ್ಲನ್ನ ಇಂದಿಗೂ ಪ್ರಸ್ತುತಗೊಳಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು.

66

ಹೆಸರಘಟ್ಟ ಕೆರೆಯೆ ಅಥವಾ ಜಲಾಶಯದ ಇತಿಹಾಸ:
ಹೆಸರಘಟ್ಟ ಕೆರೆ ಕರ್ನಾಟಕ ರಾಜ್ಯದ ಬೆಂಗಳೂರಿನ ವಾಯುವ್ಯಕ್ಕೆ 18ಕಿ.ಮೀ. ದೂರದಲ್ಲಿರುವ ಮಾನವ ನಿರ್ಮಿತ ಜಲಾಶಯವಾಗಿದೆ. ಇದು ನಗರದ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಅರ್ಕಾವತಿ ನದಿಗೆ ಅಡ್ಡಲಾಗಿ 1894 ರಲ್ಲಿ ರಚಿಸಲಾದ ಶುದ್ಧ ನೀರಿನ ಸರೋವರವಾಗಿದೆ. ಮೈಸೂರು ರಾಜ್ಯದ ದಿವಾನರಾಗಿದ್ದ ಸರ್ ಕೆ.ಶೇಷಾದ್ರಿ ಅಯ್ಯರ್ ಮತ್ತು ಮೈಸೂರಿನ ಆಗಿನ ಮುಖ್ಯ ಇಂಜಿನಿಯರ್ ಎಂ.ಸಿ.ಹಚಿನ್ಸ್ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡಲು 'ಚಾಮರಾಜೇಂದ್ರ ವಾಟರ್ ವರ್ಕ್ಸ್' ಎಂಬ ಯೋಜನೆಯನ್ನು ನಿರ್ಮಿಸಲು ಯೋಜಿಸಿದ್ದರು

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು
 
4th T10 • ABDT10
YASLYASL
Sun, 8 Nov, 2026
EEEE
05:00 pm
Match yet to begin.
Schedule ›
5th T10 • ABDT10
UNTUNT
Sun, 8 Nov, 2026
UABUAB
07:15 pm
Match yet to begin.
Schedule ›
6th T10 • ABDT10
ARACARAC
Sun, 8 Nov, 2026
RDCRDC
09:30 pm
Match yet to begin.
Schedule ›
3rd T10 • ABDT10
Result
UNTUNT
140/6
ARACARAC
89/9
United Tigers beat Arabian Aces by 51 runs
Schedule ›
2nd T10 • ABDT10
Result
RDCRDC
109/7
EEEE
125/2
Emirates Eagles beat Royal Desert Champions by 16 runs
Schedule ›
1st T10 • ABDT10
Result
UABUAB
121/3
YASLYASL
120/3
UAE Bulls beat Yas Lions by 7 wickets
Schedule ›
2nd ODI • NZ vs IND 2026
Result
NZNZ
134
INDIND
113/7
IND won by 4 runs (DLS method)
Schedule ›
1st TEST • PAK vs SL 2026
PAKPAK
Mon, 9 Nov, 2026
SLSL
10:00 am
Match yet to begin.
Schedule ›
7th T10 • ABDT10
EEEE
Mon, 9 Nov, 2026
ARACARAC
07:15 pm
Match yet to begin.
Schedule ›
8th T10 • ABDT10
UNTUNT
Mon, 9 Nov, 2026
RDCRDC
09:30 pm
Match yet to begin.
Schedule ›
1st ODI • NZ vs IND 2026
Result
NZNZ
185
INDIND
143/5
IND beat NZ by 5 wickets (D/L) method
Schedule ›
3rd ODI • NZ vs IND 2026
NZNZ
Tue, 10 Nov, 2026
INDIND
07:30 am
Match yet to begin.
Schedule ›
9th T10 • ABDT10
YASLYASL
Tue, 10 Nov, 2026
UNTUNT
07:15 pm
Match yet to begin.
Schedule ›
12th T10 • ABDT10
ARACARAC
Wed, 11 Nov, 2026
YASLYASL
09:30 pm
Match yet to begin.
Schedule ›
1st ODI • AUS vs ENG 2026
AUSAUS
Thu, 12 Nov, 2026
ENGENG
09:00 am
Match yet to begin.
Schedule ›
4th ODI • NZ vs IND 2026
NZNZ
Fri, 13 Nov, 2026
INDIND
07:30 am
Match yet to begin.
Schedule ›
5th ODI • NZ vs IND 2026
NZNZ
Sun, 15 Nov, 2026
INDIND
07:30 am
Match yet to begin.
Schedule ›
2nd ODI • AUS vs ENG 2026
AUSAUS
Sun, 15 Nov, 2026
ENGENG
09:00 am
Match yet to begin.
Schedule ›
2nd TEST • SL vs PAK 2026
PAKPAK
Tue, 17 Nov, 2026
SLSL
10:30 am
Match yet to begin.
Schedule ›
Latest Videos
Recommended Stories
Recommended image1
Kolar: ಕಾಂಗ್ರೆಸ್ ಶಾಸಕರಿಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್, ED ದಾಖಲಿಸಿದ್ದ ಪ್ರಕರಣ ರದ್ದು
Recommended image2
Bengaluru ನಿಂದ ಹೊರಡಬೇಕಿದ್ದ ಇಂಡಿಗೋ ವಿಮಾನಕ್ಕೆ ಹೈಜಾಕ್ ಬೆದರಿಕೆ; ತೀವ್ರ ಆತಂಕ, ಭದ್ರತಾ ತಪಾಸಣೆ!
Recommended image3
ಕರುನಾಡ ಸಾಧಕರಿಗೆ 'ಪುನೀತ್ ರಾಜ್‌ಕುಮಾರ್ ಪ್ರಶಸ್ತಿ' ಗರಿ: ಕನ್ನಡ ನವೆಂಬರ್ ಆಚರಣೆಯಾಗದೆ ನಿತ್ಯೋತ್ಸವವಾಗಲಿ-ನಾಗಾಭರಣ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved