MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ದೊಡ್ಡದಾಗಿ ಮದ್ವೆ ಮಾಡ್ಕೋತೀರಿ ₹10 ಸಾವಿರ ಕೊಡೋ ಯೋಗ್ಯತೆ ಇಲ್ವಾ? ಮದುವೆ ಮಂಟಪದಲ್ಲಿ ಮಂಗಳಮುಖಿಯರ ರಂಪಾಟ!

ದೊಡ್ಡದಾಗಿ ಮದ್ವೆ ಮಾಡ್ಕೋತೀರಿ ₹10 ಸಾವಿರ ಕೊಡೋ ಯೋಗ್ಯತೆ ಇಲ್ವಾ? ಮದುವೆ ಮಂಟಪದಲ್ಲಿ ಮಂಗಳಮುಖಿಯರ ರಂಪಾಟ!

ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ನುಗ್ಗಿದ ಇಬ್ಬರು ಮಂಗಳಮುಖಿಯರು, ₹10,000 ಹಣಕ್ಕಾಗಿ ಪಟ್ಟು ಹಿಡಿದು ವಧು-ವರರ ಮುಂದೆಯೇ ರಂಪಾಟ ನಡೆಸಿದ್ದಾರೆ. ಅಸಭ್ಯವಾಗಿ ವರ್ತಿಸಿ, ಪ್ರಶ್ನಿಸಿದವರಿಗೆ ಬೆದರಿಕೆ ಹಾಕಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

1 Min read
Author : Sathish Kumar KH
Published : Feb 11 2026, 03:55 PM IST
Share this Photo Gallery
  • FB
  • TW
  • Linkdin
  • Whatsapp
15
ಮಂಗಳಮುಖಿಯರು ಹಣಕ್ಕಾಗಿ ರಂಪಾಟ
Image Credit : Asianet News

ಮಂಗಳಮುಖಿಯರು ಹಣಕ್ಕಾಗಿ ರಂಪಾಟ

ಚಿಕ್ಕಮಗಳೂರು (ಫೆ.11): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮದುವೆ ಮನೆಯೊಂದಕ್ಕೆ ನುಗ್ಗಿದ ಮಂಗಳಮುಖಿಯರು ಹಣಕ್ಕಾಗಿ ರಂಪಾಟ ನಡೆಸಿ, ಮದುವೆಯ ಸಂಭ್ರಮವನ್ನೇ ಕೆಡಿಸಿರುವ ಘಟನೆ ನಡೆದಿದೆ. ಕೇವಲ ಹಣಕ್ಕಾಗಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಮಂಗಳಮುಖಿಯರ ನಡೆಗೆ ಮದುವೆಗೆ ಬಂದಿದ್ದ ಅತಿಥಿಗಳು ಹಾಗೂ ವಧು-ವರರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

25
ಘಟನೆಯ ವಿವರ
Image Credit : Asianet News

ಘಟನೆಯ ವಿವರ

ಚಿಕ್ಕಮಗಳೂರು ನಗರದ ಪ್ರಸಿದ್ಧ ರಂಗಣ್ಣನ ಛತ್ರದಲ್ಲಿ ಇಂದು ವಿಜೃಂಭಣೆಯಿಂದ ಮದುವೆ ಸಮಾರಂಭ ನಡೆಯುತ್ತಿತ್ತು. ಹಸೆಮಣೆ ಏರಿದ್ದ ವಧು-ವರರಿಗೆ ಅತಿಥಿಗಳು ಶುಭ ಹಾರೈಸುತ್ತಿದ್ದ ವೇಳೆ ಇಬ್ಬರು ಮಂಗಳಮುಖಿಯರು ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸಂಪ್ರದಾಯದಂತೆ ಮದುವೆ ಮನೆಯವರು ಅವರಿಗೆ 500 ರೂಪಾಯಿ ಹಣ ನೀಡಲು ಮುಂದಾಗಿದ್ದಾರೆ. ಆದರೆ, 500 ರೂಪಾಯಿ ಪಡೆಯಲು ನಿರಾಕರಿಸಿದ ಮಂಗಳಮುಖಿಯರು, ಬರೋಬ್ಬರಿ 10,000 ರೂಪಾಯಿ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

Related Articles

Related image1
ಟೀ ಅಂಗಡಿಯಲ್ಲಿ ಕೆಲಸದಲ್ಲಿದ್ದ ಯುವಕನಿಗೆ ಇಂಜೆಕ್ಷನ್ ನೀಡಿ ಲಿಂಗ ಪರಿವರ್ತಿಸಿ ಭಿಕ್ಷಾಟನೆಗೆ ದೂಡಿದ ಮಂಗಳಮುಖಿಯರು!
Related image2
ಚಿಕ್ಕಮಗಳೂರು: ರಾಟ್‌ವೀಲರ್ ನಾಯಿ vs ನಾಗರಹಾವು ಮಧ್ಯೆ ಭೀಕರ ಕಾಳಗ, ಹಾವು ಕೊಂದು ಪ್ರಾಣಬಿಟ್ಟ ಶ್ವಾನ! ಹಾವಿಗೆ ಶಾಸ್ತ್ರೋಕ್ತ ಅಂತ್ಯಸಂಸ್ಕಾರ
35
ವಧು-ವರರ ಮುಂದೆಯೇ ರಂಪಾಟ
Image Credit : Asianet News

ವಧು-ವರರ ಮುಂದೆಯೇ ರಂಪಾಟ

ಮದುವೆ ಮನೆಯವರು ಅಷ್ಟು ದೊಡ್ಡ ಮೊತ್ತ ನೀಡಲು ನಿರಾಕರಿಸಿದಾಗ, ಮಂಗಳಮುಖಿಯರು ಮಂಟಪದ ಮೇಲೆಯೇ ರಂಪಾಟ ಆರಂಭಿಸಿದ್ದಾರೆ. ವಧು-ವರರ ಮುಂದೆಯೇ ಅಸಭ್ಯವಾಗಿ ವರ್ತಿಸಿ, ಜೋರಾಗಿ ಕಿರುಚಾಡಿದ್ದಾರೆ. 'ನಿಮಗೆ ಹಣ ಕೊಡೋ ಯೋಗ್ಯತೆ ಇಲ್ವಾ?' ಎಂದು ಮನೆಯವರನ್ನು ಏಕವಚನದಲ್ಲೇ ನಿಂದಿಸಿದ್ದಾರೆ. ಮಂಗಳಮುಖಿಯರ ಈ ಹಠಾತ್ ವರ್ತನೆಯಿಂದ ಮದುವೆಗೆ ಬಂದಿದ್ದ ಹೆಣ್ಣುಮಕ್ಕಳು ಹಾಗೂ ಹಿರಿಯರು ಮುಜುಗರಕ್ಕೊಳಗಾದರು.

45
ಪ್ರಶ್ನೆ ಮಾಡಿದವರಿಗೆ ಬೆದರಿಕೆ
Image Credit : Asianet News

ಪ್ರಶ್ನೆ ಮಾಡಿದವರಿಗೆ ಬೆದರಿಕೆ

ಮಂಗಳಮುಖಿಯರ ಈ ಅಸಭ್ಯ ವರ್ತನೆಯನ್ನು ಕಂಡು ಅಲ್ಲಿದ್ದ ಕೆಲವರು ಪ್ರಶ್ನೆ ಮಾಡಲು ಮುಂದಾದಾಗ, ಅವರ ವಿರುದ್ಧವೂ ಕಿಡಿಕಾರಿದ್ದಾರೆ. 'ದಮ್ಮಿದ್ದರೆ ಹೊರಗೆ ಬಾ, ನಿನ್ನನ್ನು ನೋಡಿಕೊಳ್ಳುತ್ತೇವೆ' ಎಂದು ಸಾರ್ವಜನಿಕವಾಗಿ ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈಯುತ್ತಾ ಮದುವೆ ಮಂಟಪದಲ್ಲಿ ಗದ್ದಲ ಸೃಷ್ಟಿಸಿದ್ದರಿಂದ, ಮಂಗಳವಾದ್ಯದ ಸದ್ದಿಗಿಂತ ಮಂಗಳಮುಖಿಯರ ಕಿರುಚಾಟವೇ ಹೆಚ್ಚಾಗಿತ್ತು. ಇದರಿಂದಾಗಿ ಸಂಭ್ರಮದಿಂದ ನಡೆಯಬೇಕಿದ್ದ ಮದುವೆ ಕಾರ್ಯಕ್ರಮ ಕೆಲಕಾಲ ಸ್ಥಗಿತಗೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು.

55
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
Image Credit : Asianet News

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಮದುವೆ ಅಥವಾ ಶುಭ ಸಮಾರಂಭಗಳಲ್ಲಿ ಮಂಗಳಮುಖಿಯರು ಬಂದು ಹರಸುವುದು ವಾಡಿಕೆ. ಆದರೆ, ಇತ್ತೀಚಿನ ದಿನಗಳಲ್ಲಿ ಹಣಕ್ಕಾಗಿ ಈ ರೀತಿ ದಬ್ಬಾಳಿಕೆ ನಡೆಸುವುದು ಮತ್ತು ಸಾರ್ವಜನಿಕವಾಗಿ ಅವಮಾನ ಮಾಡುವುದು ಹೆಚ್ಚಾಗುತ್ತಿದೆ. ಚಿಕ್ಕಮಗಳೂರಿನ ಈ ಘಟನೆಯ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಇಂತಹ ಕಿರುಕುಳದ ವಿರುದ್ಧ ಪೊಲೀಸ್ ಕ್ರಮಕ್ಕೆ ಒತ್ತಾಯಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಚಿಕ್ಕಮಗಳೂರು
ತೃತೀಯ ಲಿಂಗಿಗಳು

Latest Videos
Recommended Stories
Recommended image1
2028ರವರೆಗೂ ಸಿದ್ದರಾಮಯ್ಯ ಫಿಕ್ಸ್: ಆಮೇಲೆ ಬೀದಿ ದಾಸಯ್ಯನ್ನ ಸಿಎಂ ಮಾಡಿದ್ರೂ ಒಕೆ' ಜಮೀರ್ ಸ್ಫೋಟಕ ಹೇಳಿಕೆ!
Recommended image2
ಮಂಗಳೂರು:ಮೊಹಮ್ಮದ್ ಜೊತೆ ವೈಶಾಲಿ ರನ್ನಿಂಗ್ ಮದುವೆ, ವಿದೇಶದಿಂದ ಓಡೋಡಿ ಬಂದ ತಂದೆ, ಮಗಳೊಂದಿಗೆ ಮಾತಾಡಿಲ್ಲವೆಂದು ಗೋಳಾಟ
Recommended image3
ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
Related Stories
Recommended image1
ಟೀ ಅಂಗಡಿಯಲ್ಲಿ ಕೆಲಸದಲ್ಲಿದ್ದ ಯುವಕನಿಗೆ ಇಂಜೆಕ್ಷನ್ ನೀಡಿ ಲಿಂಗ ಪರಿವರ್ತಿಸಿ ಭಿಕ್ಷಾಟನೆಗೆ ದೂಡಿದ ಮಂಗಳಮುಖಿಯರು!
Recommended image2
ಚಿಕ್ಕಮಗಳೂರು: ರಾಟ್‌ವೀಲರ್ ನಾಯಿ vs ನಾಗರಹಾವು ಮಧ್ಯೆ ಭೀಕರ ಕಾಳಗ, ಹಾವು ಕೊಂದು ಪ್ರಾಣಬಿಟ್ಟ ಶ್ವಾನ! ಹಾವಿಗೆ ಶಾಸ್ತ್ರೋಕ್ತ ಅಂತ್ಯಸಂಸ್ಕಾರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved