ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರ್; ಕ್ಷಣಾರ್ಧದಲ್ಲಿ ಉರಿದು ಬೂದಿ; ಓರ್ವ ಸಾವು
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ, ವಾಹನವೊಂದನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದೆ. ಈ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಕಾರ್ ಅಪಘಾತ
ವಾಹನವೊಂದನ್ನು ಓವರ್‌ಟೇಕ್ ಮಾಡಲು ಹೋಗಿ ಡಿವೈಡರ್‌ಗೆ ಕಾರ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಓರ್ವನ ಸಾವು ಆಗಿದೆ.
ಡಿವೈಡರ್‌ಗೆ ಡಿಕ್ಕಿ
ಚಾಲಕನ ನಿಯಂತ್ರಣ ತಪ್ಪಿದ ಐ-20 ಕಾರ್ ರಸ್ತೆ ಮಧ್ಯದಲ್ಲಿರುವ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತಕ್ಕೊಳಗಾದ ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರ ಪೈಕಿ ಓರ್ವನ ಸಾವು ಆಗಿದೆ. 30 ವರ್ಷದ ಯುವಕನ ಸಾವು ಆಗಿದ್ದು, ಹೆಸರು ತಿಳಿದು ಬಂದಿಲ್ಲ. ಅಪಘಾತಕ್ಕೆ ಅತಿಯಾದ ವೇಗವೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ವೇಗವಾಗಿ ಚಲಿಸುತ್ತಿದ್ದ ಐ-20 ಕಾರು
ವೇಗವಾಗಿ ಚಲಿಸುತ್ತಿದ್ದ ಐ-20 ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರ್, ರಸ್ತೆಯಲ್ಲಿದ್ದ ಕಂಬಕ್ಕೆ ಡಿಕ್ಕಿಯಾಗಿದೆ. ನಂತರ ಡಿವೈಡರ್‌ಗೂ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ನುಗ್ಗಿ ಪಲ್ಟಿಯಾಗಿದೆ.
ಇಬ್ಬರ ರಕ್ಷಣೆ
ಈ ವೇಳೆ ಕಾರ್‌ನಲ್ಲಿದ್ದ ಓರ್ವ ಹೊರಗೆ ಬಿದ್ದು ಗಾಯಗೊಂಡಿದ್ದಾರೆ. ಕಾರ್ ನಲ್ಲಿ ಸಿಲುಕಿದ್ದ ಇಬ್ಬರಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಇಬ್ಬರು ಗಾಯಾಳಗಳನ್ನು ರಕ್ಷಿಸಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಯುವತಿಯ ಅಶ್ಲೀಲ ವಿಡಿಯೋ ನೋಡಿ ನಿಯಂತ್ರಣ ತಪ್ಪಿದ ಟ್ರಕ್, ಭೀಕರ ಅಪಘಾತದಲ್ಲಿ ಓರ್ವ ಸಾವು
ಬೆಂಕಿಗಾಹುತಿ
ಅಪಘಾತದ ತೀವ್ರತೆಗೆ ಕಾರ್ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗಾಯಾಳುಗಳನ್ನು ನವೀನ್ ಮತ್ತು ಪವನ್ ಎಂದು ಗುರುತಿಸಲಾಗಿದೆ. ಮೃತ ಯುವಕ ಹಾರನಹಳ್ಳಿ ಮೂಲದವನು ಎಂದು ತಿಳಿದು ಬಂದಿದ್ದು, ಶವವನ್ನು ಅರಸೀಕರೆ ತಾಲೂಕು ಆಸ್ಪತ್ರೆಯ ಶವಾಗರದಲ್ಲಿ ಇರಿಸಲಾಗಿದೆ.
ಇದನ್ನೂ ಓದಿ: Amaran ಹೀರೋ ಶಿವಕಾರ್ತಿಕೇಯನ್ ಕಾರ್ ಅಪಘಾತ; ಚೆನ್ನೈ ರಸ್ತೆಯಲ್ಲಿ ಟ್ರಾಫಿಕ್ ಜಾಮ್

