ಉತ್ತರ ಕರ್ನಾಟಕದಲ್ಲಿ ಪ್ರವಾಹ ತಂದ ಸಂಕಷ್ಟ: ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಯಡಿಯೂರಪ್ಪ
ಕಲಬುರಗಿ/ವಿಜಯಪುರ (ಅ.21): ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕಲಬುರಗಿ, ವಿಜಯಪುರ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿತ್ತು. ಈ ಭಾಗದ ಪ್ರಮುಖ ನದಿಗಳಾದ ಕೃಷ್ಣಾ, ಭೀಮಾ ನದಿಗಳು ಉಕ್ಕಿ ಹರಿದಿದ್ದರಿಂದ ಸಾಕಷ್ಟು ಗ್ರಾಮಗಳು ಹಾಗೂ ನೂರಾರು ಎಕರೆ ಪ್ರದೇಶಗಳಲ್ಲಿ ಬೆಳೆದಿದ್ದ ಬೆಳೆ ನೀರು ಪಾಲಾಗಿತ್ತು. ಹೀಗಾಗಿ ಇಂದು(ಬುಧವಾರ) ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಇಂದು ಬೆಳಿಗ್ಗೆ ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರಿಗೆ ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಹಾಗೂ ಜಿಲ್ಲಾಡಳಿತದ ವತಿಯಿಂದ ಸ್ವಾಗತ
ಕಲಬುರಗಿ, ವಿಜಯಪುರ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಳ್ಳಲು ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡ ಸಿಎಂ
ಹಾನಿಯಾದ ಪ್ರದೇಶಗಳ ಬಗ್ಗೆ ಸಿಎಂಗೆ ವಿವರವಾದ ಮಾಹಿತಿ ನೀಡಿದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್
ಭಾರೀ ಪ್ರವಾಹಕ್ಕೆ ನಲುಗಿದ ಕಲಬುರಗಿ, ವಿಜಯಪುರ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಭಾರೀ ಪ್ರವಾಹ
ಸಿಎಂ ಯಡಿಯೂರಪ್ಪ ಅವರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.