MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸುವ ಬಗ್ಗೆ ಚರ್ಚೆಯೇ ಆಗಿಲ್ಲ, ಸುಮಲತಾಗೆ ಮುಂದೆ ಒಳ್ಳೆಯ ಸ್ಥಾನಮಾನ: ವಿಜಯೇಂದ್ರ

ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸುವ ಬಗ್ಗೆ ಚರ್ಚೆಯೇ ಆಗಿಲ್ಲ, ಸುಮಲತಾಗೆ ಮುಂದೆ ಒಳ್ಳೆಯ ಸ್ಥಾನಮಾನ: ವಿಜಯೇಂದ್ರ

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳ ಅಭ್ಯರ್ಥಿ ಆಯ್ಕೆಯು ಸಂಪೂರ್ಣವಾಗಿ ಹೈಕಮಾಂಡ್ ನಿರ್ಧಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ದೇವೇಗೌಡರ ಸ್ಪರ್ಧೆ ಹಾಗೂ ಸುಮಲತಾ ಅವರಿಗೆ ಟಿಕೆಟ್ ತಪ್ಪಿದ ಬಗ್ಗೆ ಮಾತನಾಡಿ ವರಿಷ್ಠರ ತೀರ್ಮಾನವನ್ನು ಸಮರ್ಥಿಸಿಕೊಂಡಿದ್ದಾರೆ.

2 Min read
Author : Gowthami K
Published : Jun 08 2026, 01:36 PM IST
Share this Photo Gallery
  • FB
  • TW
  • Linkdin
  • Whatsapp
14
ಆಯ್ಕೆ ಪ್ರಕ್ರಿಯೆ ಸಂಪೂರ್ಣವಾಗಿ ಹೈಕಮಾಂಡ್ ಮಟ್ಟದಲ್ಲೇ ನಡೆದಿದೆ
Image Credit : ANI

ಆಯ್ಕೆ ಪ್ರಕ್ರಿಯೆ ಸಂಪೂರ್ಣವಾಗಿ ಹೈಕಮಾಂಡ್ ಮಟ್ಟದಲ್ಲೇ ನಡೆದಿದೆ

ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಸಂಪೂರ್ಣವಾಗಿ ಹೈಕಮಾಂಡ್ ಮಟ್ಟದಲ್ಲೇ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಕುರಿತು ಅಥವಾ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ನೀಡುವ ವಿಚಾರವಾಗಿ ರಾಜ್ಯ ಮಟ್ಟದಲ್ಲಿ ನಡೆದ ಚರ್ಚೆಗಳು ಹಾಗೂ ಹೈಕಮಾಂಡ್ ತಗೆದುಕೊಂಡ ಅಂತಿಮ ತೀರ್ಮಾನಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ದೇವೇಗೌಡರ ಬಗ್ಗೆ ಗೌರವವಿದೆ, ಆದರೆ ರಾಜ್ಯ ಮಟ್ಟದಲ್ಲಿ ಚರ್ಚೆಯಾಗಿರಲಿಲ್ಲ!
Image Credit : Asianet News

ದೇವೇಗೌಡರ ಬಗ್ಗೆ ಗೌರವವಿದೆ, ಆದರೆ ರಾಜ್ಯ ಮಟ್ಟದಲ್ಲಿ ಚರ್ಚೆಯಾಗಿರಲಿಲ್ಲ!

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಎನ್‌ಡಿಎ (NDA) ಜಂಟಿ ಅಭ್ಯರ್ಥಿಯಾಗಿ ರಾಜ್ಯಸಭೆ ಕಣಕ್ಕಿಳಿಯದ ವಿಚಾರವಾಗಿ ಉದ್ಭವಿಸಿರುವ ಪ್ರಶ್ನೆಗಳಿಗೆ ಉತ್ತರಿಸಿದ ವಿಜಯೇಂದ್ರ, ಈ ವಿಷಯದಲ್ಲಿ ಹೈಕಮಾಂಡ್ ನೇರ ನಿರ್ಧಾರ ಕೈಗೊಂಡಿದೆ ಎಂದರು. ಎಚ್.ಡಿ. ದೇವೇಗೌಡರು ದೇಶದ ಅತ್ಯಂತ ಹಿರಿಯ ನಾಯಕರು ಹಾಗೂ ಮಾಜಿ ಪ್ರಧಾನಿಗಳು. ಅವರ ಬಗ್ಗೆ ನಮಗೆ ಮತ್ತು ಇಡೀ ರಾಜ್ಯಕ್ಕೆ ಅಪಾರ ಗೌರವವಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಕೆಲಸವನ್ನು ಅವರು ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ. ಆದರೆ, ಈ ಬಾರಿ ಅವರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸುವ ಕುರಿತು ರಾಜ್ಯ ಮಟ್ಟದ ಕೋರ್ ಕಮಿಟಿಯಲ್ಲಾಗಲಿ ಅಥವಾ ಸ್ಥಳೀಯ ನಾಯಕರ ಮಟ್ಟದಲ್ಲಾಗಲಿ ಯಾವುದೇ ಚರ್ಚೆಗಳು ನಡೆದಿರಲಿಲ್ಲ. ವರಿಷ್ಠರೇ ಈ ಬಗ್ಗೆ ನೇರ ತೀರ್ಮಾನ ಕೈಗೊಂಡಿದ್ದಾರೆ.

Related Articles

Related image1
ವಿಧಾನ ಪರಿಷತ್ ಚುನಾವಣೆ: 5ನೇ ಸ್ಥಾನ ಗೆಲ್ಲಲು ಕಾಂಗ್ರೆಸ್‌ನಿಂದ ನಿಗೂಢ ದಾಳ, 2 ಮತಗಳ ಕೊರತೆ
Related image2
ಕಮಲ ಪಾಳಯದಿಂದ ಅಚ್ಚರಿಯ ನಡೆ: ರಾಜ್ಯಸಭೆ, ವಿಧಾನ ಪರಿಷತ್ತಿನ ಚುನಾವಣೆಗೆ ಹೊಸ ಮುಖಗಳು
34
ಟಿಕೆಟ್ ವಂಚಿತ ಸುಮಲತಾ ಅಂಬರೀಶ್ ಬಗ್ಗೆ ಏನಂದ್ರು
Image Credit : Asianet News

ಟಿಕೆಟ್ ವಂಚಿತ ಸುಮಲತಾ ಅಂಬರೀಶ್ ಬಗ್ಗೆ ಏನಂದ್ರು

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರಿಗಾಗಿ ಬಿಟ್ಟುಕೊಟ್ಟಿದ್ದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಸಿಗಬಹುದು ಎಂಬ ಬಲವಾದ ನಿರೀಕ್ಷೆಯಿತ್ತು. ಆದರೆ ಈ ಬಾರಿಯೂ ನಿರೀಕ್ಷೆ ಹುಸಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಸುಮಲತಾ ಅವರ ತ್ಯಾಗವನ್ನು ಪಕ್ಷ ಮರೆತಿಲ್ಲ ಎಂಬ ಭರವಸೆ ನೀಡಿದರು. 2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರು ಪಕ್ಷೇತರವಾಗಿ ಸ್ಪರ್ಧಿಸಿದಾಗ ಬಿಜೆಪಿ ಅವರಿಗೆ ಸಂಪೂರ್ಣ ಬೆಂಬಲ ನೀಡಿತ್ತು. ತದನಂತರ ಅವರು ಬಿಜೆಪಿಯನ್ನು ಅಧಿಕೃತವಾಗಿ ಬೆಂಬಲಿಸಿದರು. ಕಳೆದ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ಮೈತ್ರಿ ಧರ್ಮಕ್ಕಾಗಿ ಬಿಟ್ಟುಕೊಟ್ಟಿದ್ದೂ ಕೂಡ ಪಕ್ಷದ ಗಮನದಲ್ಲಿದೆ. ಸುಮಲತಾ ಅವರ ಹೆಸರು ಕೂಡಾ ಪ್ರಸ್ತಾಪ ಅಗಿತ್ತು. ಆದರೆ ಇಂದಿನ ರಾಜಕೀಯ ಸ್ಥಿತಿ ಗಮನದಲ್ಲಿಟ್ಟುಕೊಂಡು ವರಿಷ್ಠರು ತೀರ್ಮಾನ ಮಾಡಿದ್ದಾರೆ ಆದರೆ ಇಲ್ಲಿಗೇ ಎಲ್ಲವೂ ಮುಗಿದಿಲ್ಲ. ಸುಮಲತಾ ಅವರಿಗೆ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಪಕ್ಷದಲ್ಲಿ ಅತ್ಯಂತ ಸೂಕ್ತ ಹಾಗೂ ಗೌರವಯುತ ಸ್ಥಾನಮಾನ ಸಿಗಲಿದೆ ಎಂಬ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ವಿಜಯೇಂದ್ರ ತಿಳಿಸಿದರು.

44
ಸಾಮಾಜಿಕ ನ್ಯಾಯದ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ: ಎಲ್ಲರಿಗೂ ಸಂತೋಷ ತಂದಿದೆ
Image Credit : our own

ಸಾಮಾಜಿಕ ನ್ಯಾಯದ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ: ಎಲ್ಲರಿಗೂ ಸಂತೋಷ ತಂದಿದೆ

ಇದೇ ಸಂದರ್ಭದಲ್ಲಿ ಹೈಕಮಾಂಡ್ ಪ್ರಕಟಿಸಿರುವ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಅಭ್ಯರ್ಥಿಗಳ ಪಟ್ಟಿಯನ್ನು ಬಿ.ವೈ. ವಿಜಯೇಂದ್ರ ಅವರು ಮುಕ್ತಕಂಠದಿಂದ ಶ್ಲಾಘಿಸಿದರು. ರಾಜ್ಯಸಭೆ ಮತ್ತು ವಿಧಾನ ಪರಿಷತ್ ಸ್ಥಾನಗಳಿಗೆ ವರಿಷ್ಠರು ಹೆಸರು ಘೋಷಣೆ ಮಾಡಿದ್ದಾರೆ. ರಾಜ್ಯಸಭೆಗೆ ಕುರುಬ ಸಮುದಾಯದ ನಾಗರಾಜ್ ಅವರನ್ನು ಅಯ್ಕೆ ಮಾಡಲಾಗಿದೆ. ವಿಧಾನ ಪರಿಷತ್ ಗೆ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಮಡಿವಾಳ ಸಮುದಾಯದ ರಘು ಕೌಟಿಲ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಅಭ್ಯರ್ಥಿಗಳ ಆಯ್ಕೆ ಎಲ್ಲರಿಗೂ ಸಂತೋಷ ತಂದಿದೆ ವರಿಷ್ಠರ ಈ ನಡೆ ಪಕ್ಷದ ಎಲ್ಲ ನಾಯಕರು ಹಾಗೂ ಕಾರ್ಯಕರ್ತರಲ್ಲಿ ತೀವ್ರ ಸಂತಸ ಮೂಡಿಸಿದೆ ಎಂದು ಅವರು ಹೇಳಿದರು.

ವಿಶೇಷವಾಗಿ ಹಿಂದುಳಿದ ಮಡಿವಾಳ ಸಮುದಾಯದ ಅತ್ಯಂತ ಸಕ್ರಿಯ ನಾಯಕರಾದ ರಘು ಕೌಟಿಲ್ಯ ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡಿರುವುದು ಪಕ್ಷದ ಸಾಮಾಜಿಕ ನ್ಯಾಯದ ಬದ್ಧತೆಯನ್ನು ತೋರಿಸುತ್ತದೆ. ಒಟ್ಟಾರೆಯಾಗಿ, ವರಿಷ್ಠರು ಇಂದಿನ ರಾಜಕೀಯ ಸ್ಥಿತ್ಯಂತರಗಳು ಹಾಗೂ ಸಮುದಾಯಗಳ ಸಮತೋಲನವನ್ನು ಅತ್ಯಂತ ಜಾಣ್ಮೆಯಿಂದ ನಿಭಾಯಿಸಿ ಈ ತೀರ್ಮಾನ ಪ್ರಕಟಿಸಿದ್ದಾರೆ ಎಂದು ವಿಜಯೇಂದ್ರ ಸಮರ್ಥಿಸಿಕೊಂಡರು.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಎಚ್‌.ಡಿ. ದೇವೇಗೌಡ
ಬಿ. ವೈ. ವಿಜಯೇಂದ್ರ
ಸುಮಲತಾ ಅಂಬರೀಶ್
ಕರ್ನಾಟಕ ಸುದ್ದಿ
Latest Videos
Recommended Stories
Recommended image1
ಬೆಂಗಳೂರು ಯುವಕನಿಂದ ₹35 ಲಕ್ಷ ದೋಚಿದ ಮ್ಯಾಟ್ರಿಮೋನಿಯಲ್ ಮಾಯಾಂಗನೆ! ಸೈಬರ್ ಠಾಣೆಯಲ್ಲಿ ಲಕ್ಷ್ಮಿ ವಿರುದ್ದ ದೂರು
Recommended image2
ಅನೈತಿಕತೆಗೆ ಅಡ್ಡಿಯಾಗಿದ್ದ 5 ವರ್ಷದ ಮಗು ಕೊಂದ ತಾಯಿ -ಪ್ರಿಯಕರ, ಕೊಲೆಯಾದ ಬಳಿಕ ಬೆಂಗಳೂರು ದೇವಸ್ಥಾನಕ್ಕೆ ಭೇಟಿ!
Recommended image3
ಹಣ ಎಲ್ಲಿಗೆ ಹೋಗುತ್ತೆ? ತಿಂಗ್ಳಿಗೆ ಮನೆ ಖರ್ಚೆ 1.66 ಲಕ್ಷ ! ಬೆಂಗಳೂರು ಫ್ಯಾಮಿಲಿಯ ಬಜೆಟ್ ಲಿಸ್ಟ್ ವೈರಲ್
Related Stories
Recommended image1
ವಿಧಾನ ಪರಿಷತ್ ಚುನಾವಣೆ: 5ನೇ ಸ್ಥಾನ ಗೆಲ್ಲಲು ಕಾಂಗ್ರೆಸ್‌ನಿಂದ ನಿಗೂಢ ದಾಳ, 2 ಮತಗಳ ಕೊರತೆ
Recommended image2
ಕಮಲ ಪಾಳಯದಿಂದ ಅಚ್ಚರಿಯ ನಡೆ: ರಾಜ್ಯಸಭೆ, ವಿಧಾನ ಪರಿಷತ್ತಿನ ಚುನಾವಣೆಗೆ ಹೊಸ ಮುಖಗಳು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved